ಗಾಯಾಳುಗಳಿಗೆ ನೆರವಾದ ಶಾಸಕ

koppal mla raghavendra hitnal accident
Published on

ಕೊಪ್ಪಳ: ತಾಲೂಕಿನ ಶಹಾಪುರ ಟೋಲ್​ ಬಳಿಯ ಬೂದೇಶ್ವರ ಕ್ರಾಸ್​ನಲ್ಲಿ ಬೈಕ್​ಗಳ ನಡುವೆ ಅಪಘಾತ ಸಂಭವಿಸಿದ್ದು ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸುವಲ್ಲಿ ಶಾಸಕ ರಾವೇಂದ್ರ ಹಿಟ್ನಾಳ, ಮಾಜಿ ಸಂಸದ ಸಂಗಣ್ಣ ಕರಡಿ ನೆರವಾದರು.

ಬೈಕ್​ ಸವಾರರು ಗಾಯಗೊಂಡು ರಸ್ತೆಯಲ್ಲಿ ಬಿದ್ದಿದ್ದರು. ಈ ವೇಳೆ ಅದೇ ಮಾರ್ಗವಾಗಿ ಚಲಿಸುತ್ತಿದ್ದ ಶಾಸಕರು ಗಾಯಾಳುಗಳ ನೆರವಿಗೆ ಧಾವಿಸಿದರು. ಆ್ಯಂಬುಲೆನ್ಸ್​ಗೆ ಕರೆ ಮಾಡಿ ಗಾಯಾಳುಗಳನ್ನು ಆಸ್ಪತ್ರೆಗೆ ಕಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net