ಸೇತುವೆ ಕಾಮಗಾರಿ ಸಮಸ್ಯೆ ಪರಿಹರಿಸಿ; ಹೋರಾಟ ಸಮಿತಿಯಿಂದ ಡಿಸಿಗೆ ಮನವಿ

22032021 Koppal Railway Gate Struggle Committee convenors
Published on

ಕೊಪ್ಪಳ: ನಗರದ ರೈಲ್ವೆ ಗೇಟ್ 63ರ ಕೆಳ ಸೇತುವೆ ಕಾಮಗಾರಿ ಅನುಷ್ಠಾನಕ್ಕೆ ಹಲವು ಸಮಸ್ಯೆಗಳು ಅಡ್ಡಿಯಾಗಿದ್ದು, ಅವುಗಳನ್ನು ತಕ್ಷಣವೇ ಪರಿಹರಿಸಬೇಕೆಂದು ಒತ್ತಾಯಿಸಿ ಹೋರಾಟ ಸಮಿತಿ ಸಂಚಾಲಕರು ಸೋಮವಾರ ಜಿಲ್ಲಾಧಿಕಾರಿ ಎಸ್.ವಿಕಾಸ್ ಕಿಶೋರ್‌ಗೆ ಮನವಿ ಸಲ್ಲಿಸಿದರು.

ಕೊಪ್ಪಳ ಸ್ವಾಮಿ ವಿವೇಕಾನಂದ ಶಾಲೆ ಹತ್ತಿರ ಇರುವ ರೈಲ್ವೆ ಗೇಟ್‌ಗೆ ಕೆಳ ಸೇತುವೆ ಮಂಜೂರಾಗಿ ವರ್ಷಗಳೇ ಕಳೆದಿವೆ. ಆದರೆ, ಕಾಮಗಾರಿ ಮಾತ್ರ ನಿರೀಕ್ಷಿತ ಮಟ್ಟದಲ್ಲಿ ಅನುಷ್ಠಾನವಾಗುತ್ತಿಲ್ಲ. ಭೂಸ್ವಾಧೀನ, ಚರಂಡಿ, ವಿದ್ಯುತ್ ಕಂಬಗಳ ಸ್ಥಳಾಂತರ ಸೇರಿ ನಾನಾ ಸಮಸ್ಯೆಗಳು ಎದುರಾಗಿವೆ. ಸಂಬಂಧಿಸಿದ ಅಧಿಕಾರಿಗಳು ಅವುಗಳನ್ನು ಪರಿಹರಿಸುತ್ತಿಲ್ಲ. ಇದರಿಂದ ಕಾಮಗಾರಿ ನನೆಗುದಿಗೆ ಬಿದ್ದಿದ್ದು, ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ ಎಂದು ಸಂಚಾಲಕರು ಆರೋಪಿಸಿದರು.

ಚರಂಡಿ ನಿರ್ಮಿಸುವ ಜಾಗದಲ್ಲಿ ಬಂಡೆಗಳಿದ್ದು, ಅವುಗಳನ್ನು ಸ್ಫೋಟಿಸಲು ಅನುಮತಿ ನೀಡಬೇಕು. ಅಲ್ಲದೇ ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸಬೇಕು. ನಿವೇಶನ ಮಾಲೀಕರಿಗೆ ಪರಿಹಾರ ವಿತರಿಸಬೇಕು. ಕಾಮಗಾರಿ ಬೇಗನೆ ಪೂರ್ಣಗೊಳಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಬೇಕು. ಸಾರ್ವಜನಿಕರು, ವಿದ್ಯಾರ್ಥಿಗಳ ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಡಬೇಕು ಎಂದು ಒತ್ತಾಯಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net