ಅಯೋಧ್ಯೆಯಲ್ಲಿ ಹೊಸ ಅಧ್ಯಾಯ ಸೃಷ್ಠಿಯಾಗಲಿದೆ

17012021 Koppal Ram Mandir temple in Ayodhya Fundraising
Published on

ಕೊಪ್ಪಳ: ರಾಮಮಂದಿರ ನಿರ್ಮಾಣದಿಂದ ಅಯೋಧ್ಯೆಯಲ್ಲಿ ಹೊಸ ಅಧ್ಯಾಯ ಸೃಷ್ಠಿಯಾಗಲಿದೆ. ದೇಶದ ಪ್ರತಿಯೊಬ್ಬರೂ ರಾಮ ಮಂದಿರ ನಿರ್ಮಾಣಕ್ಕೆ ನಿಧಿ ಸಮರ್ಪಿಸಬೇಕು ಎಂದು ಬಿಜೆಪಿ ಮುಖಂಡ ಅಮರೇಶ ಕರಡಿ ಮನವಿ ಮಾಡಿದರು.

ಜಿಲ್ಲೆಯಲ್ಲಿ ಅಯೋಧ್ಯೆ ಶ್ರೀರಾಮ ಮಂದಿರ ತೀರ್ಥಕ್ಷೇತ್ರ ಟ್ರಸ್ಟ್ ಸಮಿತಿಯಿಂದ ಭಾನುವಾರ ಹಮ್ಮಿಕೊಂಡ ಅಯೋಧ್ಯೆ ಶ್ರೀ ರಾಮಮಂದಿರ ನಿರ್ಮಾಣ ಅಂಗವಾಗಿ ನಿಧಿ ಸಂಗ್ರಹಿಸಿ ಮಾತನಾಡಿದರು. ಶ್ರೀರಾಮ ಭಾರತೀಯ ಸಂಸ್ಕೃತಿ ಸಂಕೇತ. ಜಗತ್ತಿನ ಆದರ್ಶ ಪುರುಷ. ಅಯೋಧ್ಯೆಯಲ್ಲಿ ಐತಿಹಾಸಿಕ ಶ್ರೀರಾಮ ಮಂದಿರ ನಿರ್ಮಾಣವಾಗಲಿದೆ. ಅನೇಕರ ಹೋರಾಟದ ಫಲವಾಗಿ ಮಂದಿರ ನಿರ್ಮಾಣವಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಭಾರತೀಯರಿಂದಲೇ ಮಂದಿರ ನಿರ್ಮಾಣವಾಗಬೇಕೆಂಬ ಕನಸು ಕಂಡಿದ್ದಾರೆ. ಹೀಗಾಗಿ ಸರ್ವ ಸಮುದಾಯ ಬಾಂಧವರು ಜಾತಿ-ಧರ್ಮ, ಮತ-ಪಂಥ ತೊರೆದು ಕೈಜೋಡಿಸಬೇಕು ಎಂದು ಕರೆ ನೀಡಿದರು.

ನಗರದ ವಿವಿಧ ವಾರ್ಡ್‌ಗಳಲ್ಲಿ ನಿಧಿ ಸಂಗ್ರಹಿಸಲಾಯಿತು. ಜಿಪಂ ಸದಸ್ಯ ಗವಿಸಿದ್ದಪ್ಪ ಕರಡಿ, ಬಿಜೆಪಿ ನಗರ ಘಟಕ ಅಧ್ಯಕ್ಷ ಸುನೀಲ್ ಹೆಸರೂರು, ಮುಖಂಡರಾದ ಗವಿಸಿದ್ದಪ್ಪ ಡಂಬಳ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net