ಜವಾಬ್ದಾರಿ ಸಮರ್ಪಕವಾಗಿ ನಿಭಾಯಿಸಲು ಅಧಿಕಾರಿಗಳಿಗೆ ಜಿಪಂ ಸಿಇಒ ಸೂಚನೆ

Koppal ZP CEO Ginagera Lake Visit
ಕೊಪ್ಪಳ ತಾಲೂಕಿನ ಗಿಣಿಗೇರಿ ಕೆರೆ ಅಭಿವೃದ್ಧಿ ಕಾಮಗಾರಿಯನ್ನು ಜಿಪಂ ಸಿಇಒ ೌಜಿಯಾ ತರನ್ನುಮ್ ಶನಿವಾರ ವೀಕ್ಷಿಸಿದರು.
Published on

ಕೊಪ್ಪಳ: ಕೆರೆ ಅಭಿವೃದ್ಧಿಗೆ ಸಂಬಂಧಿಸಿದಂತೆ ವಹಿಸಿರುವ ಜವಾಬ್ದಾರಿಯನ್ನು ಸಮರ್ಪಕವಾಗಿ ನಿಭಾಯಿಸಿ ಎಂದು ಅಧಿಕಾರಿಗಳಿಗೆ ಜಿಪಂ ಸಿಇಒ ೌಜಿಯಾ ತರನ್ನುಮ್ ಸೂಚಿಸಿದರು.

ತಾಲೂಕಿನ ಗಿಣಿಗೇರಿ ಗ್ರಾಮದ ಕೆರೆ ಅಭಿವೃದ್ಧಿ ಕಾರ್ಯವನ್ನು ಶನಿವಾರ ಪರಿಶೀಲಿಸಿ ಮಾತನಾಡಿದರು. ದೊಡ್ಡದಾದ ಗಿಣಿಗೇರಿ ಕೆರೆಯನ್ನು ಮಾದರಿಯಾಗಿ ಅಭಿವೃದ್ಧಿಪಡಿಸಲು ಗವಿಸಿದ್ದೇಶ್ವರ ಸ್ವಾಮೀಜಿ ಸಂಕಲ್ಪ ಮಾಡಿದ್ದಾರೆ. ಹೀಗಾಗಿ ನರೇಗಾದಡಿ ಕೆರೆ ಅಭಿವೃದ್ಧಿಗೆ ಅಗತ್ಯ ಸಹಕಾರ ನೀಡಬೇಕು. ಸಸಿ ನೆಡವುದರ ಜತೆಗೆ ರಸ್ತೆ ನಿರ್ಮಾಣ ಮಾಡಬೇಕು. ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕು. ಇಕೊ ಪಾರ್ಕ್ ನಿರ್ಮಾಣಕ್ಕೆ ತೋಟಗಾರಿಕೆ ಇಲಾಖೆ ಅಧಿಕಾರಿಗಳು ಸಹಕಾರ ನೀಡಬೇಕು. ಕೆರೆ ಸಂಪರ್ಕಿಸುವ ನಾಲಾಗಳನ್ನು ಸ್ವಚ್ಛಗೊಳಿಸಲಾಗುತ್ತಿದೆ. ಇದರಿಂದ ಕೆರೆಗೆ ನೀರು ಹರಿದು ಬರಲು ಸಹಕಾರಿಯಾಗಲಿದೆ. ನಿಗದಿತ ಅವಧಿಯೊಳಗೆ ಎಲ್ಲ ಕಾಮಗಾರಿ ಪೂರ್ಣಗೊಳಿಸಬೇಕೆಂದು ತಾಕೀತು ಮಾಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net