ಆರೋಗ್ಯ ರಂಗ ಸುಧಾರಣೆಗೆ ಆದ್ಯತೆ

koppal mla raghavendra hitnal stoning ceremony
Published on

ಕೊಪ್ಪಳ: ಕ್ಷೇತ್ರದ ಸಾಮಾನ್ಯನಿಗೂ ಗುಣಮಟ್ಟದ ಆರೋಗ್ಯ ಸೇವೆ ದೊರೆಯುವಂತೆ ಕ್ರಮ ಕೈಗೊಳ್ಳಲಾಗುವುದೆಂದು ಶಾಸಕ ರಾವೇಂದ್ರ ಹಿಟ್ನಾಳ ಹೇಳಿದರು.

ತಾಲೂಕಿನ ಗಿಣಿಗೇರಾ ಜಿಪಂ ಕ್ಷೇತ್ರ ವ್ಯಾಪ್ತಿ ಗ್ರಾಮಗಳಲ್ಲಿ ಶುಕ್ರವಾರ ವಿವಿಧ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.

ಆರೋಗ್ಯ ಹಾಗೂ ಶಿಕ್ಷಣ ರಂಗ ಸುಧಾರಣೆಗೆ ಸಾಕಷ್ಟು ಅನುದಾನ ಬಂದಿದೆ. ಮಲ್ಟಿ ಸ್ಪೇಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ. ಬರುವ ಬಜೆಟ್​ನಲ್ಲಿ ಘೋಷಿಸುವುದಾಗಿ ಸಿಎಂ ಭರವಸೆ ನೀಡಿದ್ದಾರೆ. ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ 135 ಕೋಟಿ ವೆಚ್ಚದಲ್ಲಿ ವೈದ್ಯಕಿಯ ಕಾಲೇಜು ನಿಮಾರ್ಣ, 192 ಕೋಟಿ ರೂಪಾಯಿ ವೆಚ್ಚದಲ್ಲಿ 450 ಬೆಡ್​ ಆಸ್ಪತ್ರೆ, 295 ಕೋಟಿ ಅನುದಾನದಡಿ ಕೊಪ್ಪಳ ಮತ್ತು ಯಲಬುರ್ಗಾ ತಾಲೂಕಿನ ಕೆರೆ ತುಂಬಿಸುವ ಯೋಜನೆ ಜಾರಿಯಾಗಿದೆ. 245 ಕೋಟಿ ರೂಪಾಯಿ ವೆಚ್ಚದಲ್ಲಿ 104 ಗ್ರಾಮಗಳಿಗೆ ಶುದ್ಧ ಕುಡಿವ ನೀರು ಪೂರೈಸುವ ಯೋಜನೆಗೆ ಟೆಂಡರ್​ ಕರೆಯಲಾಗಿದೆ ಎಂದರು.

ಕೆಕೆಆರ್​ಡಿಬಿಯಡಿ 65 ಕೋಟಿ ರೂ. ಬಂದಿದ್ದು ಸಿಸಿ ರಸ್ತೆ, ಚರಂಡಿ, ಶಾಲಾ ಕೊಠಡಿ ನಿರ್ಮಿಸಲಾಗುವುದು. ಬಿಜೆಪಿ ವಸತಿ ಯೋಜನೆ ನಿಲ್ಲಿಸಿತ್ತು. ನಮ್ಮ ಸರ್ಕಾರ ಮರು ಆರಂಭ ಮಾಡಿದೆ. ಸೂರು ಇಲ್ಲದ ಪ್ರತಿಯೊಬ್ಬರಿಗೂ ನಿವೇಶನ ನೀಡಲಾಗುವುದು. ಜೆಜೆಎಂ ಕಳಪೆಯಾಗಿದ್ದು, ಹೊಸ ಗುತ್ತಿಗೆದಾರರಿಗೆ ವಹಿಸಲಾಗುವುದು ಎಂದು ತಿಳಿಸಿದರು.

ಜಿಪಂ ಮಾಜಿ ಅಧ್ಯಕ್ಷ ಗೂಳಪ್ಪ ಹಲಗೇರಿ, ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರ ತಾಲೂಕು ಅಧ್ಯಕ್ಷ ಬಾಲಚಂದ್ರನ್​, ಗುಳದಳ್ಳಿ ಗ್ರಾಪಂ ಅಧ್ಯೆ ಈರಮ್ಮ ಲಕ್ಷ$್ಮಣ ಕಿಡದಾಳ, ಅಲಿಸಾಬ್​, ಅಣ್ಣಪ್ಪ ಗಬ್ಬೂರು, ಗುಡದಪ್ಪ ಗುಡದಳ್ಳಿ, ರಮೇಶ ಹೊಳೆಯಾಚಿ, ಪರಸಪ್ಪ ಕೆರೆಹಳ್ಳಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net