ಹಿರಿಯ ಆಶಾ ಕಾರ್ಯಕರ್ತೆ ಪೂರ್ಣಿಮಾ ಮಾತನಾಡಿ, ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಆಶಾ ಕಾರ್ಯಕರ್ತೆಯರಿಗೆ ನೀಡಲಾಗುತ್ತಿದ್ದ ಕೆಲವು ಕಾರ್ಯಗಳ ಪ್ರೋತ್ಸಾಹಧನವನ್ನು ಯಾವುದೇ ಪೂರ್ವ ಸೂಚನೆ ಇಲ್ಲದೆ ಸ್ಥಗಿತಗೊಳಿಸಲಾಗಿದೆ. ಮಹಿಳಾ ಮತ್ತು ಪುರುಷರ ಕುಟುಂಬ ಕಲ್ಯಾಣ ಶಸ್ತ್ರಚಿಕಿತ್ಸೆ, ಪ್ರಸವೋತ್ತರ ಶಸ್ತ್ರಚಿಕಿತ್ಸೆ ಸೇರಿದಂತೆ ಒಟ್ಟು ಒಂಬತ್ತು ಚಟುವಟಿಕೆಗಳಿಗೆ ಸಂಬಂಧಿಸಿದ ಮಾಡ್ಯೂಲ್‌ಗಳನ್ನು ಆಶಾ ನಿಧಿ ತಂತ್ರಾಂಶದಲ್ಲಿ ನಿಷ್ಕ್ರಿಯಗೊಳಿಸಿರುವುದರಿಂದ ಆಶಾ ಕಾರ್ಯಕರ್ತೆಯರಿಗೆ ಆರ್ಥಿಕ ನಷ್ಟ ಉಂಟಾಗುತ್ತಿದೆ.