ರೈತರು ಕೃಷಿ ಭಾಗ್ಯ ಯೋಜನೆ ಸೌಲಭ್ಯ ಸದುಪಯೋಗ ಪಡೆದುಕೊಳ್ಳಿ

koppal jda rudreshappa seeds fertilizer
Published on

ಕೊಪ್ಪಳ: 2024-25ನೇ ಸಾಲಿನಲ್ಲಿ ಕೃಷಿ ಭಾಗ್ಯ ಯೋಜನೆ ಅನುಷ್ಠಾನಗೊಂಡಿದ್ದು, ಜಿಲ್ಲೆಯ ರೈತರು ಯೋಜನೆಯಡಿ ಸದುಪಯೋಗ ಪಡೆದುಕೊಳ್ಳುವಂತೆ ಕೊಪ್ಪಳ ಜಂಟಿ ಕೃಷಿ ನಿರ್ದೇಶಕ ಟಿ.ಎಸ್​.ರುದ್ರೇಶಪ್ಪ ತಿಳಿಸಿದ್ದಾರೆ.

ರೈತರು ತಮ್ಮ ಜಮೀನುಗಳಲ್ಲಿ ಹೊಂಡಗಳನ್ನು ನಿರ್ಮಿಸಿಕೊಂಡು ಮಳೆ ನೀರನ್ನು ಸಂಗ್ರಹಿಸಿ ಬೆಳೆಗಳ ಸಂದಿಗ್ದ ಹಂತದಲ್ಲಿ ರಕ್ಷಣಾತ್ಮಕ ನೀರಾವರಿ ಒದಗಿಸುವುದು ಯೋಜನೆಯ ಉದ್ದೇಶವಾಗಿದೆ. ಪ್ರತಿಯೊಬ್ಬ ಫಲಾನುಭವಿಗೆ ವಿವಿಧ ಘಟಕಗಳನ್ನು ಕಡ್ಡಾಯವಾಗಿ ಅನುಫಿ್ಟಾನಮಾಡಲಾಗುವುದು.

ಕೃಷಿ ಭಾಗ್ಯ ಯೋಜನೆಯ ಘಟಕಗಳು: ಕ್ಷೇತ್ರಬದು ನಿಮಾರ್ಣ (ಸಾಮಾನ್ಯ ವರ್ಗ 80% ಸಹಾಯಧನ & ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ ವರ್ಗ 90%), ಕೃಷಿ ಹೊಂಡ (ಸಾಮಾನ್ಯ ವರ್ಗ 80% ಸಹಾಯಧನ & ಪರಿಶಿಷ್ಟಜಾತಿ / ಪರಿಶಿಷ್ಟ ಪಂಗಡ ವರ್ಗ 90%), ನೀರು ಇಂಗದಂತೆ ತಡೆಯಲು ಪಾಲಿಥೀನ್​ ಹೊದಿಕೆ (ಸಾಮಾನ್ಯ ವರ್ಗ 80% ಸಹಾಯಧನ & ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ವರ್ಗ 90%), ಕೃಷಿ ಹೊಂಡದ ಸುತ್ತಲೂ ತಂತಿ ಬೇಲಿ (ಸಾಮಾನ್ಯ ವರ್ಗ 40% ಸಹಾಯಧನ & ಪರಿಶಿಫ್ಟಿ ಜಾತಿ/ಪರಿಶಿಫ್ಟಿ ಪಂಗಡ ವರ್ಗ 50%), ಕೃಷಿ ಹೊಂಡದಿಂದ ನೀರು ಎತ್ತಲು ಡಿಸೇಲ್​ / ಪೇಟ್ರೋಲ್​ ಪಂಪ್ಸೆಟ್​ (ಸಾಮಾನ್ಯ ವರ್ಗ 80% ಸಹಾಯಧನ & ಪರಿಶಿಫ್ಟಿ ಜಾತಿ/ಪರಿಶಿಫ್ಟಿ ಪಂಗಡ ವರ್ಗ 90%), ನೀರನ್ನು ಬೆಳೆಗೆ ಹಾಯಿಸಲು ಸೂಕ್ಷ್ಮ (ತುಂತುರು/ಹನಿ) ನೀರಾವರಿ (ಎಲ್ಲಾ ವರ್ಗದ ರೈತರಿಗೆ 90%) ಸಹಾಯಧನ ಸೌಲಭ್ಯ ಸಿಗಲಿದೆ.

ರೈತ ಭಾಂದವರು ಸಂಬಂಧಪಟ್ಟ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿಯ ನಮೂನೆಗಳು ಸಮೀಪದ ರೈತ ಸಂಪರ್ಕ ಕೇಂದ್ರಗಳಲ್ಲಿ ಲಭ್ಯವಿರುತ್ತವೆ. ರೈತರು ಕನಿಷ್ಠ 1 ಎಕರೆ ಜಮೀನನ್ನು ಹೊಂದಿರಬೇಕು. ಈ ಯೋಜನೆಯನ್ನು ಜಿಲ್ಲೆಯ ರೈತರ ಅವಶ್ಯಕತೆಗನುಗುಣವಾಗಿ ಅಚ್ಚುಕಟ್ಟು ಪ್ರದೇಶವನ್ನು ಒಳಗೊಂಡಂತೆ ಕಾರ್ಯಕ್ರಮ ಅನುಷ್ಠಾನಗೊಳಿಸುವುದಾಗಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net