ಸ್ವಚ್ಛತೆಯೇ ಸೇವೆ ಅಭಿಯಾನಕ್ಕೆ ಚಾಲನೆ

KOPPAL-SWACHA BHARAT-ABHIYAN-MLA-MP
KOPPAL-SWACHA BHARAT-ABIYAN-MLA-MP
ಕೊಪ್ಪಳದಲ್ಲಿ ಸ್ವಚ್ಛತೆಯೇ ಸೇವೆ ವಿಶೇಷ ಆಂದೋಲ ವಾಹನಗಳಿಗೆ ಶಾಸಕ ರಾಘವೇಂದ್ರ ಹಿಟ್ನಾಳ್, ಸಂಸದ ಸಂಗಣ್ಣ ಕರಡಿ ಚಾಲನೆ ನೀಡಿದರು. ಡಿಸಿ ನಲಿನ್ ಅತುಲ್, ಜಿಪಂ ಸಿಇಒ ರಾಹುಲ್ ರತ್ನಂ ಪಾಂಡೆಯ, ಅಪರ ಜಿಲ್ಲಾಧಿಕಾರಿ ಸಾವಿತ್ರಿ ಕಡಿ ಇದ್ದರು.
Published on

ಕೊಪ್ಪಳ: ಜಿಲ್ಲಾದ್ಯಂತ ಸೆ.15ರಿಂದ ಅ.2ವರೆಗೆ ಹಮ್ಮಿಕೊಂಡಿರುವ ಸ್ವಚ್ಛತೆಯೇ ಸೇವೆ ವಿಶೇಷ ಆಂದೋಲನಕ್ಕೆ ಶುಕ್ರವಾರ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಶಾಸಕ ರಾಘವೇಂದ್ರ ಹಿಟ್ನಾಳ್, ಸಂಸದ ಸಂಗಣ್ಣ ಕರಡಿ ಚಾಲನೆ ನೀಡಿದರು.

ಅ.2ರ ಗಾಂಧಿ ಜಯಂತಿ ದಿನವನ್ನು ಸ್ವಚ್ಛ ಭಾರತ ದಿನವಾಗಿ ಆಚರಿಸಲಾಗುತ್ತಿದೆ. ಗಾಂಧೀಜಿ ಕನಸಾದ ಸ್ವಚ್ಛತೆ ಎಂಬ ಧ್ಯೇಯ ವಾಕ್ಯ ಸಾಕಾರಗೊಳಿಸಲು ಅಭಿಯಾನ ಹಮ್ಮಿಕೊಳ್ಳಲಾಗಿದೆ. ಜಿಲ್ಲಾದ್ಯಂತ ಗ್ರಾಮೀಣ ಭಾಗಗಳಲ್ಲಿ ಆಂದೋಲನ ಜರುಗಲಿದೆ.

ಕಾರ್ಯಕ್ರಮ ಅಂಗವಾಗಿ ಜಿಪಂ ಉಪ ಕಾರ್ಯದರ್ಶಿ ಮಲ್ಲಪ್ಪ ತೊದಲಬಾಗಿ ಸ್ವಚ್ಛತಾ ಪ್ರತಿಜ್ಞಾ ವಿಧೀ ಬೋಧಿಸಿದರು. ಡಿಸಿ ನಲಿನ್ ಅತುಲ್, ಜಿಪಂ ಸಿಇಒ ರಾಹುಲ್ ರತ್ನಂ ಪಾಂಡೆಯ, ಅಪರ ಜಿಲ್ಲಾಧಿಕಾರಿ ಸಾವಿತ್ರಿ ಕಡಿ, ಎಸಿ ಕ್ಯಾಪ್ಟನ್ ಮಹೇಶ ಮಾಲಗಿತ್ತಿ, ತಹಸೀಲ್ದಾರ್ ವಿಠ್ಠಲ ಚೌಗಲಾ, ತಾಪಂ ಇಒ ದುಂಡಪ್ಪ ತುದಾರಿ, ಡಿಡಿಪಿಐ ಎಸ್.ಎಸ್.ಬಿರಾದಾರ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಚಿದಾನಂದ ಕುರಿ, ಡಿವೈಎಸ್ಪಿ ಶರಣಪ್ಪ ಸುಬೇದಾರ ಇತರರಿದ್ದರು.

ಕೊಪ್ಪಳದಲ್ಲಿ ಸ್ವಚ್ಛತೆಯೇ ಸೇವೆ ವಿಶೇಷ ಆಂದೋಲ ವಾಹನಗಳಿಗೆ ಶಾಸಕ ರಾಘವೇಂದ್ರ ಹಿಟ್ನಾಳ್, ಸಂಸದ ಸಂಗಣ್ಣ ಕರಡಿ ಚಾಲನೆ ನೀಡಿದರು. ಡಿಸಿ ನಲಿನ್ ಅತುಲ್, ಜಿಪಂ ಸಿಇಒ ರಾಹುಲ್ ರತ್ನಂ ಪಾಂಡೆಯ, ಅಪರ ಜಿಲ್ಲಾಧಿಕಾರಿ ಸಾವಿತ್ರಿ ಕಡಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net