ಶಾಖಾಪೂರದಲ್ಲಿ ಆಯೋಜಿಸಿದ್ದ ಸಂಗೀತ ಪರಂಪರೆ ಮಹೋತ್ಸವ ಕಾರ್ಯಕ್ರಮದಲ್ಲಿ ಶಾಸಕ ದೊಡ್ಡನಗೌಡ ಪಾಟೀಲ್ ಬುಧವಾರ ಮಾತನಾಡಿದರು. ಕನ್ನಡ-ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕಿರಣ್‌ಕುಮಾರ್, ಕೊಪ್ಪಳ ವಿವಿ ಕುಲಪತಿ ಡಾ. ಎಸ್.ವಿ. ಡಾಣಿ ಹಾಗೂ ಕಲಾವಿದರು ಇದ್ದರು.
ಕುಷ್ಟಗಿ: ನಾಡಿನ ಸಂಸ್ಕೃತಿ, ಕಲೆ ಹಾಗೂ ಪರಂಪರೆಗೆ ತನ್ನದೆ ಭವ್ಯ ಇತಿಹಾಸವಿದೆ ಎಂದು ವಿಪ ಮುಖ್ಯ ಸಚೇತಕ ದೊಡ್ಡನಗೌಡ ಪಾಟೀಲ್ ಹೇಳಿದರು.
ಶಾಖಾಪೂರ ದುರ್ಗಾದೇವಿ ದೇವಸ್ಥಾನದ ಆವರಣದಲ್ಲಿ ಗಾನಯೋಗಿ ಸಂಗೀತ ಕಲಾ ಸಂಸ್ಥೆ ಹಾಗೂ ಕನ್ನಡ-ಸಂಸ್ಕೃತಿ ಇಲಾಖೆಯಿಂದ ಹಮ್ಮಿಕೊಂಡಿದ್ದ ಸಂಗೀತ ಪರಂಪರೆ ಮಹೋತ್ಸವ ಕಾರ್ಯಕ್ರಮಕ್ಕೆ ಬುಧವಾರ ಚಾಲನೆ ನೀಡಿ ಮಾತನಾಡಿದರು.
ಕಲೆ- ಸಂಸ್ಕೃತಿ ಉಳಿವಿಗೆ ಪ್ರತಿಯೊಬ್ಬರೂ ಮುಂದಾಗಬೇಕಿದೆ. ಇಂದಿನ ಯುವ ಪೀಳಿಗೆಯಲ್ಲಿ ಸಂಸ್ಕೃತಿ ಬೆಳೆಸಿಕೊಳ್ಳುವ ಮನೋಭಾವ ಮೂಡಬೇಕಿದೆ ಎಂದರು. ಇಲಾಖೆಯ ಸಹಾಯಕ ನಿರ್ದೇಶಕ ಕಿರಣ್‌ಕುಮಾರ್ ಮಾತನಾಡಿ, ಅಳಿವಿನಂಚಿನಲ್ಲಿರುವ ಮೂಲ ಸಂಸ್ಕೃತಿಯನ್ನು ಇಂದಿನ ತಲೆಮಾರಿಗೆ ತಲುಪಿಸಲು ಇಲಾಖೆಯು ವಿಭಿನ್ನ ಕಾರ್ಯಕ್ರಮಗಳನ್ನು ಆಯೋಜಿಸುತ್ತಾ ಬಂದಿದೆ ಎಂದರು.