ಕೊಪ್ಪಳದಲ್ಲಿ ಆಶಾ ಕಾರ್ಯಕರ್ತೆಯರು ವಿವಿಧ ಬೇಡಿಕೆ ಇಡೇರಿಸುವಂತೆ ಒತ್ತಾಯಿಸಿ ಬುಧವಾರ ಜಿಲ್ಲಾ ಆರ್ಸಿಎಚ್ ಅಧಿಕಾರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಜಿಲ್ಲಾ ಸಮಿತಿ ಅಧ್ಯಕ್ಷ ಶರಣು ಗಡ್ಡಿ, ಕಾರ್ಯದರ್ಶಿ ಕೌಶಲ್ಯ ದೊಡ್ಡಗೌಡರ್,ಪದಾಧಿಕಾರಿಗಳಾದ, ಶೋಭಾ ಹೂಗಾರ್, ಅನ್ನಪೂರ್ಣ ಶಿವಮ್ಮ ಇದ್ದರು.
Published on:
Copied
Follow Us
ಪ್ರಮುಖ ಮುಖ್ಯಾಂಶಗಳು
ಆಶಾ ಕಾರ್ಯಕರ್ತೆಯರಿಂದ ಮನವಿ ಸಲ್ಲಿಕೆ
ಕೊಪ್ಪಳ : ಬಾಕಿ ಪ್ರೋತ್ಸಾಹಧನ ಬಿಡುಗಡೆಗೆ ಒತ್ತಾಯಿಸಿ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಜಿಲ್ಲಾ ಸಮಿತಿಯಿಂದ ಬುಧವಾರ ಜಿಲ್ಲಾ ಆರ್ಸಿಎಚ್ ಅಧಿಕಾರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ಬಾಕಿ ಇರುವ ಕೇಂದ್ರದ 3-4 ತಿಂಗಳ ಪ್ರೋತ್ಸಾಹಧನ ಹಾಗೂ ರಾಜ್ಯದ 12 ತಿಂಗಳ ಗೌರವಧನವನ್ನು ತಕ್ಷಣವೇ ಬಿಡುಗಡೆ ಮಾಡಬೇಕು. ಕಳೆದ ತಿಂಗಳಿಂದ ಆಶಾ ನಿಧಿ ತಂತ್ರಾಂಶದಲ್ಲಿ ನಿಷ್ಕ್ರಿಯಗೊಳಿಸಿದ 9 ವಿಧದ ಆಶಾ ಸೇವೆಗಳನ್ನು ತಕ್ಷಣ ಪುನರಾರಂಭ ಮಾಡಬೇಕು. ಕೆಲಸದ ಪ್ರಮಾಣಕ್ಕೆ ಅನುಗುಣವಾಗಿ ಪ್ರೋತ್ಸಾಹಧನ ಮತ್ತು ಗೌರವಧನ ಹೆಚ್ಚಳ ಮಾಡಬೇಕು. ಆರೋಗ್ಯ ಸೇವೆಯಲ್ಲಿ ಪ್ರಮುಖ ಪಾತ್ರವಹಿಸುವ ಆಶಾ ಕಾರ್ಯಕರ್ತೆಯರಿಗೆ ಮೂಲಭೂತ ಸೌಲಭ್ಯಗಳು, ಭದ್ರತೆ ಮತ್ತು ಗೌರವ ಒದಗಿಸಬೇಕು ಎಂದರು.
ಆಶಾ ಕಾರ್ಯಕರ್ತೆಯರಿಗೆ ನೀಡಲಾಗುತ್ತಿರುವ ಪ್ರೋತ್ಸಾಹಧನವನ್ನು ಕಡಿತಗೊಳಿಸದೆ ನಿಯಮಿತವಾಗಿ ಪಾವತಿಸಬೇಕು. ಜಿಲ್ಲಾ ಹಾಗೂ ರಾಜ್ಯ ಮಟ್ಟದಲ್ಲಿ ಆಶಾ ಕಾರ್ಯಕರ್ತೆಯರ ಸಮಸ್ಯೆಗಳಿಗೆ ತ್ವರಿತ ಪರಿಹಾರ ನೀಡಲು ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. ಸರ್ಕಾರದ ವಿವಿಧ ಆರೋಗ್ಯ ಯೋಜನೆಗಳಲ್ಲಿ ಆಶಾ ಕಾರ್ಯಕರ್ತೆಯರ ಪಾತ್ರವನ್ನು ಪರಿಗಣಿಸಿ ಅವರಿಗೆ ಪ್ರೋತ್ಸಾಹಕ ಯೋಜನೆಗಳನ್ನು ಜಾರಿಗೊಳಿಸಬೇಕು ಹಾಗೂ ನ್ಯಾಯಯುತ ಸೌಲಭ್ಯಗಳನ್ನು ನೀಡಬೇಕು ಎಂದು ಮನವಿ ಸಲ್ಲಿಸಲಾಯಿತು..
ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಜಿಲ್ಲಾ ಸಮಿತಿ ಅಧ್ಯಕ್ಷ ಶರಣು ಗಡ್ಡಿ, ಕಾರ್ಯದರ್ಶಿ ಕೌಶಲ್ಯ ದೊಡ್ಡಗೌಡರ್,ಪದಾಧಿಕಾರಿಗಳಾದ, ಶೋಭಾ ಹೂಗಾರ್, ಅನ್ನಪೂರ್ಣ, ಶಿವಮ್ಮ ಇತರರಿದ್ದು.