ಒತ್ತಡಕ್ಕೆ ಒಳಗಾಗದೇ ಕಾರ್ಯನಿರ್ವಹಿಸಿ, ಸಿಇಒ ರಾಹುಲ್​ ರತ್ನಂ ಪಾಂಡೆಯ ಸಲಹೆ

koppal mental health programme zp ceo rahul pandey
Published on

ಕೊಪ್ಪಳ: ಮಾನಸಿಕ ಆರೋಗ್ಯ ಪ್ರತಿಯೊಬ್ಬರ ಹಕ್ಕು. ಎಲ್ಲ ಅಧಿಕಾರಿಗಳು ಒತ್ತಡಕ್ಕೆ ಒಳಗಾಗದೇ ಕಾರ್ಯನಿರ್ವಹಿಸುವಂತೆ ಜಿಪಂ ಸಿಇಒ ರಾಹುಲ್​ ರತ್ನಂ ಪಾಂಡೆಯ ಅಧಿಕಾರಿಗಳಿಗೆ ಸಲಹೆ ನೀಡಿದರು.

ಜಿಲ್ಲಾಡಳಿತ, ಆರೋಗ್ಯ ಇಲಾಖೆಯಿಂದ ನಗರದ ಜೆ.ಎಚ್​.ಪಟೇಲ್​ ಸಭಾಂಗಣದಲ್ಲಿ ಗುರವಾರ ಹಮ್ಮಿಕೊಂಡಿದ್ದ ಮಾನಸಿಕ ಅರಿವು ನೆರವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಮಾನಸಿಕತೆ ಎಲ್ಲರಲ್ಲೂ ಸಾಮಾನ್ಯ. ಆದರೆ, ಮಾನಸಿಕ ಆರೋಗ್ಯದ ಬಗ್ಗೆ ರ್ನಿಲಕ್ಷ$್ಯ ತೋರಬೇಡಿ. ದೈಹಿಕ ಆರೋಗ್ಯದಷ್ಟೇ ಮಾನಸಿಕ ಆರೋಗ್ಯ ಮುಖ್ಯ. ಎರಡು ಸಮತೋಲನವಾಗಿರಬೇಕು. ಎಲ್ಲ ಸಮಸ್ಯೆಗೆ ಪರಿಹಾರ ಇರಲಿದೆ. ಮನದ ಮಾತನ್ನು ಇನ್ನೊಬ್ಬರೊಂದಿಗೆ ಹಂಚಿಕೊಳ್ಳಬೇಕು. ಕುಟುಂಬದಲ್ಲಿ ಪ್ರೀತಿಯಿಂದ ನಡೆದುಕೊಳ್ಳಿ. ಇದರಿಂದ ಮಾನಸಿಕ ಆರೋಗ್ಯ ಉತ್ತಮವಾಗಿರಲಿದೆ. ಆರೋಗ್ಯ ಇಲಾಖೆ ಮಾನಸಿಕ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸಿ. ರೈತಾಪಿ ವರ್ಗದಲ್ಲಿ ಹೆಚ್ಚು ಕಾರ್ಯಕ್ರಮ ಮಾಡಿ. ರೈತರು ಆತ್ಮಹತ್ಯೆ ಮಾಡಿಕೊಳ್ಳುವುದನ್ನು ತಡೆಗಟ್ಟಿ. ಮನೆ ಹಾಗೂ ಕೆಲಸದ ಸ್ಥಳದಲ್ಲಿ ಜವಾಬ್ದಾರಿ, ಪ್ರಾಮಾಣಿಕತೆಯಿಂದ ಕೆಲಸ ಮಾಡಿ. ಮಾನಸಿಕ ಒತ್ತಡಕ್ಕೆ ಒಳಗಾಗಬೇಡಿ ಎಂದರು.

ಹಿರಿಯ ಸಿವಿಲ್​ ನ್ಯಾಯಾಧೀಶ ಮಹಾಂತೇಶ ಎಸ್​.ದರಗದ ಮಾತನಾಡಿ, ಕೆಲಸ ನಿರ್ವಹಿಸುವ ಸ್ಥಳದಲ್ಲಿ ಒಳ್ಳೆಯ ವಾತಾವರಣ ಇರುವಂತೆ ನೋಡಿಕೊಳ್ಳಿ. ಪ್ರಾಮಾಣಿಕತೆ, ಶಿಸ್ತು, ಒಳ್ಳೆಯ ಗುಣಗಳನ್ನು ಅಳವಡಿಸಿಕೊಳ್ಳಿ. ಪ್ರತಿಯೊಬ್ಬರಲ್ಲಿ ಒಳ್ಳೆಯತನ ಕಾಣಿ. ಯೋಗ, ಧ್ಯಾನ ಮೂಲಕ ಮನಸ್ಸು ಹತೋಟಿಯಲ್ಲಿಟ್ಟುಕೊಳ್ಳಬಹುದು ಎಂದು ಅಭಿಪ್ರಾಯಪಟ್ಟರು.

ಡಿಎಚ್​ಒ ಡಾ.ಟಿ.ಲಿಂಗರಾಜು ಮಾತನಾಡಿ, ಕರ್ತವ್ಯ ಸ್ಥಳದಲ್ಲಿ ರಾಪರಸ್ಪರರನ್ನು ಗೌರವದಿಂದ ಕಾಣಿ. ಮೆದಳುನಲ್ಲಿನ ರಾಸಾಯನಿಕ ಬದಲಾವಣೆ, ಮಾದಕ ವಸ್ತುಗಳ ಬಳಕೆ ಮೆದುಳಿನ ಆರೋಗ್ಯ ಹಾಳು ಮಾಡುತ್ತದೆ. ಸೋಂಕು, ಗಡ್ಡೆ, ಪೆಟ್ಟು, ಕುಟುಂಬ, ಹಣಕಾಸು, ಉದ್ಯೋಗ, ರೀತಿ ನೀತಿಗಳ ಗೊಂದಲಗಳು ಮಾನಸಿಕ ರೋಗಕ್ಕೆ ಮುಖ್ಯ ಕಾರಣ. ಮಾನಸಿಕ ಖಾಯಿಲೆ ಬಗ್ಗೆ ರ್ನಿಲಕ್ಷ$್ಯ ಬೇಡ. ಮೊದಲ ಹಂತದಲ್ಲೇ ಪತ್ತೆ ಮಾಡಿ ಚಿಕಿತ್ಸೆ ಪಡೆದು ಆರೋಗ್ಯವಂತರಾಗಿ ಬಾಳಬೇಕೆಂದು ಸಲಹೆ ನೀಡಿದರು.

ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಅನುಷ್ಠಾನಾಧಿಕಾರಿ ಡಾ.ಪ್ರಕಾಶ ಎಚ್​. ಮಾತನಾಡಿ, ಪ್ರತಿ ವರ್ಷ ಅ.10ರಂದು ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಆಚರಿಸಲಾಗುತ್ತದೆ ಎಂದರು.

ಮನೋ ವೈದ್ಯರಾದ ಡಾ.ಲಕ್ಷಿ$್ಮದೇವಿ ಪಾಟೀಲ್​ ವಿಶೇಷ ಉಪನ್ಯಾಸ ನೀಡಿದರು. ಡಾ.ರವೀಂದ್ರನಾಥ ಎಂ.ಎಚ್​., ಆರ್​ಸಿಎಚ್​ ಅಧಿಕಾರಿ ಡಾ.ಪ್ರಕಾಶ ವಿ., ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ವೆಂಕಟೇಶ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net