ಪಾನಮುಕ್ತರಿಗೆ ಅಭಿನಂದನಾ ಕಾರ್ಯಕ್ರಮ 11ರಂದು

KOPPAL SKDRDP GUPTA PRESS MEET PANAMUKTA PROGRAMME
KOPPAL SKDRDP GUPTA PRESS MEET PANAMUKTA PROGRAMME
ಶ್ರೀನಿವಾಸ ಗುಪ್ತಾ
Published on

ಕೊಪ್ಪಳ:ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ಜನ ಜಾಗೃತಿ ವೇದಿಕೆಯಿಂದ ಗಾಂಧಿ ಜಯಂತಿ ಅಂಗವಾಗಿ ಅ.11ರಂದು ಗಾಂಧಿ ಪಾನಮುಕ್ತರಿಗೆ ಅಭಿನಂದನೆ ಹಾಗೂ ಜನ ಜಾಗೃತಿ ವೇದಿಕೆ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಜನ ಜಾಗೃತಿ ವೇದಿಕೆ ಜಿಲ್ಲಾಧ್ಯಕ್ಷ ಶ್ರೀನಿವಾಸ ಗುಪ್ತಾ ಹೇಳಿದರು.

ಧರ್ಮಸ್ಥಳ ಸಂಸ್ಥೆಯಿಂದ ನಿರಂತರವಾಗಿ ಮದ್ಯವ್ಯರ್ಜನ ಶಿಬಿರ ಆಯೋಜಿಸಲಾಗುತ್ತಿದೆ. ಈಗಾಗಲೇ ಜಿಲ್ಲೆಯಲ್ಲಿ ಸಾವಿರಕ್ಕೂ ಹೆಚ್ಚು ಜನ ಮದ್ಯ ಸೇವನೆಯಿಂದ ದೂರಾಗಿ ಉತ್ತಮ ಬದುಕು ಕಟ್ಟಿಕೊಂಡಿದ್ದಾರೆ. ಸ್ವಯಂ ಪ್ರೇರಣೆಯಿಂದ ಮನ ಬದಲಾಯಿಸಿ ಮದ್ಯ ಸೇವನೆ ಬಿಡಿಸಲಾಗುತ್ತಿದೆ. ಪಾನ ಮುಕ್ತರಾದರಿಗೆ ಅಭಿನಂದನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿ, ಸಂಸದ ಸಂಗಣ್ಣ ಕರಡಿ, ಶಾಸಕ ರಾಘವೇಂದ್ರ ಹಿಟ್ನಾಳ್, ಡಿಸಿ ನಲಿನ್ ಅತುಲ್, ಜಿಪಂ ಸಿಇಒ ರಾಹುಲ್ ರತ್ನಂ ಪಾಂಡೆಯ, ಎಸ್ಪಿ ಯಶೋದಾ ವಂಟಗೋಡಿ, ಧರ್ಮ ಸ್ಥಳ ಯೋಜನೆ ಕಕ ಪ್ರಾದೇಶಿಕ ನಿರ್ದೇಶಕ ಗಣೇಶ ಬಿ. ಇತರರು ಭಾಗಿಯಾಗಲಿದ್ದಾರೆಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಧರ್ಮಸ್ಥಳ ಯೋಜನೆ ಜಿಲ್ಲಾ ನಿರ್ದೇಶಕ ಸದಾನಂದ ಬಂಗೇರ ಮಾತನಾಡಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅನೇಕ ಕಾರ್ಯಕ್ರಮಗಳನ್ನು ಮಾಡುತ್ತಿದೆ. ಅದರಲ್ಲೂ ಗಾಂಧೀಜಿ ಕನಸಾದ ಮದ್ಯಮುಕ್ತ ಸಮಾಜ ಮಾಡುವುದಕ್ಕೆ ಆದ್ಯತೆ ನೀಡಿದೆ. ಜನಜಾಗೃತಿ ವೇದಕೆ ಮೂಲಕ ಕೆಲಸ ಮಾಡುತ್ತಿದ್ದೇವೆ.

ವೇದಿಕೆ ನೂತನ ಅಧ್ಯಕ್ಷರಾಗಿ ಜಿಪಂ ಮಾಜಿ ಅಧ್ಯಕ್ಷ ಜನಾರ್ದನ ಹುಲಿಗಿ ಅವರನ್ನು ಆಯ್ಕೆ ಮಾಡಲಾಗಿದೆ. ಕಾರ್ಯಕ್ರಮದಲ್ಲಿ ನೂತನ ಪದಾಧಿಕಾರಿಗಳು ಪದಗ್ರಹಣ ಮಾಡಲಿದ್ದಾರೆಂದು ತಿಳಿಸಿದರು. ವೇದಿಕೆ ಸದಸ್ಯರಾದ ಡಾ.ರಾಧಾ ಕುಲಕರ್ಣಿ, ತ್ರಿಶಾಲ ಪಾಟೀಲ್, ಗ್ರಾಮಾಭಿವೃದ್ಧಿ ಯೋಜನೆಯ ರಘುರಾಮ್, ಜಗದೀಶ, ಮಂಜುನಾಥ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net