ಕೋಟೆ ಸ್ವಚ್ಛಗೊಳಿಸಿದ ಜಿಲ್ಲಾಡಳಿತ

koppal svchchta hi seva programme dc naleen athul cmc koppal
Published on

ಕೊಪ್ಪಳ: ಜಿಲ್ಲಾಡಳಿತದಿಂದ ಕೊಪ್ಪಳ ಕೋಟೆ ಪ್ರದೇಶದಲ್ಲಿ ಸ್ವಚ್ಚತಾ ಹೀ ಸೇವಾ ಘೋಷ ವಾಕ್ಯದಡಿ ಸಾರ್ವಜನಿಕ ಪ್ರದೇಶಗಳ ಸ್ವಚ್ಚತೆ ಕಾರ್ಯಕ್ರಮ ನಡೆಯಿತು.

ಜಿಲ್ಲಾಧಿಕಾರಿ ನಲಿನ್​ ಅತುಲ್​ ನೇತೃತ್ವದಲ್ಲಿ ಎಲ್ಲ ಅಧಿಕಾರಿಗಳು ಕೋಟೆ ಪ್ರದೇಶದಲ್ಲಿನ ಸ್ವಚ್ಚತೆ ಕಾರ್ಯ ಕೈಗೊಂಡರು. ಡಿಸಿ ಕೈಯಲ್ಲಿ ಪೊರಕೆ ಹಿಡಿದು, ಐತಿಹಾಸಿಕ ಕೊಪ್ಪಳ ಕೋಟೆ ಪ್ರದೇಶದಲ್ಲಿ ಸ್ವಚ್ಚತಾ ಕಾರ್ಯ ನಿರ್ವಹಿಸಿದರು. ಜಿಲ್ಲಾಡಳಿತದ ಅಧಿಕಾರಿಗಳು ಸಾತ್​ ನೀಡಿದರು. ನಗರಸಭೆ ಅಧ್ಯಕ್ಷ ಅಮ್ಜದ್​ ಪಟೇಲ್​, ಎಸ್ಪಿ ಡಾ.ರಾಮ್​ ಎಲ್​. ಅರಸಿದ್ದಿ, ಎಡಿಸಿ ಸಿದ್ರಾಮೇಶ್ವರ, ಡಿಯುಡಿಸಿ ಪಿಡಿ ರೇಷ್ಮಾ ಹಾನಗಲ್​, ತಹಸೀಲ್ದಾರ್​ ವಿಠ್ಠಲ ಚೌಗಲಾ, ತಾಪಂ ಇಒ ತುಂಡಪ್ಪ ತುರಾದಿ, ಪಿಐ ಜಯಪ್ರಕಾಶ, ಜಂಟಿ ಕೃಷಿ ನಿರ್ದೇಶಕ ರುದ್ರೇಶಪ್ಪ, ವಾರ್ತಾಧಿಕಾರಿ ಗವಿಸಿದ್ದಪ್ಪ ಹೊಸಮನಿ, ನಗರಸಭೆ ಪೌರಾಯುಕ್ತ ಗಣಪತಿ ಪಾಟೀಲ್​ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net