ಮೊಬೈಲ್ ಬಳಕೆಯಿಂದ ಶೈಕ್ಷಣಿಕ ಪ್ರಗತಿ ಕುಸಿತ

ಯಲಬುರ್ಗಾದಲ್ಲಿ ಹಮ್ಮಿಕೊಂಡಿದ್ದ ಯುವ ದಿನ ಕಾರ್ಯಕ್ರಮವನ್ನು ಹಿರಿಯ ಸಿವಿಲ್ ನ್ಯಾಯಾಧೀಶ ಜೆ.ರಂಗಸ್ವಾಮಿ ಉದ್ಘಾಟಿಸಿದರು. ವಕೀಲರ ಸಂಘದ ತಾಲೂಕಾಧ್ಯಕ್ಷ ಸುಭಾಷ್ ಹೊಂಬಳ, ಸಹಾಯಕ ಸರ್ಕಾರಿ ಅಭಿಯೋಜಕ ರವಿ ಹುಣಸಿಮರದ, ಅಪರ ಸರ್ಕಾರಿ ವಕೀಲರಾದ ಮಲ್ಲನಗೌಡ ಪಾಟೀಲ್, ಈ.ಟಿ.ಮಹಾಂತೇಶ, ಹಸನ್‌ಸಾಬ್ ನದಾಫ್ ಇತರರಿದ್ದರು.

Published on

ಪ್ರಮುಖ ಮುಖ್ಯಾಂಶಗಳು

  • ಪ್ರಗತಿ
  • ಕುಸಿತ

ಮೊಬೈಲ್ ಬಳಕೆಯಿಂದ ಶೈಕ್ಷಣಿಕ ಪ್ರಗತಿ ಕುಸಿತ

ಯಲಬುರ್ಗಾ: ಯುವ ಸಮುದಾಯ ಅತಿಯಾದ ಮೊಬೈಲ್ ಬಳಕೆಯಿಂದ ದೂರ ಇರಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಜೆ. ರಂಗಸ್ವಾಮಿ ಹೇಳಿದರು.
ಪಟ್ಟಣದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ನ್ಯಾಯವಾದಿಗಳ ಸಂಘದಿಂದ ಬುಧವಾರ ಹಮ್ಮಿಕೊಂಡಿದ್ದ ಯುವ ದಿನ ಕಾರ್ಯಕ್ರಮದಲ್ಲಿ ಮಾತನಾಡಿದರು.
ಯುವಕರು ಸ್ವಾಮಿ ವಿವೇಕಾನಂದರ ಸದೃಢ ಚಿಂತನೆಗಳು ಮತ್ತು ಉತ್ಸಾಹ ಗುಣ ಅಳವಡಿಸಿಕೊಳ್ಳಿ. ಸಾಮಾಜಿಕ ಜಾಲತಾಣದಲ್ಲಿ ಹೆಚ್ಚು ಕಾಲಕಳೆಯುತ್ತಿದ್ದು, ದೇಶದ ಶೈಕ್ಷಣಿಕ ಪ್ರಗತಿ ಕುಸಿಯುತ್ತಿದೆ. ಕಲಿಕೆಯಲ್ಲಿ ಎದುರಾಗುವ ಕೆಟ್ಟ ವಿಚಾರಗಳನ್ನು ಬದಿಗೊತ್ತಿ ಒಳ್ಳೆಯ ಅಂಶಗಳನ್ನು ರೂಢಿಸಿಕೊಳ್ಳಬೇಕು. ಗುಟ್ಖಾ, ಸಿಗರೇಟ್, ಮದ್ಯ, ಮಾದಕ ವಸ್ತುಗಳ ದುಶ್ಚಟಕ್ಕೆ ಬಲಿಯಾಗುತ್ತಿದ್ದು, ದೇಶದ ಪ್ರಗತಿಗೆ ಮಾರಕವಾಗುತ್ತಿದೆ ಎಂದರು.
ಪ್ರಾಚಾರ್ಯ ಸಿದ್ದರಾಮಯ್ಯ ಹಿರೇಮಠ, ವಕೀಲರ ಸಂಘದ ತಾಲೂಕಾಧ್ಯಕ್ಷ ಸುಭಾಷ್ ಹೊಂಬಳ, ಸಹಾಯಕ ಸರ್ಕಾರಿ ಅಭಿಯೋಜಕ ರವಿ ಹುಣಸಿಮರದ, ಅಪರ ಸರ್ಕಾರಿ ವಕೀಲರಾದ ಮಲ್ಲನಗೌಡ ಪಾಟೀಲ್, ಈ.ಟಿ.ಮಹಾಂತೇಶ, ಹಸನ್‌ಸಾಬ್ ನದಾಫ್, ನ್ಯಾಯಾಲಯ ಸಿಬ್ಬಂದಿ ರಾಘವೇಂದ್ರ ಕೋಳಿಹಾಳ, ವಿನಾಯಕ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net