ಮುನಿರಾಬಾದ್: ಸಮೀಪದ ಹಿಟ್ನಾಳ ಗ್ರಾಮದಲ್ಲಿ ರೈತ ಶಿವನಗೌಡ ಪಾಟೀಲ್ ಅವರಿಗೆ ಸೇರಿದ ಹುಲ್ಲಿನ ಬಣವೆಗೆ ಬುಧವಾರ ಬೆಂಕಿ ತಗುಲಿ ಸುಟ್ಟು ಭಸ್ಮವಾಗಿದೆ. ಸಾವಿರಾರು ರೂ. ಮೌಲ್ಯದ ಹುಲ್ಲು ಬೆಂಕಿಗೆ ಆಹುತಿಯಾಗಿದೆ. ಸ್ಥಳೀಯರು ಹಾಗೂ ಅಗ್ನಿಶಾಮಕ ಠಾಣೆ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.