ರೋಗ ಬರದಂತೆ ಎಚ್ಚರ ವಹಿಸಿ

ಕುಷ್ಟಗಿಯ ಪಶು ಆಸ್ಪತ್ರೆ ಆವರಣದಲ್ಲಿ 9ನೇ ಸುತ್ತಿನ ಕಾಲುಬಾಯಿ ರೋಗ ಲಸಿಕಾ ಅಭಿಯಾನಕ್ಕೆ ಜಿಲ್ಲಾಧಿಕಾರಿ ಡಾ.ಸುರೇಶ್ ಬಿ.ಇಟ್ನಾಳ್ ಚಾಲನೆ ನೀಡಿದರು. ವಿಪ ಮುಖ್ಯ ಸಚೇತಕ ದೊಡ್ಡನಗೌಡ ಪಾಟೀಲ್, ಪಶುಪಾಲನೆ ಇಲಾಖೆ ಸಹಾಯಕ ನಿರ್ದೇಶಕ ಡಾ.ಆನಂದ ದೇವರನಾವದಗಿ, ತಾಪಂ ಇಒ ಪಂಪಾಪತಿ ಹಿರೇಮಠ ಇತರರಿದ್ದರು.
ಕುಷ್ಟಗಿಯ ಪಶು ಆಸ್ಪತ್ರೆ ಆವರಣದಲ್ಲಿ 9ನೇ ಸುತ್ತಿನ ಕಾಲುಬಾಯಿ ರೋಗ ಲಸಿಕಾ ಅಭಿಯಾನಕ್ಕೆ ಜಿಲ್ಲಾಧಿಕಾರಿ ಡಾ.ಸುರೇಶ್ ಬಿ.ಇಟ್ನಾಳ್ ಚಾಲನೆ ನೀಡಿದರು. ವಿಪ ಮುಖ್ಯ ಸಚೇತಕ ದೊಡ್ಡನಗೌಡ ಪಾಟೀಲ್, ಪಶುಪಾಲನೆ ಇಲಾಖೆ ಸಹಾಯಕ ನಿರ್ದೇಶಕ ಡಾ.ಆನಂದ ದೇವರನಾವದಗಿ, ತಾಪಂ ಇಒ ಪಂಪಾಪತಿ ಹಿರೇಮಠ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಲಸಿಕಾ ಅಭಿಯಾನ

ರೋಗ ಬರದಂತೆ ಎಚ್ಚರ ವಹಿಸಿ

ಕುಷ್ಟಗಿ: ಜಾನುವಾರುಗಳಿಗೆ ಕಾಲುಬಾಯಿ ರೋಗ ಬಾರದಂತೆ ತಡೆಯಲು ಮುನ್ನೆಚ್ಚರಿಕಾ ಕ್ರಮವಾಗಿ ಲಸಿಕೆ ಹಾಕಿಸಬೇಕೆಂದು ಜಿಲ್ಲಾಧಿಕಾರಿ ಡಾ.ಸುರೇಶ್ ಬಿ.ಇಟ್ನಾಳ್ ಹೇಳಿದರು.
ಪಟ್ಟಣದ ಪಶು ಸಂಗೋಪನಾ ಹಾಗೂ ಪಶು ಆಸ್ಪತ್ರೆ ಆವರಣದಲ್ಲಿ ಶುಕ್ರವಾರ ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ ಹಮ್ಮಿಕೊಂಡಿದ್ದ 9ನೇ ಸುತ್ತಿನ ಕಾಲುಬಾಯಿ ರೋಗ ಲಸಿಕಾ ಅಭಿಯಾನದಲ್ಲಿ ಮಾತನಾಡಿದರು.
ತಾಲೂಕಿನಲ್ಲಿ 73,325 ಜಾನುವಾರುಗಳಿವೆ. ಹತ್ತಿರದ ಪಶು ವೈದ್ಯಕೀಯ ಸಂಸ್ಥೆಗಳಿಂದ ಏ.23ರಿಂದ ಮೇ 22ರವರೆಗೆ ಇಲಾಖೆ ಸಿಬ್ಬಂದಿ ಮನೆಗಳಿಗೆ ತೆರಳಿ ಕಾಲುಬಾಯಿ ರೋಗ ನಿಯಂತ್ರಣಕ್ಕೆ ಉಚಿತವಾಗಿ ಲಸಿಕೆ ಹಾಕಲಿದ್ದು, ಗ್ರಾಮಸ್ಥರು ಲಸಿಕೆದಾರರಿಗೆ ಸಹಕರಿಸಿ ಎಂದರು.
ವಿಪ ಮುಖ್ಯ ಸಚೇತಕ ಹಾಗೂ ಶಾಸಕ ದೊಡ್ಡನಗೌಡ ಪಾಟೀಲ್ ಮಾತನಾಡಿ, ಗ್ರಾಮೀಣ ಭಾಗದಲ್ಲಿ ರೈತರು ಜಾನುವಾರಗಳಿಗೆ ಸಕಾಲಕ್ಕೆ ಲಸಿಕೆಯನ್ನು ಹಾಕಿಸಿ ರೋಗಮುಕ್ತ ಮಾಡಲು ಕೈಜೋಡಿಸಬೇಕು ಎಂದು ತಿಳಿಸಿದರು.
ಪಶುಪಾಲನಾ ಇಲಾಖೆ ಸಹಾಯಕ ನಿರ್ದೇಶಕ ಡಾ.ಆನಂದ ದೇವರನಾವದಗಿ, ತಾಪಂ ಇಒ ಪಂಪಾಪತಿ ಹಿರೇಮಠ, ತಹಸೀಲ್ದಾರ್ ಅಶೋಕ ಶಿಗ್ಗಾವಿ, ಹಿರಿಯ ವೈದ್ಯಾಧಿಕಾರಿ ಡಾ.ಸಿದ್ದಲಿಂಗಯ್ಯ ಶಂಕಿನ್, ಪಶು ಇಲಾಖೆ ಸಿಬ್ಬಂದಿ ಇದ್ದರು.
ಲಸಿಕೆದಾರರು ಬಂದಾಗ ಸಹಕರಿಸಿ: ಕುಷ್ಟಗಿ ತಾಲೂಕಿನಾದ್ಯಾಂತ 73,325 ದನ ಮತ್ತು ಎಮ್ಮೆಗಳಿದ್ದು, ಹತ್ತಿರದ ಪಶು ವೈದ್ಯಕೀಯ ಸಂಸ್ಥೆಗಳಿಂದ ಕಾಲುಬಾಯಿ ರೋಗ ಲಸಿಕೆ ಹಾಕಲಾಗುವುದು ಎಂದು ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ ಹಿರಿಯ ಪಶುವೈದ್ಯಾಧಿಕಾರಿ ಡಾ.ಸಿದ್ದಲಿಂಗಯ್ಯ ಶಂಕೀನ್ ಹೇಳಿದರು.
ತಾಲೂಕಿನ ಎಂ.ಗುಡದೂರಲ್ಲಿ ಏರ್ಪಡಿಸಿದ್ದ 9ನೇ ಸುತ್ತಿನ ಕಾಲುಬಾಯಿ ರೋಗ ಲಸಿಕಾ ಅಭಿಯಾನದಲ್ಲಿ ಗುರುವಾರ ಮಾತನಾಡಿದರು.
ಗ್ರಾಮಸ್ಥರು ಲಸಿಕೆದಾರರು ಮನೆ ಬಾಗಿಲಿಗೆ ಬಂದಾಗ ಸಹಕರಿಸಬೇಕೆಂದು ಕೋರಿದರು. ಸಿಬ್ಬಂದಿ ಸಂಗಪ್ಪ ಕರನಕಹಳ್ಳಿ, ಪ್ರವೀಣ್ ಬಾಳಿಗಿಡದ, ಸೌಮ್ಯಾ ಪಟ್ಟಣಶೆಟ್ಟಿ, ಉಮೇಶ್, ವೀರೇಶ್, ಕರಿಂಸಾಬ್, ಪಶುಸಖಿಯರಾದ ನಿರ್ಮಲಾ, ಹುಲಿಗೆಮ್ಮ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net