ಶಿಕ್ಷೆಗೆ ಗುರಿಯಾದ ವ್ಯಕ್ತಿ ಸಾವು

ramanna bhovi man died koppal court conviction
Published on

ಕೊಪ್ಪಳ : ಗಂಗಾವತಿ ತಾಲೂಕಿನ ಮರಕುಂಬಿ ಗ್ರಾಮದ ದಲಿತರ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಗುರುವಾರ ಶಿಕ್ಷೆಗೆ ಗುರಿಯಾಗಿದ್ದ ರಾಮಪ್ಪ ಭೋವಿ (40) ಶುಕ್ರವಾರ ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ.

ವಿವಿಧ ಕಾಯಿಲೆಗಳಿಂದ ಬಳಲುತ್ತಿದ್ದ ರಾಮಪ್ಪ ಅನಾರೋಗ್ಯಕ್ಕೀಡಾಗಿದ್ದ. ಮರಕುಂಬಿ ಗ್ರಾಮದಲ್ಲಿ ಹತ್ತು ವರ್ಷಗಳ ಹಿಂದೆ ನಡೆದಿದ್ದ ಜಾತಿ ಸಂಘರ್ಷ ಪ್ರಕರಣದಲ್ಲಿ ರಾಮಣ್ಣ ಭೋವಿ ಅಪರಾಧಿಯಾಗಿದ್ದ. ಅ.21ರಂದು ನ್ಯಾಯಾಂಗ ಬಂಧನಕ್ಕೆ ಒಳಗಾಗಿದ್ದ. ಗುರುವಾರ(ಅ.24) ಸಂಜೆ ಜಿಲ್ಲಾ ನ್ಯಾಯಾಲಯ ರಾಮಣ್ಣನಿಗೆ 5 ವರ್ಷ ಸೆರೆವಾಸ, ಎರಡು ಸಾವಿರ ರೂ. ದಂಡ ವಿಧಿಸಿ ಆದೇಶಿಸಿದೆ.

ಮಾನಸಿಕ ಒತ್ತಡಕ್ಕೆ ಒಳಗಾಗಿದ್ದ ರಾಮಣ್ಣ ಗುರುವಾರ ಜಿಲ್ಲಾ ನ್ಯಾಯಾಲಯಕ್ಕೆ ಹಾಜರಾದಗಾಲೇ ಅಸ್ವಸ್ಥನಾಗಿದ್ದ. ಕೋರ್ಟ್​ಗೆ ವೈದ್ಯರನ್ನು ಕರೆಸಿ ಚಿಕಿತ್ಸೆ ಕೊಡಿಸಲಾಗಿತ್ತು. ಶಿೆ ಪ್ರಕಟ ಬಳಿಕ ರಾತ್ರಿ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಮುಂದುವರೆಸಲಾಗಿದೆ. ಚಿಕಿತ್ಸೆ ಫಲಿಸದೆ ಶುಕ್ರವಾರ ಬೆಳಗ್ಗೆ ಕೊನೆಯುಸಿರೆಳೆದಿದ್ದಾನೆ. ವಿಷಯ ತಿಳಿದು ಆಸ್ಪತ್ರೆಗೆ ಬಂದ ಮೃತನ ಪತ್ನಿ ಕಾವೇರಿ ಗಂಡನನ್ನು ಕಳೆದುಕೊಂಡು ಕಣ್ಣೀರಾದಳು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net