

ಕೊಪ್ಪಳ: ಯಲಬುರ್ಗಾ ತಾಲೂಕಿನ ಸಂಗನಾಳ ಗ್ರಾಮದ ಮೃತ ಯಮನೂರ ಸ್ವಾಮಿ ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರ ನೀಡುವಂತೆ ಒತ್ತಾಯಿಸಿ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂ, ದಲಿತ ಹಕ್ಕುಗಳ ಸಮಿತಿ ಪದಾಧಿಕಾರಿಗಳು ತಹಸೀಲ್ದಾರ್ ವಿಠ್ಠಲ ಚೌಗಲಾಗೆ ಮನವಿ ಸಲ್ಲಿಸಿದರು.
ೌರ ಮಾಡುವ ವಿಷಯಕ್ಕೆ ಸಂಬಂಧಿಸಿದಂತೆ ದಲಿತ ಯುವಕನನ್ನು ಕೊಲೆ ಮಾಡಲಾಗಿದೆ. ಗ್ರಾಮೀಣ ಭಾಗದಲ್ಲಿ ದಲಿತರಿಗೆ ರಕ್ಷಣೆ ಇಲ್ಲದಂತಾಗಿದೆ. ಯುವಕ ಕುಟುಂಬಕ್ಕೆ ಆಸರೆಯಾಗಿದ್ದ. ಹಣ ನೀಡಲಿಲ್ಲ ಎಂಬ ಕಾರಣಕ್ಕೆ ಕೊಲೆ ಮಾಡಿರುವುದು ಅಕ್ಷಮ್ಯ. ಜಿಲ್ಲೆಯಲ್ಲ ಪದೇ ಪದೆ ದಲಿತರು ಅಸ್ಪ-----ೃಶ್ಯತೆ ಅನುಭವಿಸುವುದು ಮುಂದುವರೆದಿದೆ. ಇದಕ್ಕೆ ಕಡಿವಾಣ ಇಲ್ಲದಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಯುವಕನ ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರ ನೀಡಿ. ಸರ್ಕಾರಿ ಉದ್ಯೋಗ ಕೊಡಿಸಿ. ಕೊಲೆ ಮಾಡಿದಾತನಿಗೆ ಕಠಿಣ ಶಿೆಯಾಗಬೇಕು. ಜಿಲ್ಲೆಯಲ್ಲಿ ದಲಿತರಿಗೆ ರಕ್ಷಣೆ ನೀಡಬೇಕು. ಇಲ್ಲದಿದ್ದರೆ ಜಿಲ್ಲಾದ್ಯಂತ ಹೋರಾಟ ಮಾಡುವುದಾಗಿ ಎಚ್ಚರಿಸಿದರು. ಪ್ರತಿಭಟನೆ ಬಳಿಕ ಮನವಿ ಸಲ್ಲಿಸಿದರು.
ಪ್ರಮುಖರಾದ ಬಸವರಾಜ ಮರಕುಂಬಿ, ಸುಂಕಪ್ಪ ಗದಗ, ಹುಸೇನಪ್ಪ ಕೆ., ಯಲ್ಲಪ್ಪ ಸಿಂಗನಾಳ, ಸಿಡ್ಲಿ ಹನುಮಂತ, ಮರಿನಾಗಪ್ಪ ಡಗ್ಗಿ, ಕಿರಮ್ಮ ಮಿರಗನತಂಡಿ, ಶಾಂತವ್ವ ಬೆಂಗಳೂರು ಮನಿ ಇತರರಿದ್ದರು.