ಕಿರಾಣಿ ಒಯ್ಯುತ್ತಿದ್ದ ಬೈಕ್ ಸವಾರನಿಗೆ ಕಾರು ಡಿಕ್ಕಿ, ಸ್ಥಳದಲ್ಲೇ ಸಾವು

29072022 koppal bike accident
Published on

ಕೊಪ್ಪಳ: ಮಂಗಳಾಪುರ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ಕಾರು ಹಾಗೂ ಸ್ಕೂಟಿ ನಡುವೆ ಅಪಘಾತ ಸಂಭವಿಸಿ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಬೆಟಗೇರಿ ಗ್ರಾಮದ ಕಲಿಗಣನಾಥ (62) ಮೃತ. ರಸ್ತೆ ದಾಟುವಾಗ ಎದುರಿನಿಂದ ಬಂದ ಕಾರು ಗುದ್ದಿದೆ. ಡಿಕ್ಕಿ ರಭಸಕ್ಕೆ ಸವಾರ ದೂರದಲ್ಲಿ ಹೋಗಿ ಬಿದ್ದಿದ್ದು, ಸ್ಥಳದಲ್ಲೇ ಪ್ರಾಣ ಹೋಗಿದೆ. ದ್ವಿಚಕ್ರ ವಾಹನ ನಜ್ಜುಗುಜ್ಜಾಗಿದೆ. ಕಿರಾಣಿ ಸಾಮಗ್ರಿ ತೆಗೆದುಕೊಂಡು ಹೋಗುತ್ತಿದ್ದ ಕಾರಣ ರಸ್ತೆಯಲ್ಲೆಲ್ಲ ದಿನಸಿ ವಸ್ತುಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ. ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net