ಅತ್ಯಾಚಾರಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

Published on

ಕೊಪ್ಪಳ: ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಅತ್ಯಾಚಾರ ಎಸಗಿದಾತನಿಗೆ ಜಿಲ್ಲಾ ನ್ಯಾಯಾಲಯ 20 ವರ್ಷ ಕಠಿಣ ಜೈಲು ಶಿಕ್ಷೆ ಮತ್ತು 20 ಸಾವಿರ ರೂ. ದಂಡ ವಿಧಿಸಿ ಬುಧವಾರ ಆದೇಶ ಹೊರಡಿಸಿದೆ.

ಯಲಬುರ್ಗಾ ಪಟ್ಟಣದ ನಿವಾಸಿ ಬಸವರಾಜ ವೆಂಕಟೇಶ ಭಜಂತ್ರಿ ಅತ್ಯಾಚಾರ ಎಸಗಿ ಶಿೆಗೆ ಗುರಿಯಾದಾತ. ಪಟ್ಟಣದ ಹೊರ ವಲಯದಲ್ಲಿ ಬಾಲಕಿಯ ಮೇಲೆ ಬಲಾತ್ಕಾರ ನಡೆಸಿದ ಕುರಿತು ಬಾಲಕಿಯ ಸಂಬಂಧಿಕರು ನೀಡಿದ ದೂರಿನಂತೆ ಜ.1. 2022ರಂದು ಪಟ್ಟಣದ ಠಾಣೆಯಲ್ಲಿ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.

ಅಂದಿನ ಸಿಪಿಐ ವೀರಾರೆಡ್ಡಿ ತನಿಖೆ ನಡೆಸಿ ಜಿಲ್ಲಾ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ ಶಿೆ ವಿಧಿಸಿ ಆದೇಶಿಸಿದೆ. ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕಿ ಗೌರಮ್ಮ ದೇಸಾಯಿ ವಾದ ಮಂಡಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net