ವಿಘ್ನ ನಿವಾರಣೆಗೆ ಸಿಸಿ ಕ್ಯಾಮರಾ ಕಣ್ಗಾವಲು

koppal kustagi ganesh festival celebration
Published on

ಕೊಪ್ಪಳ : ಕುಷ್ಟಗಿ ಪಟ್ಟಣ ಸೇರಿದಂತೆ ತಾಲೂಕಿನಾದ್ಯಂತ ಗಣೇಶ ಚತುರ್ಥಿ ಸಂಭ್ರಮ ಮನೆ ಮಾಡಿದೆ. ಒಂದೆಡೆ ಗಣೇಶನ ಸ್ವಾಗತಕ್ಕೆ ಸಕಲ ಸಿದ್ಧತೆ ನಡೆದರೆ ಮತ್ತೊಂದೆಡೆ ಹಬ್ಬ ರ್ನಿವಿಘ್ನ ನಡೆಯಲು ಪಟ್ಟಣದ ವಿವಿಧೆಡೆ ಸಿಸಿ ಕ್ಯಾಮರಾ ಅಳವಡಿಸಲಾಗುತ್ತಿದೆ. ಆ ಮೂಲಕ ಮೂರ್ತಿಗಳ ಪ್ರತಿಷ್ಠಾಪನೆ ಹಾಗೂ ವಿಸರ್ಜಿನೆ ವರೆಗೆ ಸಾರ್ವಜನಿಕರ ಚಲನ-ವಲನಗಳ ಮೇಲೆ ನಿಗಾ ಇಡಲಾಗುತ್ತಿದೆ.

ಈ ವರೆಗೆ ಪಟ್ಟಣದ ವಿವಿಧ ವೃತ್ತ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಸಿಸಿ ಕ್ಯಾಮರಾಗಳು ಇರಲಿಲ್ಲ. ಅಪಘಾತ, ಕಳ್ಳತನ ಇನ್ನಿತರ ಅಹಿತಕರ ಘಟನೆಗಳ ಮೇಲೆ ನಿಗಾ ಇಡಲು ಸಿಸಿ ಕ್ಯಾಮರಾಗಳ ಅಗತ್ಯವಿದೆ ಎಂದು ಸಾರ್ವಜನಿಕರು ಒತ್ತಾಯಿಸುತ್ತಲೇ ಬಂದಿದ್ದಾರೆ. ಕ್ಯಾಮರಾ ಅಳವಡಿಸುವ ಸಂಬಂಧ ಟೆಂಡರ್​ ಪ್ರಕ್ರಿಯೆ ನಡೆದಿದೆ ಎಂದು ಹೇಳಲಾಗುತ್ತಿದೆ. ಸದ್ಯ ಹಬ್ಬದ ಸಂದರ್ಭದಲ್ಲಿ ಯಾವುದೇ ಗಲಾಟೆ ನಡೆಯದಿರಲಿ ಎಂಬ ಉದ್ದೇಶದಿಂದ ಮುಂಜಾಗೃತ ಕ್ರಮವಾಗಿ ಕ್ಯಾಮರಾ ಅಳವಡಿಸುವ ಕಾರ್ಯ ಭರದಿಂದ ಸಾಗಿದೆ.

ಪಟ್ಟಣದ ಬಸವೇಶ್ವರ, ಮಾರುತಿ, ಕನಕದಾಸ, ಟಿಪ್ಪು ಸುಲ್ತಾನ್​, ವಾಲ್ಮೀಕಿ ಹಾಗೂ ವೀರ ಯೋಧ ಮಲ್ಲಯ್ಯ ವೃತ್ತಗಳಲ್ಲಿ ಸಿಸಿ ಕ್ಯಾಮರಾ ಅಳವಡಿಸಲಾಗುತ್ತಿದೆ. ಗಣೇಶ ಹಬ್ಬದ ಹಿನ್ನೆಲೆ ಪಟ್ಟಣದ ಪ್ರಮುಖ ವೃತ್ತಗಳಲ್ಲಿ

ತಾತ್ಕಾಲಿಕವಾಗಿ ಸಿಸಿ ಕ್ಯಾಮರಾಗಳನ್ನು ಅಳವಡಿಸಲಾಗುತ್ತಿದೆ. ಪುರಸಭೆಯೇ ಕ್ಯಾಮರಾಗಳ ವೆಚ್ಚ ಭರಿಸಿ ನಿರ್ವಹಣೆ ಮಾಡಲಿದೆ ಎಂದು ಪಿಎಸ್​ಐ ಹನುಮಂತಪ್ಪ ತಳವಾರ್​ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net