ಜನರಿಗಾಗಿ ಗ್ಯಾರಂಟಿ ಯೋಜನೆ : ರಾಜಶೇಖರ ಹಿಟ್ನಾಳ

koppal mp rajashekhar hitanal guarantee scheme
Published on

ಕೊಪ್ಪಳ: ಸಂಸದ ರಾಜಶೇಖರ ಹಿಟ್ನಾಳ ಶುಕ್ರವಾರ ಗ್ರಾಮೀಣ ಪ್ರದೇಶದಲ್ಲಿ ಪ್ರವಾಸ ಕೈಗೊಂಡು ಗ್ಯಾರಂಟಿ ಯೋಜನೆಗಳ ಫಲಾನುಭವಿಗಳೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಭಾಗಿಯಾದರು.

ಅಳವಂಡಿಯಲ್ಲಿ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮಿ, ಗೃಹಜ್ಯೋತಿ, ಯುವನಿಧಿ, ಶಕ್ತಿ ಹಾಗೂ ಅನ್ನಭಾಗ್ಯ ಯೋಜನೆಗಳ ಫಲಾನುಭವಿಗಳೊಂದಿಗೆ ಸಂವಾದ ನಡೆಸಿ, ಆಯಾ ಯೋಜನೆಗಳ ಫಲಾನುಭವಿಗಳಿಗೆ ಸರ್ಕಾರದ ಸಹಾಯಧನ ಮತ್ತು ಇನ್ನೀತರ ಸೌಕರ್ಯಗಳು ಸಮರ್ಪಕವಾಗಿ ತಲುಪುತ್ತಿರುವುದರ ಬಗ್ಗೆ ಖಚಿತಪಡಿಸಿಕೊಂಡರು.

ಇದಕ್ಕು ಮೊದಲು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಸರ್ಕಾರವು ಜನರ ಶ್ರೇಯೋಭಿವೃದ್ಧಿಗಾಗಿ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದೆ. ಸರ್ಕಾರದ ಈ ಸದುದ್ದೇಶ ಈಡೇರಿದೆಯೇ ಇಲ್ಲವೇ, ಜನರ ನಿರೀಕ್ಷೆ ಏನು ಎಂಬುದರ ಬಗ್ಗೆ ಫಲಾನುಭವಿಗಳಿಂದಲೇ ಅಭಿಪ್ರಾಯ ಪಡೆಯಲು ಹಾಗೂ ಗ್ಯಾರಂಟಿ ಯೋಜನೆಗಳಿಂದ ವಂಚಿತರಾದ ಫಲಾನುಭವಿಗಳಿಗೆ ಯೋಜನೆಗಳ ಮಾಹಿತಿ ತಲುಪಿಸುವುದಕ್ಕಾಗಿ ಸಂವಾದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net