ಅಪ್ರಾಪ್ತೆ ಮೇಲೆ ಅತ್ಯಾಚಾರಗೈದವಗೆ ಏಳು ವರ್ಷ ಶಿಕ್ಷೆ

08012021 court
Published on

ಕೊಪ್ಪಳ: ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರ ಎಸಗಿದ ಶ್ಯಾಮ ಕನ್ನಾಳ ಎಂಬಾತನಿಗೆ ಏಳು ವರ್ಷ ಜೈಲು ಶಿಕ್ಷೆ ಹಾಗೂ 35 ಸಾವಿರ ರೂ. ದಂಡ ವಿಧಿಸಿ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶ ಶಂಕರ ಎಂ.ಜಾಲವಾದಿ ತೀರ್ಪು ನೀಡಿದ್ದಾರೆ.

ಕುಷ್ಟಗಿ ತಾಲೂಕಿನ ಸಂಗನಾಳ ಗ್ರಾಮದ ಶ್ಯಾಮ ಕನ್ನಾಳ, ಅಪ್ರಾಪ್ತ ಬಾಲಕಿ ಬಹಿರ್ದೆಸೆಗೆ ತೆರಳಿದಾಗ ಆಕೆಯನ್ನು ಪುಸಲಾಯಿಸಿ ಅಪಹರಣ ಮಾಡಿದ್ದ. ಬಳಿಕ ಸಂಗನಾಳ ಶಾಲೆ ಹತ್ತಿರ ಕರೆದೊಯ್ದು ಅತ್ಯಾಚಾರ ಎಸಗಿದ ಆರೋಪ ಕೇಳಿಬಂದಿತ್ತು. ಘಟನೆ ಸಂಬಂಧ ಪ್ರಕರಣ ದಾಖಲಿಸಿ, ಪೊಲೀಸರು ತನಿಖೆ ಕೈಗೊಂಡಿದ್ದರು.

ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಕುಷ್ಟಗಿ ಸಿಪಿಐ ಗಿರೀಶ ರೋಡ್ಕರ್ ಆರೋಪಿ ವಿರುದ್ಧ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ, ಅಪರಾಧಿಗೆ ಈ ಶಿಕ್ಷೆ ವಿಧಿಸಿದೆ. ದಂಡದ ಮೊತ್ತದಲ್ಲಿ 20 ಸಾವಿರ ರೂ.ಗಳನ್ನು ಬಾಧಿತಳಿಗೆ ನೀಡುವಂತೆ ತೀರ್ಪು ನೀಡಿದೆ. ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕಿ ಗೌರಮ್ಮ ದೇಸಾಯಿ ವಾದ ಮಂಡಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net