ಬಾಬಾಸಾಹೇಬರ ಆದರ್ಶಗಳು ಪ್ರತಿಯೊಬ್ಬರಿಗೂ ದಾರಿದೀಪ

ಗಂಗಾವತಿ ತಾಲೂಕಿನ ಕಡೇಬಾಗಿಲು ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತ್ಯುತ್ಸವ ನಿಮಿತ್ತ ಬಿಜೆಪಿ ಯುವ ಮೋರ್ಚಾ ಗ್ರಾಮೀಣ ಮಂಡಲದಿಂದ ಸ್ವಚ್ಛಂತಾದೋಲನ ಹಮ್ಮಿಕೊಳ್ಳಲಾಗಿತ್ತು. ಮಾಜಿ ಶಾಸಕ ಪರಣ್ಣ ಮುನವಳ್ಳಿ, ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಮೌನೇಶ ದಢೇಸೂಗೂರು ಇತರರಿದ್ದರು.

Published on

ಪ್ರಮುಖ ಮುಖ್ಯಾಂಶಗಳು

  • ಮಾಜಿ ಶಾಸಕ ಪರಣ್ಣ ಮುನವಳ್ಳಿ ಹೇಳಿಕೆ
  • ಗಂಗಾವತಿ ಕಡೇಬಾಗಿಲು ಸ್ವಚ್ಛತಾ ಆಂದೋಲನ
ಗಂಗಾವತಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತ್ಯುತ್ಸವ ನಿಮಿತ್ತ ಬಿಜೆಪಿ ಯುವ ಮೋರ್ಚಾ ಗ್ರಾಮೀಣ ಮಂಡಲದಿಂದ ತಾಲೂಕಿನ ಕಡೇಬಾಗಿಲು ಗ್ರಾಮದಲ್ಲಿ ಸ್ವಚ್ಛತಾ ಆಂದೋಲನ ಹಮ್ಮಿಕೊಳ್ಳಲಾಗಿತ್ತು.
ಅಂಬೇಡ್ಕರ್ ವೃತ್ತವನ್ನು ಸ್ವಚ್ಛಗೊಳಿಸಿ, ಅಲಂಕರಿಸಲಾಯಿತು. ನಂತರ ಗ್ರಾಮದಲ್ಲಿ ಸ್ವಚ್ಛತಾ ಆಂದೋಲನ ಕೈಗೊಂಡು, ಪರಿಸರ ಸಂರಕ್ಷಣೆ ಕುರಿತು ಜನರಲ್ಲಿ ಜಾಗೃತಿ ಮೂಡಿಸಿ, ಸಸಿಗಳನ್ನು ನೆಡಲಾಯಿತು.
ಮಾಜಿ ಶಾಸಕ ಪರಣ್ಣ ಮುನವಳ್ಳಿ ಮಾತನಾಡಿ, ಬಿಜೆಪಿ ಪಕ್ಷವು ಗ್ರಾಮೀಣ ಭಾಗದಲ್ಲಿ ಪರಿಸರ ಸ್ವಚ್ಛತೆಗೆ ಆದ್ಯತೆ ನೀಡಿದ್ದು, ಅಂಬೇಡ್ಕರ್ ಜಯಂತ್ಯುತ್ಸವನ್ನು ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದೆ. ವಿಶ್ವಕ್ಕೆ ಶ್ರೇಷ್ಟ ಸಂವಿಧಾನ ನೀಡಿದ ಬಾಬಾಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಆದರ್ಶಗಳು ಪ್ರತಿಯೊಬ್ಬರಿಗೂ ದಾರಿದೀಪ ಎಂದರು.
ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಮೌನೇಶ ದಢೇಸೂಗೂರು, ನಗರ ಮಂಡಲ ಅಧ್ಯಕ್ಷ ಚಂದ್ರು ಹಿರೂರು, ತಾಲೂಕಾಧ್ಯಕ್ಷ ವಿಶ್ವನಾಥ ಮಾಲಿಪಾಟೀಲ್, ಪದಾಧಿಕಾರಿಗಳಾದ ರಮೇಶ ಹೊಸ್ಮಲಿ, ಪ್ರಶಾಂತ ಕುಲ್ಕರ್ಣಿ, ಅರ್ಜುನ ರಾಯ್ಕರ್, ಮದನ್, ರವೀಂದ್ರ ಹಿರೇಮಠ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net