ಕುಷ್ಟಗಿ ತಾಲೂಕಿನ ಗೊರೇಬಿಹಾಳ ಸಹಿಪ್ರಾ ಶಾಲೆಗೆ ಶಿಕ್ಷಕರನ್ನು ನಿಯೋಜಿಸುವಂತೆ ಆಗ್ರಹಿಸಿ ಗ್ರಾಮಸ್ಥರು ಡಿಡಿಪಿಐ ಇಲಾಖೆ ಶಾಲಾ ಶಿಕ್ಷಣ ಇಲಾಖೆ ಸಿಬ್ಬಂದಿಗೆ ಮನವಿ ಸಲ್ಲಿಸಿದರು. ಪ್ರಮುಖರಾದ ಶರಣಪ್ಪ ಪಿ.ಮಾಗಿ, ಪಾರಪ್ಪ ಮಡಿಯಪ್ಪನವರ್, ದೇವಪ್ಪ ಮೆಣಸಗಿ ಇತರರಿದ್ದರು.
ಕುಷ್ಟಗಿ: ತಾಲೂಕಿನ ಗೊರೇಬಿಹಾಳ ಗ್ರಾಮದ ಸಹಿಪ್ರಾ ಶಾಲೆಗೆ ಶಿಕ್ಷಕರನ್ನು ನಿಯೋಜಿಸಬೇಕು ಎಂದು ಒತ್ತಾಯಿಸಿ ಗ್ರಾಮಸ್ಥರು ಡಿಡಿಪಿಐ ಇಲಾಖೆ ಶಾಲಾ ಶಿಕ್ಷಣ ಇಲಾಖೆ ಸಿಬ್ಬಂದಿಗೆ ಮಂಗಳವಾರ ಮನವಿ ಸಲ್ಲಿಸಿದರು.
ಗ್ರಾಮದಲ್ಲಿ 1-8ನೇ ತರಗತಿವರೆಗೆ ಶಾಲೆ ನಡೆಯುತ್ತಿದ್ದು, ಸುಸಜ್ಜಿತ ಕಟ್ಟಡವಿದೆ. ಆದರೆ, ಮಕ್ಕಳಿಗೆ ಗುಣಾತ್ಮಕ ಶಿಕ್ಷಣ ದೊರೆಯುತ್ತಿಲ್ಲ. 180ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಖಾಯಂ ಶಿಕ್ಷಕರಿಲ್ಲದೇ ಶಿಕ್ಷಣದಿಂದ ವಂಚಿತರಾಗಿದ್ದಾರೆ. ವಿಷಯವಾರು ಶಿಕ್ಷಕರ ಅವಶ್ಯವಿದ್ದು, ಕೂಡಲೇ ಶಾಲೆಗೆ ಶಿಕ್ಷಕರನ್ನು ನಿಯೋಜಿಸಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ಶಾಲೆಗೆ ಬೀಗ ಹಾಕಿ ಮಕ್ಕಳೊಂದಿಗೆ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಆಗ್ರಹಿಸಿದರು.