ಅತ್ಯಾಚಾರಿಗೆ 20 ವರ್ಷ ಜೈಲು ಶಿಕ್ಷೆ

Published on

ಕೊಪ್ಪಳ: ಅಪ್ರಾಪ್ತಳನ್ನು ಅಪಹರಿಸಿ ಅತ್ಯಾಚಾರ ಎಸಗಿದ್ದ ಕುಷ್ಟಗಿ ತಾಲೂಕಿನ ತುಗ್ಗಲದೋಣಿಯ ಭೀಮಪ್ಪ ಎಂಬಾತನಿಗೆ 20 ವರ್ಷ ಜೈಲು ಶಿಕ್ಷೆ ಹಾಗೂ 25 ಸಾವಿರ ರೂ. ದಂಡ ವಿಧಿಸಿ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರು ಹಾಗೂ ತ್ವರಿತ ವಿಲೇವಾರಿ ನ್ಯಾಯಾಲಯ (ಪೋಕ್ಸೋ) ಆದೇಶಿಸಿದೆ.

ಹನುಮಸಾಗರ ಠಾಣೆ ವ್ಯಾಪ್ತಿಯ ತುಗ್ಗಲದೋಣಿ ಬ್ರಿಡ್ಜ್​ ಬಳಿ 2019ರಲ್ಲಿ ಭೀಮಪ್ಪ ಅಪ್ರಾಪ್ತಳನ್ನು ಅಪಹರಿಸಿ ಬಾದಾಮಿಗೆ ಕೊಂಡೊಯ್ದಿದ್ದ. ಅಲ್ಲಿಂದ ರೈಲು ಮೂಲಕ ಸೊಲಾಪುರಕ್ಕೆ ಕರೆದೊಯ್ದು ಅಲ್ಲಿ ಅತ್ಯಾಚಾರ ಎಸಗಿದ್ದ. ಟನೆ ಸಂಬಂಧ ಹನುಮಸಾಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣದ ವಿಚಾರಣೆ ನಡೆಸಿದ ಕುಷ್ಟಗಿ ಸಿಪಿಐ ಚಂದ್ರಶೇಖರ ಜಿ. ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶ ಕುಮಾರ ಡಿ.ಕೆ. ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಭೀಮಪ್ಪನನ್ನು ಅಪರಾಧಿ ಎಂದು ಪರಿಗಣಿಸಿ 20 ವರ್ಷ ಜೈಲು ಶಿಕ್ಷೆ ಹಾಗೂ 25 ಸಾವಿರ ರೂ. ದಂಡ ವಿಧಿಸಿ ಆ.24ರಂದು ತೀರ್ಪು ನೀಡಿದ್ದಾರೆ. ಪ್ರಕರಣದಲ್ಲಿ ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕಿ ಗೌರಮ್ಮ ದೇಸಾಯಿ ವಾದ ಮಂಡಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net