ಕಚೇರಿಯೇ ಶಿಕ್ಷಕರ ಬಳಿ ಬರುವ ವ್ಯವಸ್ಥೆ

ಅಳವಂಡಿಯಲ್ಲಿ ಹಮ್ಮಿಕೊಂಡಿದ್ದ ಗುರುಸ್ಪಂದನಾ ಕಾರ್ಯಕ್ರಮವನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಹನುಮಂತಪ್ಪ ಉದ್ಘಾಟಿಸಿದರು. ಬಿಇಒ ಹನುಮಂತಪ್ಪ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಶರಣಬಸವಗೌಡ ಪಾಟೀಲ್, ತಾಲೂಕು ಅಧ್ಯಕ್ಷ ಹೊಳೆಬಸಯ್ಯ, ನಿಕಟಪೂರ್ವ ತಾಲೂಕು ಅಧ್ಯಕ್ಷ ಪ್ರಾಣೇಶ ಪೂಜಾರ ಇತರರಿದ್ದರು.
ಅಳವಂಡಿಯಲ್ಲಿ ಹಮ್ಮಿಕೊಂಡಿದ್ದ ಗುರುಸ್ಪಂದನಾ ಕಾರ್ಯಕ್ರಮವನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಹನುಮಂತಪ್ಪ ಉದ್ಘಾಟಿಸಿದರು. ಬಿಇಒ ಹನುಮಂತಪ್ಪ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಶರಣಬಸವಗೌಡ ಪಾಟೀಲ್, ತಾಲೂಕು ಅಧ್ಯಕ್ಷ ಹೊಳೆಬಸಯ್ಯ, ನಿಕಟಪೂರ್ವ ತಾಲೂಕು ಅಧ್ಯಕ್ಷ ಪ್ರಾಣೇಶ ಪೂಜಾರ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ವ್ಯವಸ್ಥೆ

ಕಚೇರಿಯೇ ಶಿಕ್ಷಕರ ಬಳಿ ಬರುವ ವ್ಯವಸ್ಥೆ

ಅಳವಂಡಿ: ಶಿಕ್ಷಕರ ಸಮಸ್ಯೆ ಹಾಗೂ ಅಭಿಪ್ರಾಯ ಹಂಚಿಕೊಳ್ಳಲು ಹಾಗೂ ಸ್ಥಳದಲ್ಲಿಯೇ ಪರಿಹರಿಸಲು ಗುರು ಸ್ಪಂದನ ಕಾರ್ಯಕ್ರಮ ಸಹಕಾರಿ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಹನುಮಂತಪ್ಪ ಹೇಳಿದರು.
ಗ್ರಾಮದ ಕೇಂದ್ರಿಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜಿಪಂ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿ ಕಾರ್ಯಾಲಯ, ಕ್ಷೇತ್ರ ಸಮನ್ವಯಾಧಿಕಾರಿಗಳ ಕಾರ್ಯಾಲಯ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಹಾಗೂ ತಾಲೂಕು ಘಟಕ ಸಹಯೋಗದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಗುರುಸ್ಪಂದನಾ ಕಾರ್ಯಕ್ರಮದಲ್ಲಿ ಮಾತನಾಡಿದರು.
ಶಿಕ್ಷಕರ ಗಳಿಕೆ ರಜೆಗಳನ್ನು ಹಾಗೂ ಶೈಕ್ಷಣಿಕ ಅರ್ಹತೆಯನ್ನು ಸೇವಾ ಪುಸ್ತಕದಲ್ಲಿ ನಮೂದಿಸಲಾಗುವದು. ಶಿಕ್ಷಕರ ಅಲೆದಾಟ ತಪ್ಪಿಸಿ ಸೇವಾ ಪುಸ್ತಕದಲ್ಲಿ ಅಗತ್ಯ ವಿಷಯಗಳನ್ನು ದಾಖಲಿಸುವುದು ಕಾರ್ಯಕ್ರಮದ ಉದ್ದೇಶವಾಗಿದೆ. ಶಿಕ್ಷಕರು ಸಣ್ಣಪುಟ್ಟ ಕೆಲಸಗಳಿಗಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ ಕಚೇರಿಯೇ ಶಿಕ್ಷಕರ ಬಳಿ ಬರುವ ವ್ಯವಸ್ಥೆಯಾಗಿದೆ. ವೈಯಕ್ತಿಕ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸುವ ಮೂಲಕ ಶಿಕ್ಷಕರಿಗೆ ನೆರವಾಗುತ್ತದೆ ಎಂದರು.
ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಶರಣಬಸವಗೌಡ ಪಾಟೀಲ್, ತಾಲೂಕು ಅಧ್ಯಕ್ಷ ಹೊಳೆಬಸಯ್ಯ, ನಿಕಟಪೂರ್ವ ತಾಲೂಕು ಅಧ್ಯಕ್ಷ ಪ್ರಾಣೇಶ ಪೂಜಾರ, ಪ್ರಧಾನ ಕಾರ್ಯದರ್ಶಿ ಬಾಳಪ್ಪ ಕಾಳೆ, ಪದವೀಧರ ಶಿಕ್ಷಕರ ತಾಲೂಕು ಅಧ್ಯಕ್ಷ ಮಂಜುನಾಥ ಕೇಸಲಾಪುರ, ರಾಜ್ಯ ವಿಕಲಚೇತನ ನೌಕರರ ಸಂಘದ ಅಧ್ಯಕ್ಷ ಬೀರಪ್ಪ ಅಂಡಗಿ, ನಿರ್ದೇಶಕರಾದ ನಫೀಜ್ ಖಾನ್, ರಮೇಶ ಬುಡ್ಡನಗೌಡ, ಬಸವರಾಜ ಜಿರ, ಗುರುಸ್ವಾಮಿ, ಸಿಆರ್‌ಪಿ ವಿಜಯಕುಮಾರ ಟಿಕಾರೆ, ಕೃಷ್ಣ, ಮುಖ್ಯಶಿಕ್ಷಕರಾದ ನಾರಾಯಣ, ಗುರುರಾಜ ಪಾಟೀಲ್, ರೇಣುಕಾ, ಸಿಬ್ಬಂದಿ ಮಿರಾಜುದ್ದೀನ್, ಸಮೀರ್, ಮೌನೇಶ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net