ಹಿರಿಯ ನಾಗರಿಕರ ಕಲ್ಯಾಣಕ್ಕಾಗಿ ಅನ್ನ ಸುವಿಧಾ ಯೋಜನೆ

ಕನಕಗಿರಿ ತಾಲೂಕಿನ ಚಿಕ್ಕಡಂಕನಕಲ್ ಗ್ರಾಪಂನಲ್ಲಿ ಹಮ್ಮಿಕೊಂಡಿದ್ದ ಗ್ಯಾರಂಟಿ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಗ್ರಾಪಂ ಆಡಳಿತಾಧಿಕಾರಿ ಸಿಡಿಪಿಒ ವಿರೂಪಾಕ್ಷಿ, ಪಿಡಿಒ ಲಕ್ಷ್ಮಣ, ಗ್ರಾಪಂ ಮಾಜಿ ಅಧ್ಯಕ್ಷೆ ನೀಲಮ್ಮ, ಮಾಜಿ ಉಪಾಧ್ಯಕ್ಷ ರಾಮಚಂದ್ರಗೌಡ ಅವರನ್ನು ಸನ್ಮಾನಿಸಲಾಯಿತು. ಅನುಷ್ಠಾನ ಸಮಿತಿ ಸದಸ್ಯರಾದ ಜಗದೀಶ್ ರಾಥೋಡ್, ಜಗದೀಶ್ ಚನ್ನವೀರಪ್ಪ, ಭೀಮೇಶ್, ವೀರೇಶ್, ಯಮನೂರಪ್ಪ, ತಾಪಂ ವಿಷಯ ನಿರ್ವಾಹಕ ಕೊಟ್ರಯ್ಯ ಸ್ವಾಮಿ, ಪಿಡಿಒ ಲಕ್ಷ್ಮಣ ಇತರರಿದ್ದರು.

Published on

ಪ್ರಮುಖ ಮುಖ್ಯಾಂಶಗಳು

  • ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ಹಜರತ್ ಹುಸೇನ್ ಹೇಳಿಕೆ
ಕನಕಗಿರಿ: ರಾಜ್ಯ ಸರ್ಕಾರ ಚುನಾವಣೆಗೂ ಪೂರ್ವದಲ್ಲಿ ನೀಡಿದ ಭರವಸೆಯಂತೆ ಅಧಿಕಾರಕ್ಕೆ ಬಂದ ಮೇಲೆ ಗ್ಯಾರಂಟಿಗಳನ್ನು ಜಾರಿಗೊಳಿಸಿದ್ದು, ಗ್ರಾಮೀಣ ಭಾಗದ ಅರ್ಹ ಫಲಾನುಭವಿಗಳು ಯೋಜನೆಗಳಿಂದ ವಂಚಿತರಾಗಬಾರದು ಎಂದು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ಹಜರತ್ ಹುಸೇನ್ ಹೇಳಿದರು.
ತಾಲೂಕಿನ ಚಿಕ್ಕಡಂಕನಕಲ್ ಗ್ರಾಪಂನಲ್ಲಿ ಬುಧವಾರ ಹಮ್ಮಿಕೊಂಡಿದ್ದ ಗ್ಯಾರಂಟಿ ಯೋಜನೆಯ ಪ್ರಗತಿ ಪರಿಶೀಲನಾ ಸಭೆ ಹಾಗೂ ಫಲಾನುಭವಿಗಳ ಜತೆಗಿನ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದರು.
ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಅನ್ನಭಾಗ್ಯದಡಿ ಪ್ರತಿ ತಿಂಗಳು ಪಡಿತರ ನೀಡಲಾಗುತ್ತಿದೆ. 75 ವರ್ಷ ಮೇಲಿನ ಹಿರಿಯ ನಾಗರಿಕರಿಗೆ ಮನೆ ಬಾಗಿಲಿಗೆ ಪಡಿತರ ತಲುಪಿಸಲು ಸರ್ಕಾರ ಅನ್ನ ಸುವಿಧಾ ಯೋಜನೆ ಜಾರಿಗೊಳಿಸಿದೆ. ಹಿರಿಯ ನಾಗರಿಕರ ಕಲ್ಯಾಣಕ್ಕಾಗಿ ಯೋಜನೆ ಆರಂಭಿಸಿದ್ದು, 75 ವರ್ಷ ಮೇಲ್ಪಟ್ಟವರು ಹಾಗೂ ಮನೆಯಲ್ಲಿ ಕೇವಲ ಒಬ್ಬ ಅಥವಾ ಇಬ್ಬರು ಹಿರಿಯರಷ್ಟೇ ಇರುವ ಕುಟುಂಬದ ಮನೆ ಬಾಗಿಲಿಗೆ ಪಡಿತರ ತಲುಪಿಸಬೇಕು ಎಂದರು. ಗೃಹಲಕ್ಷ್ಮಿ, ಯುವನಿಧಿ, ಗೃಹಜ್ಯೋತಿ ಹಾಗೂ ಶಕ್ತಿ ಯೋಜನೆಯ ಪ್ರಗತಿ ಪರಿಶೀಲಿಸಿ, ಸದರಿ ಯೋಜನೆಯ ಅನುಷ್ಠಾನದಲ್ಲಿ ಇರುವ ತಾಂತ್ರಿಕ ಸಮಸ್ಯೆ ಹಾಗೂ ಇತರ ಸಮಸ್ಯೆಗಳ ಬಗ್ಗೆ ಚರ್ಚಿಸಿ ಸೂಕ್ತ ಪರಿಹಾರ ಒದಗಿಸಲು ಅಧಿಕಾರಿಗಳಿಗೆ ಸೂಚಿಸಿದರು.
ತಾಲೂಕು ಯೋಜನಾಧಿಕಾರಿ ಡಾ.ಹುಲುಗಪ್ಪ, ಗ್ರಾಪಂ ಆಡಳಿತಾಧಿಕಾರಿ ವಿರೂಪಾಕ್ಷಿ, ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸದಸ್ಯರಾದ ಜಗದೀಶ್ ರಾಥೋಡ್, ಜಗದೀಶ್ ಚನ್ನವೀರಪ್ಪ, ಭೀಮೇಶ್, ವೀರೇಶ್, ಯಮನೂರಪ್ಪ, ತಾಪಂ ವಿಷಯ ನಿರ್ವಾಹಕ ಕೊಟ್ರಯ್ಯ ಸ್ವಾಮಿ, ಪಿಡಿಒ ಲಕ್ಷ್ಮಣ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net