ಜನ ವಿರೋಧಿ ಬಜೆಟ್​ : ಸಂಸದ ರಾಜಶೇಖರ ಹಿಟ್ನಾಳ

koppal MP Rajashekhar Hitnala central budget koppal
RAJASHEKHAR HITNAL
Published on

ಕೊಪ್ಪಳ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​ ಅವರು ರಾಜ್ಯದ ಯಾವುದೇ ಬೇಡಿಕೆಗಳಿಗೂ ಮನ್ನಣೆ ನೀಡದೆ ಅತ್ಯಂತ ನಿರಾಶಾದಾಯಕ ಬಜೆಟ್​ ಮಂಡಿಸುವ ಮೂಲಕ ರಾಜ್ಯಕ್ಕೆ ಅನ್ಯಾಯ ಮಾಡಿದ್ದಾರೆ ಎಂದು ಕೊಪ್ಪಳ ಲೋಕಸಭಾ ಕ್ಷೇತ್ರದ ಸಂಸದ ಕೆ. ರಾಜಶೇಖರ ಹಿಟ್ನಾಳ ಹೇಳಿದ್ದಾರೆ.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ತಮ್ಮ ಅಧಿಕಾರ ಉಳಿಸಿಕೊಳ್ಳುವ ಉದ್ದೇಶದಿಂದ ಆಂಧ್ರಪ್ರದೇಶ ಮತ್ತು ಬಿಹಾರ ರಾಜ್ಯಗಳಿಗೆ ವಿಶೇಫಿ ಅನುದಾನ ಒದಗಿಸಿದ್ದು, ಇತರ ರಾಜ್ಯಗಳನ್ನು ಸಂಪೂರ್ಣ ಕಡೆಗಣಿಸಿದ್ದಾರೆ. ಅದರಲ್ಲೂ ಕರ್ನಾಟಕ ಕೇಂದ್ರಕ್ಕೆ ಹೆಚ್ಚಿನ ತೆರಿಗೆ ಪಾವತಿಸುತ್ತಿದ್ದರೂ ಕರ್ನಾಟಕಕ್ಕೆ ಏನೇನು ಒತ್ತು ಕೊಟ್ಟಿಲ್ಲ, ಐದು ಜನ ಸಚಿವರು ಇದ್ದರೂ ಕೈಗಾರಿಕಾ, ರೈಲ್ವೆ ಸೇರಿದಂತೆ ಇತರೆ ಕ್ಷೇತ್ರಕ್ಕೆ ಅನುದಾನ ನೀಡಿಲ್ಲ. ಇದು ನಿರಾಶಾದಾಯಕ, ಜನವಿರೋಧಿ ಬಜೆಟ್​ ಇದಾಗಿದ್ದು, ಬಡವರಿಗೆ ಅನ್ಯಾಯ ಮಾಡಿದ್ದಾರೆ. ರಾಯಚೂರಿಗೆ ಏಮ್ಸ್​ ಹಾಗೂ ಕೊಪ್ಪಳ ಲೋಕಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಅನುದಾನ ನೀಡುವಂತೆ ಮನವಿ ಮಾಡಿದ್ದೇವು. ಅದನ್ನು ಕೊಟ್ಟಿಲ್ಲ ಎಂದರು.

ವಿಶೇಷವಾಗಿ ಬಡವರು, ಪರಿಶಿಫ್ಟಿ ಜಾತಿ ಮತ್ತು ಪರಿಶಿಫ್ಟಿ ಪಂಗಡದವರನ್ನು ಸಂಪೂರ್ಣವಾಗಿ ರ್ನಿಲಕ್ಷ್ಯ ಮಾಡಲಾಗಿದೆ.
ಈ ಬಜೆಟ್​ನಲ್ಲಿ ರೈತರಿಗೆ ದೊಡ್ಡ ಅನ್ಯಾಯ ಮಾಡಿದ್ದು, ರೈತರು 5 ವರ್ಫಿಗಳಿಂದ ಕನಿಫ್ಠಿ ಬೆಂಬಲ ಬೆಲೆ ಕಾಯಿದೆ ರಚಿಸಬೇಕೆಂದು ಒತ್ತಾಯ ಮಾಡುತ್ತಿದ್ದಾರೆ. ಆದರೆ ಈ ಬಗ್ಗೆ ಬಜೆಟ್​ನಲ್ಲಿ ಚಕಾರವನ್ನೇ ಎತ್ತಿಲ್ಲ. ಸ್ವಾಮಿನಾಥನ್​ ಆಯೋಗದ ಶಿಫಾರಸ್ಸುಗಳ ಜಾರಿ ಬಗ್ಗೆ ವಿತ್ತ ಸಚಿವರು ಯಾವುದೇ ಮಾತು ಆಡದೆ ರೈತರಿಗೆ ಪಂಗನಾಮ ಹಾಕಿದ್ದಾರೆ. ಇದೊಂದು ರೈತ ವಿರೋಧಿ, ಜನ ವಿರೋಧಿ ಬಜೆಟ್​ ಆಗಿದೆ ಎಂದು ಆರೋಪಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net