ಕೊಪ್ಪಳ ಜಿಲ್ಲೆಯಲ್ಲಿ ಆರು ಇಲಿಜ್ವರ ಪ್ರಕರಣ ಪತ್ತೆ

03112020 Koppal Rat Fever
Published on

ಕೊಪ್ಪಳ: ಮಹಾಮಾರಿ ಕರೊನಾ ಸೋಂಕಿನ ಪ್ರಮಾಣ ಜಿಲ್ಲೆಯಲ್ಲಿ ಕಡಿಮೆಯಾಗುತ್ತಿದ್ದು, ಇದೀಗ ಇಲಿಜ್ವರ ಪ್ರಕರಣಗಳು ಬೆಳಕಿಗೆ ಬಂದಿವೆ. ಈವರೆಗೆ ಜಿಲ್ಲಾದ್ಯಂತ ಆರು ಪ್ರಕರಣಗಳು ಪತ್ತೆಯಾಗಿವೆ.

ಕೊಪ್ಪಳ ತಾಲೂಕಿನ ಹೊಸಳ್ಳಿ ಗ್ರಾಮದಲ್ಲಿ ಎರಡು, ಹೊಸಲಿಂಗಾಪುರ, ಕೆರೆಹಳ್ಳಿ ಹಾಗೂ ನರೇಗಲ್ ಗ್ರಾಮಗಳಲ್ಲಿ ತಲಾ ಒಂದು ಹಾಗೂ ಕುಷ್ಟಗಿ ತಾಲೂಕಿನ ಶಾಖಾಪುರ ಗ್ರಾಮದಲ್ಲಿ ಒಂದು ಪ್ರಕರಣ ಪತ್ತೆಯಾಗಿವೆ. ಲೆಪ್ಟೋಸ್ಪೈರಸಿಸ್ ಎಂಬುದು ಇದರ ವೈಜ್ಞಾನಿಕ ಹೆಸರು. ಜ್ವರ, ಕೈಕಾಲು ನೋವು ಸೇರಿದಂತೆ ಕಾಮಾಲೆ ಲಕ್ಷಣಗಳು ಇರುವವರಲ್ಲಿ ಇಲಿಜ್ವರ ಕಾಣಿಸಿಕೊಳ್ಳುತ್ತದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net