ನಾಳೆಯಿಂದ ಲಾಕ್‌ಡೌನ್ ನಿಯಮ ಮತ್ತಷ್ಟು ಸಡಿಲಿಕೆ

20062021 Koppal Bus sanitize
Published on

ಕೊಪ್ಪಳ: ಕರೊನಾ ನಿಯಂತ್ರಣಕ್ಕೆ ಬಂದಿರುವ ಹಿನ್ನೆಲೆಯಲ್ಲಿ ಲಾಕ್‌ಡೌನ್ ನಿಯಮಗಳನ್ನು ಮತ್ತಷ್ಟು ಸಡಿಲಗೊಳಿಸಲಾಗಿದೆ. ಜೂ.21ರಿಂದ ಬಸ್‌ಗಳ ಸಂಚಾರ ಮರು ಆರಂಭವಾಗಲಿದೆ.

ಜಿಲ್ಲೆಯಲ್ಲಿ ರಾಜ್ಯ ಸರ್ಕಾರದ ಮಾರ್ಗಸೂಚಿಯನ್ನೇ ಜಾರಿಗೊಳಿಸಲಾಗುತ್ತಿದೆ. ಲಾಕ್‌ಡೌನ್ ಸಡಿಲಿಕೆ ಪರಿಷ್ಕೃತ ಮಾರ್ಗಸೂಚಿ ಜೂ.21ರಿಂದ ಮೇ 5ವರೆಗೆ ಜಾರಿಯಲ್ಲಿರಲಿದೆ. ಅಗತ್ಯ ವಸ್ತುಗಳು ಸೇರಿದಂತೆ ಇತರ ಸೇವೆಗಳಿಗೆ ಬೆಳಗ್ಗೆ 6ರಿಂದ ಸಂಜೆ 5ರವರೆಗೆ ಅವಕಾಶ ನೀಡಲಾಗಿದೆ. ಹೋಟೆಲ್, ರೆಸ್ಟೋರೆಂಟ್‌ಗಳನ್ನು ತೆರೆಯಲು ಅನುಮತಿ ನೀಡಲಾಗಿದೆ.

ಬಸ್‌ಗಳ ಸಂಚಾರ ಆರಂಭವಾಗುತ್ತಿರುವ ಕಾರಣಕ್ಕೆ ಭಾನುವಾರ ಜಿಲ್ಲೆಯ ಎಲ್ಲ ಬಸ್ ನಿಲ್ದಾಣ, ಬಸ್‌ಗಳನ್ನು ಸ್ಯಾನಿಟೈಸ್ ಮಾಡಲಾಯಿತು. ಬಸ್‌ಗಳಲ್ಲಿ ಗರಿಷ್ಠ ಶೇ.50 ಆಸನಗಳ ಭರ್ತಿಗೆ ಅವಕಾಶ ನೀಡಲಾಗಿದೆ. ಹೋಬಳಿ ಕೇಂದ್ರ, ಪಟ್ಟಣ ಪ್ರದೇಶ ಹಾಗೂ ಅಂತರ ಜಿಲ್ಲೆಗಳಿಗೆ ಬಸ್‌ಗಳು ಸಂಚರಿಸಲಿವೆ. ಆದರೆ, ಗ್ರಾಮೀಣ ಭಾಗಕ್ಕೆ ಬಸ್ ಸಂಚರಿಸುವುದಿಲ್ಲ. ಗ್ರಾಮೀಣ ಪ್ರದೇಶದ ಜನರು ಪ್ರಯಾಣಕ್ಕಾಗಿ ಖಾಸಗಿ ವಾಹನಗಳನ್ನು ಅವಲಂಬಿಸಬೇಕಿದೆ. ಆಟೋಗಳಲ್ಲಿ ಇಬ್ಬರು ಪ್ರಯಾಣಿಕರು ಸಂಚರಿಸಬಹುದು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net