ಬಿಜೆಪಿಯ ಅಚ್ಛೆ ದಿನ್ ಸಾಕಾಗಿದೆ; ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಶಿವರಾಜ ತಂಗಡಗಿ ಹೇಳಿಕೆ

07072021 Koppal Congress Cycle Jatha
Published on

ತೈಲ ಬೆಲೆ ಏರಿಕೆಗೆ ಆಕ್ರೋಶ ಜಿಲ್ಲೆಯ ವಿವಿಧೆಡೆ ಸೈಕಲ್ ಜಾಥಾ

ಕೊಪ್ಪಳ: ಕೇಂದ್ರ ಹಾಗೂ ರಾಜ್ಯ ಸರ್ಕಾರದ ದುರಾಡಳಿತ ಜನತೆಗೆ ಸಾಕಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಶಿವರಾಜ ತಂಗಡಗಿ ಹೇಳಿದರು.

ತೈಲ ಬೆಲೆ ಏರಿಕೆ ಖಂಡಿಸಿ ಬುಧವಾರ ನಗರದಲ್ಲಿ ಜಿಲ್ಲಾ ಕಾಂಗ್ರೆಸ್‌ನಿಂದ ಹಮ್ಮಿಕೊಂಡಿದ್ದ ಸೈಕಲ್ ಜಾಥಾದಲ್ಲಿ ಮಾತನಾಡಿದರು. ಬಿಜೆಪಿ ಅಧಿಕಾರಕ್ಕೆ ಬಂದರೆ ಅಭಿವೃದ್ಧಿ ಮಾಡಲಾಗುವುದು ಹಾಗೂ ಪೆಟ್ರೋಲ್, ಡೀಸೆಲ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆಯನ್ನು ಗಣನೀಯವಾಗಿ ಇಳಿಸಲಾಗುವುದು ಎಂದು ಭರವಸೆ ನೀಡಿದ್ದರು.

ಸುಳ್ಳು ಭರವಸೆಗಳ ಮೂಲಕ ಒಂದು ಲೀಟರ್ ಪೆಟ್ರೋಲ್ ಅನ್ನು 103 ರೂ.ಗೆ ಹೆಚ್ಚಿಸಿರುವುದು ಸಮರ್ಥನೀಯವಲ್ಲ. ಈಗಲೂ ಅಚ್ಛೆ ದಿನ್ ಬರಲಿದೆ ಎಂದು ಹೇಳಿ ಜನರಿಗೆ ಮಂಕುಬೂದಿ ಎರಚುತ್ತಿರುವ ಬಿಜೆಪಿ ಅಧಿಕಾರ ತ್ಯಜಿಸಲಿ ಎಂದು ಆಗ್ರಹಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net