ಜಿಲ್ಲೆಯನ್ನು ಬರಪೀಡಿತ ಎಂದು ಘೋಷಿಸದಿದ್ದರೆ ಹೋರಾಟ ತೀವ್ರವಾಗುತ್ತದೆ

ಕೊಪ್ಪಳವನ್ನು ಬರಪೀಡಿತ ಎಂದು ಘೋಷಿಸುವಂತೆ ಆಗ್ರಹಿಸಿ ಜಿಲ್ಲಾ ಬಿಜೆಪಿ ಜಿಲ್ಲಾಡಳಿತ ಭವನದ ಎದುರು ಅಹೋರಾತ್ರಿ ಧರಣಿ ಕೈಗೊಂಡು, ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಕುಷ್ಟಗಿ ಶಾಸಕ ದೊಡ್ಡನಗೌಡ ಪಾಟೀಲ್​, ವಿಪ ಸದಸ್ಯೆ ಹೇಮಲತಾ ನಾಯಕ, ಮಾಜಿ ಶಾಸಕ ಪರಣ್ಣ ಮನವಳ್ಳಿ, ರಾಜ್ಯ ಕಾರ್ಯದರ್ಶಿ ಶರಣು ತಳ್ಳಿಕೇರಿ, ಜಿಲ್ಲಾಧ್ಯಕ್ಷ ನವೀನ್​ ಗುಳಗಣ್ಣವರ, ಅಪ್ಪಣ್ಣ ಪದಕಿ ಇದ್ದರು.
ಕೊಪ್ಪಳವನ್ನು ಬರಪೀಡಿತ ಎಂದು ಘೋಷಿಸುವಂತೆ ಆಗ್ರಹಿಸಿ ಜಿಲ್ಲಾ ಬಿಜೆಪಿ ಜಿಲ್ಲಾಡಳಿತ ಭವನದ ಎದುರು ಅಹೋರಾತ್ರಿ ಧರಣಿ ಕೈಗೊಂಡು, ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಕುಷ್ಟಗಿ ಶಾಸಕ ದೊಡ್ಡನಗೌಡ ಪಾಟೀಲ್​, ವಿಪ ಸದಸ್ಯೆ ಹೇಮಲತಾ ನಾಯಕ, ಮಾಜಿ ಶಾಸಕ ಪರಣ್ಣ ಮನವಳ್ಳಿ, ರಾಜ್ಯ ಕಾರ್ಯದರ್ಶಿ ಶರಣು ತಳ್ಳಿಕೇರಿ, ಜಿಲ್ಲಾಧ್ಯಕ್ಷ ನವೀನ್​ ಗುಳಗಣ್ಣವರ, ಅಪ್ಪಣ್ಣ ಪದಕಿ ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಶಾಸಕ ದೊಡ್ಡನಗೌಡ ಪಾಟೀಲ್​ ಎಚ್ಚರಿಕೆ
  • ಅಹೋರಾತ್ರ ಧರಣಿ

ಕೊಪ್ಪಳ : ಜಿಲ್ಲೆಯನ್ನು ತಕ್ಷಣ ಬರಪೀಡಿತ ಎಂದು ಘೋಷಿಸಿ ರೈತರಿಗೆ ಸೂಕ್ತ ಪರಿಹಾರ ಒದಗಿಸಬೇಕು. ಸರ್ಕಾರ ವಿಳಂಬ ಮಾಡಿದರೆ ಜಿಲ್ಲಾ ಬಿಜೆಪಿಯಿಂದ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು ಎಂದು ಕುಷ್ಟಗಿ ಶಾಸಕ ದೊಡ್ಡನಗೌಡ ಪಾಟೀಲ್​ ಎಚ್ಚರಿಕೆ ನೀಡಿದರು.

ನಗರದ ಜಿಲ್ಲಾಡಳಿತ ಭವನದ ಎದುರು ಜಿಲ್ಲಾ ಬಿಜೆಪಿಯಿಂದ ಸೋಮವಾರ ಹಮ್ಮಿಕೊಂಡಿದ್ದ ಅಹೋರಾತ್ರಿ ಧರಣಿಯಲ್ಲಿ ಮಾತನಾಡಿದರು.
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್​ ಮುಖ್ಯಮಂತ್ರಿಯಾಗಿ ಎರಡು ತಿಂಗಳ ಅವಧಿಯಲ್ಲಿ ರೈತರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಬದಲು ಸಂಪುಟ ವಿಸ್ತರಣೆಗಾಗಿ ಬೆಂಗಳೂರಿನಿಂದ ದೆಹಲಿಗೆ, ದೆಹಲಿಯಿಂದ ಬೆಂಗಳೂರಿಗೆ ಓಡಾಡುವುದರಲ್ಲೇ ಕಾಲ ಕಳೆದಿದ್ದಾರೆ. ಕೊಪ್ಪಳ ಜಿಲ್ಲೆಗೆ ಎರಡು ಸಚಿವ ಸ್ಥಾನಗಳು ದೊರೆತಿರುವುದು ಸ್ವಾಗತಾರ್ಹ. ಇದರಿಂದ ಜಿಲ್ಲೆಯ ಅಭಿವೃದ್ಧಿಯಾಗಬೇಕು. ಎರಡರಲ್ಲಿ ಒಂದು ಕೋಟಾದಡಿ, ಮತ್ತೊಂದು ನೋಟಿನಡಿ ದೊರೆತಿದೆ. ಬಹುಶ@ ಕೊಪ್ಪಳ ಶಾಸಕರು ನೋಟ್​ ನೀಡುವಲ್ಲಿ ಚೌಕಾಸಿ ಮಾಡಿದ್ದರಿಂದ ಅವರಿಗೆ ಸಚಿವ ಸ್ಥಾನ ಕೈತಪ್ಪಿರಬಹುದು ಎಂದು ವ್ಯಂಗ್ಯಮಾಡಿ. ಬಿಜೆಪಿ ರೈತರ ಬರ ಸಮಸ್ಯೆ ನಿವಾರಣೆಗೆ ಹೋರಾಡುತ್ತಿದ್ದರೆ, ಕಾಂಗ್ರೆಸ್​ ರಾಜಕೀಯ ಬರ ನೀಗಿಸಿಕೊಳ್ಳಲು ಪ್ರಯತ್ನಿಸುತ್ತಿದೆ. ಈಗಾದರೂ ಜಿಲ್ಲೆಯ ಕಾಂಗ್ರೆಸ್​ ಶಾಸಕರು ತಮ್ಮ ಕ್ಷೇತ್ರಗಳತ್ತ ಗಮನಹರಿಸಿ ರೈತರ ಸಂಕಷ್ಟ ನಿವಾರಣೆ ಮಅಡಬೇಕು ಎಂದರು.
ಕಾಂಗ್ರೆಸ್​ ಸರ್ಕಾರದ್ದು ಕಲ್ಲುಬಂಡೆಯಂತಹ ಸರ್ಕಾರವಾಗಿದೆ. ಎಷ್ಟೇ ಪ್ರತಿಭಟನೆ, ಟೀಕೆ ಮಾಡಿದರೂ ಸ್ಪಂದಿಸುತ್ತಿಲ್ಲ. ಜಿಲ್ಲೆಗೆ ಯಾರೇ ಉಸ್ತುವಾರಿಯಾದರೂ ಅಧಿಕಾರ ವಹಿಸಿಕೊಂಡ ತಕ್ಷಣ ಕೊಪ್ಪಳವನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಿ ಪರಿಹಾರ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಇಲ್ಲವಾದರೆ ಬಿಜೆಪಿ ಮುಂದಿನ ದಿನಗಳಲ್ಲಿ ತೀವ್ರ ಹೋರಾಟ ಕೈಗೊಳ್ಳಲಿದೆ ಎಂದು ಎಚ್ಚರಿಕೆ ನೀಡಿದರು.
ವಿಪ ಸದಸ್ಯೆ ಹೇಮಲತಾ ನಾಯಕ ಮಾತನಾಡಿ, ರೈತರ ಹಿತಾಸಕ್ತಿಯನ್ನು ಕಾಪಾಡುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಜಿಲ್ಲೆಯಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದರೂ ಜನಪ್ರತಿನಿಧಿಗಳು ಸಮರ್ಪಕ ಕ್ರಮ ಕೈಗೊಂಡಿಲ್ಲ. ತುಂಗಭದ್ರಾ ಜಲಾಶಯದಿಂದ ಎಡ ಮತ್ತು ಬಲದಂಡೆ ಕಾಲುವೆಗಳಿಗೆ ತಕ್ಷಣ ನೀರು ಹರಿಸಿ, ರೈತರ ನಷ್ಟಕ್ಕೆ ಪರಿಹಾರ ನೀಡಬೇಕು. ಮಳೆ ಕೊರತೆ ಮತ್ತು ನೀರಿನ ಅಭಾವದಿಂದ ಬೆಳೆಗಳು ಸಂಕಷ್ಟಕ್ಕೆ ಸಿಲುಕಿದ್ದು, ಸರ್ಕಾರ ತುರ್ತು ಕ್ರಮ ಕೈಗೊಳ್ಳಬೇಕು ಎಂದರು.
ಅಹೋರಾತ್ರಿ ಧರಣಿ ನಡುವೆ ಮಧ್ಯಾಹ್ನ ಮಳೆ ಬಂದರು ಬಿಜೆಪಿ ಮುಂಖಡರು ಟೆಂಟಿನಲ್ಲೇ ಕೂತು ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.
ಮಾಜಿ ಶಾಸಕರಾದ ಪರಣ್ಣ ಮನವಳ್ಳಿ, ಬಸವರಾಜ ದಡೆಸುಗೂರ, ರಾಜ್ಯ ಬಿಜೆಪಿ ಕಾರ್ಯದರ್ಶಿ ಶರಣು ತಳ್ಳಿಕೇರಿ, ಬಿಜೆಪಿ ಜಿಲ್ಲಾಧ್ಯಕ್ಷ ನವೀನ್​ ಗುಳಗಣ್ಣವರ, ಪ್ರಮುಖರಾದ ಅಪ್ಪಣ್ಣ ಪದಕಿ, ಬಸವರಾಜ ರಾಜೂರು, ನೀಲಕಂಠಯ್ಯ ಹಿರೇಮಠ, ಚಂದ್ರು ಕವಲೂರು, ಗವಿರಾಜ ಗೊರವರ, ಕೀರ್ತಿ ಪಾಟೀಲ್​, ಗೀತಾ ಮುತ್ತಾಳ, ರಾಜು ಬಾಕಳೆ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net