ಹನುಮಸಾಗರ: ನಿಜಶರಣ ಅಂಬಿಗರ ಚೌಡಯ್ಯ ಅವರು ವಚನಗಳ ಮೂಲಕ ಸಮಾಜದ ಮೌಢ್ಯತೆ ಹಾಗೂ ಜಾತಿ ಪದ್ಧತಿ ನಿರ್ಮೂಲನೆಗೆ ಶ್ರಮಿಸಿದ್ದಾರೆ ಎಂದು ಕರ್ನಾಟಕ ಪಬ್ಲಿಕ್ ಸ್ಕೂಲ್ ಪ್ರಾಚಾರ್ಯ ಭೀಮಪ್ಪ ಗೊಲ್ಲರ ಹೇಳಿದರು.
ಪಟ್ಟಣದ ಕರ್ನಾಟಕ ಪಬ್ಲಿಕ್ ಸ್ಕೂಲ್ನ ಪಿಯು ಕಾಲೇಜಿನಲ್ಲಿ ಬುಧವಾರ ಅಂಬಿಗರ ಚೌಡಯ್ಯ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಅಂಬಿಗರ ಚೌಡಯ್ಯ 12ನೇ ಶತಮಾನದ ಶ್ರೇಷ್ಠ ವಚನಕಾರ. ವಿದ್ಯಾರ್ಥಿಗಳು ಅವರ ಕುರಿತು ತಿಳಿದುಕೊಳ್ಳಬೇಕು.
ಚೌಡಯ್ಯ ಅವರ ವಿಚಾರಧಾರೆಗಳು ಸರ್ವಕಾಲಕ್ಕೂ ಸ್ಫೂರ್ತಿದಾಯಕ. ಭಕ್ತಿಯ ಜತೆಗೆ ಅಂತರಂಗದ ಶುದ್ಧಿಗೆ ಹೆಚ್ಚಿನ ಆದ್ಯತೆ ನೀಡಿದ್ದರು. ಭಕ್ತಿ ಹಾಗೂ ಜ್ಞಾನ ಇದ್ದರೆ ಮಾತ್ರ ಯಶಸ್ಸು ಸಾಧ್ಯ ಎಂದು ಸಾರಿದ್ದಾರೆ ಎಂದರು.