ಮತದಾರರ ಪಟ್ಟಿಯಲ್ಲಿ ಅರ್ಹರನ್ನು ಸೇರಿಸಿ

ಬಂಡಿ ಗ್ರಾಮದಲ್ಲಿ ಬ್ಲಾಕ್ ಕಾಂಗ್ರೆಸ್‌ನಿಂದ ಹಮ್ಮಿಕೊಂಡಿದ್ದ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ಜಾಗೃತಿ ಹಾಗೂ ತರಬೇತಿ ಕಾರ್ಯಾಗಾರದಲ್ಲಿ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ಸುಧೀರ್ ಕೊರ್ಲಳ್ಳಿ ಮಾತನಾಡಿದರು. ಜಿಪಂ ಮಾಜಿ ಸದಸ್ಯ ಎ.ಜಿ. ಭಾವಿಮನಿ, ಯುವ ಕಾಂಗ್ರೆಸ್ ಕಾರ್ಯಾಧ್ಯಕ್ಷ ಈಶ್ವರ ಅಟಮಾಳಗಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆರಿಬಸಪ್ಪ ನಿಡಗುಂದಿ ಇತರರಿದ್ದರು.

Published on
ಯಲಬುರ್ಗಾ: ಅರ್ಹ ಮತದಾರರು ಮತದಾರ ಪಟ್ಟಿಯಲ್ಲಿ ಉಳಿಯುವಂತೆ ಬಿಎಲ್ಎಗಳು ಕೆಲಸ ಮಾಡಬೇಕು. ಪಟ್ಟಿಯಿಂದ ದೂರವಾದರೆ ಸೌಲಭ್ಯದಿಂದ ವಂಚಿತರಾಗುತ್ತಾರೆ. ಈ ನಿಟ್ಟಿನಲ್ಲಿ ಜಾಗೃತಿ ಮೂಡಿಸಬೇಕು ಎಂದು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ಸುಧೀರ್ ಕೊರ್ಲಳ್ಳಿ ಹೇಳಿದರು.
ತಾಲೂಕಿನ ಬಂಡಿ ಗ್ರಾಮದಲ್ಲಿ ಗುರುವಾರ ಬ್ಲಾಕ್ ಕಾಂಗ್ರೆಸ್‌ನಿಂದ ಹಮ್ಮಿಕೊಂಡಿದ್ದ ಮುಧೋಳ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಬಳೂಟಗಿ, ಬಂಡಿ ಹಾಗೂ ತುಮ್ಮರಗುದ್ದಿ ಗ್ರಾಮ ಪಂಚಾಯಿತಿಗಳ ಬಿಎಲ್‌ಎ-2ಗಳು ಮತ್ತು ಪಕ್ಷದ ಮುಖಂಡರಿಗೆ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ಹಮ್ಮಿಕೊಂಡಿದ್ದ ಜಾಗೃತಿ ಹಾಗೂ ತರಬೇತಿ ಕಾರ್ಯಾಗಾರದಲ್ಲಿ ಮಾತನಾಡಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆರಿಬಸಪ್ಪ ನಿಡಗುಂದಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಕ್ಷೇತ್ರದ ಮತದಾರರು ತಮ್ಮ ಹಕ್ಕನ್ನು ಉಳಿಸುವ ಕಾರ್ಯಕ್ಕೆ ಮುಂದಾಗಬೇಕು. ಸಂವಿಧಾನ ಮತದಾನ ಹಕ್ಕು ಕೊಟ್ಟಿದ್ದು ಎಸ್‌ಐಆರ್ ಮೂಲಕ ಬಿಜೆಪಿ ಅಡ್ಡದಾರಿಗೆ ಕೈಹಾಕಿದೆ. ದೇಶದ ನಾನಾ ರಾಜ್ಯದ ಚುನಾವಣೆ ಸಂದರ್ಭದಲ್ಲಿ ಮತದಾರರು ತಮ್ಮ ಹಕ್ಕು ಕಳೆದುಕೊಂಡಿದ್ದಾರೆ. ಹೀಗಾಗಿ ಅವಳಿ ತಾಲೂಕಿನ ಅರ್ಹ ಮತದಾರರು ಪಟ್ಟಿಯಲ್ಲಿ ಇರುವ ನಿಟ್ಟಿನಲ್ಲಿ ಬಿಎಲ್ಎ2 ಕೆಲಸ ಮಾಡಬೇಕು ಎಂದರು.
ತಾಪಂ ಮಾಜಿ ಸದಸ್ಯ ದೊಡ್ಡ ಬಸಪ್ಪ ಭಾವಿಮನಿ, ಮುಖಂಡರಾದ ಶೇಖಪ್ಪ ವಣಗೇರಿ, ಕಳಕಗೌಡ ಪಾಟೀಲ, ರಿಜ್ವಾನ್ ದಮ್ಮೂರು, ಶರಣಗೌಡ ಬಸಾಪೂರು,ಭೀಮಣ್ಣ ಜರಕುಂಟಿ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net