ಬ್ರಹ್ಮಶ್ರೀ ನಾರಾಯಣಗುರು ಜಯಂತಿ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ
Published on

ಕೊಪ್ಪಳ: ಜಿಲ್ಲಾಡಳಿತ, ಕನ್ನಡ ಮತ್ತು ಸಂಸತಿ ಇಲಾಖೆ ಸಹಯೋಗದಲ್ಲಿ ನಗರದ ಡಿಸಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಆಚರಿಸಲಾಯಿತು.

ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ನಾರಾಯಣಗುರು ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದರು. ಕನ್ನಡ ಮತ್ತು ಸಂಸತಿ ಇಲಾಖೆ ಸಹಾಯಕ ನಿರ್ದೇಶಕ ಕೊಟ್ರೇಶ ಮರಬನಳ್ಳಿ, ಸಮುದಾಯ ಮುಖಂಡರಾದ ಈರಣ್ಣ ಹುಲಿಗಿ, ರವಿ ಗಿಣಿಗೇರ, ವೆಂಕಟೇಶ್​ ಗಂಗಾವತಿ, ಹನುಮಂತಪ್ಪ ಕಂಪಸಾಗರ, ಚಂದ್ರು ಈಳಿಗೇರ್​, ಮಂಜುನಾಥ ಈಳಿಗೇರ್​, ಅಶೋಕ, ಬಸವರಾಜ, ಡಿಸಿ ಕಚೇರಿ ಸಿಬ್ಬಂದಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net