ಹೊಸಲಿಂಗಾಪುರ ಅಂಗನವಾಡಿ ಕೇಂದ್ರದಲ್ಲಿ ಹಮ್ಮಿಕೊಂಡಿದ್ದ ಶಾಲಾ ಪ್ರವೇಶೋತ್ಸವ ಕಾರ್ಯಕ್ರಮದಲ್ಲಿ ಮಕ್ಕಳಿಗೆ ನೋಟ್‌ಬುಕ್ ವಿತರಿಸಲಾಯಿತು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಅಮರೇಶ್ ಹಾವಿನ, ಸಿಡಿಪಿಒ ರೋಹಿಣಿ ಕೊಟಗಾರ, ಮುಖ್ಯ ಶಿಕ್ಷಕಿ ನಾಗರತ್ನಾ, ಕಲಿಕೆ ಟಾಟಾ ಟ್ರಸ್ಟ್ ಜಿಲ್ಲಾ ವ್ಯವಸ್ಥಾಪಕ ಅಶೋಕ್ ಇದ್ದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಅಮರೇಶ್ ಹಾವಿನ ಹೇಳಿಕೆ
ಶಾಲಾ ಪ್ರವೇಶೋತ್ಸವ
ಕೊಪ್ಪಳ: ಮೂರರಿಂದ ಆರು ವಯಸ್ಸಿನ ಮಕ್ಕಳ ದೈಹಿಕ, ವಾನಸಿಕ ಬೆಳವಣಿಗೆಗೆ ಬುನಾದಿ ಹಂತದ ಶಿಕ್ಷಣ ಬಹಳ ಮುಖ್ಯ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಅಮರೇಶ ಹಾವಿನ ಹೇಳಿದರು.
ತಾಲೂಕಿನ ಹೊಸಲಿಂಗಾಪುರ ಅಂಗನವಾಡಿ ಕೇಂದ್ರಗಳಲ್ಲಿ ಹಮ್ಮಿಕೊಂಡಿದ್ದ ಮೂರು ವರ್ಷ ಶಾಲಾ ಪೂರ್ವ ಶಿಕ್ಷಣದಿಂದ 1ನೇ ತರಗತಿಗೆ ದಾಖಲಾಗುತ್ತಿರುವ ಮಕ್ಕಳ ಶಾಲಾ ಪ್ರವೇಶೋತ್ಸವ ಕಾರ್ಯಕ್ರಮದಲ್ಲಿ ಬುಧವಾರ ವಾತನಾಡಿದರು.
ಮಕ್ಕಳ ಶೈಕ್ಷಣಿಕ ಬಲವರ್ಧನೆಗೆ ಕೆಕೆಆರ್‌ಡಿಬಿ, ಜಿಪಂ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಕಲಿಕೆ ಟಾಟಾ ಟ್ರಸ್ಟ್ ಸಹಭಾಗಿತ್ವದಲ್ಲಿ ಜಿಲ್ಲೆಯಲ್ಲಿ ಶಾಲಾ ಪೂರ್ವ ಶಿಕ್ಷಣ ಬಲವರ್ಧನೆ ಕಾರ್ಯಕ್ರಮವನ್ನು ಅನುಷ್ಠಾನ ವಾಡಲಾಗುತ್ತಿದೆ ಎಂದರು.
ಶಿಶು ಅಭಿವೃದ್ಧಿ ಯೋಜನೆ ಮೂಲಕ ಹೊಸಲಿಂಗಪುರ ಗ್ರಾಮದ 5 ಅಂಗನವಾಡಿ ಕೇಂದ್ರಗಳಿಂದ ಒಟ್ಟು 20 ಮಕ್ಕಳು ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಗೆ ದಾಖಲಾಗುತ್ತಿರುವ ಹಿನ್ನೆಲೆಯಲ್ಲಿ ಬೀಳ್ಕೊಡುಗೆ ಹಾಗೂ ಶಾಲೆಗೆ ಪ್ರವೇಶೋತ್ಸವ ಆಚರಿಸಲಾಯಿತು.
ಕೊಪ್ಪಳ ಸಿಡಿಪಿಒ ರೋಹಿಣಿ ಕೊಟಗಾರ, ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ನಾಗರತ್ನಾ, ಕಲಿಕೆ ಟಾಟಾ ಟ್ರಸ್ಟ್ ಜಿಲ್ಲಾ ವ್ಯವಸ್ಥಾಪಕ ಅಶೋಕ್, ವಲಯ ಮೇಲ್ವಿಚಾರಕಿ ಸುಮಂಗಲ ಸಜ್ಜನ್ ಇತರರಿದ್ದರು.