ಎಲ್ಲೆಂದರಲ್ಲಿ ನೀರು ನಿಲ್ಲದಂತೆ ಜಾಗ್ರತೆ ವಹಿಸಿ

ಅಳವಂಡಿಯ ಶ್ರೀ ಸಿದ್ದೇಶ್ವರ ಕಾಲೇಜಿನಲ್ಲಿ ಮಲೇರಿಯಾ ವಿರೋಧಿ ಮಾಸಚಾರಣೆ ಕಾರ್ಯಕ್ರಮವನ್ನು ಡಿವೈಡಿಎಚ್‌ಇಒ ದೇವಮ್ಮ ಉದ್ಘಾಟಿಸಿದರು. ಆರೋಗ್ಯ ನಿರೀಕ್ಷಣಾಧಿಕಾರಿ ಸೈಯದ್ ಅಬ್ಬಾಸ್, ಬಿಎಚ್‌ಸಿಒ ಸಾವಿತ್ರಿ ಹಂಚಿನಾಳ, ಹಿರಿಯ ಶಿಕ್ಷಕಿ ಸಂಪಕ್ಕಾ, ಶಿಕ್ಷಕರಾದ ಹನುಮಂತ ಲಮಾಣಿ, ಎಂ.ಎಸ್.ಕೊಪ್ಪಳ, ನೀಲಪ್ಪ ಹಕ್ಕಂಡಿ, ಅಂಬರೀಶ ಬೋಚನಹಳ್ಳಿ, ಗಣೇಶ, ಗಾಯತ್ರಿ ಇತರರಿದ್ದರು.

Published on

ಪ್ರಮುಖ ಮುಖ್ಯಾಂಶಗಳು

  • ಜಿಲ್ಲಾ ಆರೋಗ್ಯ ಉಪ ಶಿಕ್ಷಣಾಧಿಕಾರಿ ದೇವಮ್ಮ ಹೇಳಿಕೆ
  • ರಾಷ್ಟ್ರೀಯ ಮಲೇರಿಯಾ ವಿರೋಧಿ ಮಾಸಚಾರಣೆ
ಅಳವಂಡಿ: ಮಲೇರಿಯಾಮುಕ್ತ ಸಮಾಜ ನಿರ್ಮಾಣ ಪ್ರತಿಯೊಬ್ಬರ ಕರ್ತವ್ಯ ಎಂದು ಜಿಲ್ಲಾ ಆರೋಗ್ಯ ಉಪ ಶಿಕ್ಷಣಾಧಿಕಾರಿ ದೇವಮ್ಮ ಹೇಳಿದರು.
ಗ್ರಾಮದ ಶ್ರೀ ಸಿದ್ದೇಶ್ವರ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ರಾಷ್ಟ್ರೀಯ ವಾಹಕ ಆಶ್ರಿತ ರೋಗಗಳ ನಿಯಂತ್ರಣ ಕಾರ್ಯಕ್ರಮದಡಿ ರಾಷ್ಟ್ರೀಯ ಮಲೇರಿಯಾ ವಿರೋಧಿ ಮಾಸಚಾರಣೆ ನಿಮಿತ್ತ ಮಂಗಳವಾರ ಹಮ್ಮಿಕೊಂಡಿದ್ದ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ಮನೆ ಸುತ್ತಲಿನ ಪರಿಸರ ಸ್ವಚ್ಛವಾಗಿಟ್ಟುಕೊಳ್ಳಬೇಕು. ಮಳೆಗಾಲ ಆರಂಭವಾಗಿದ್ದು, ಹಳೆಯ ಟೈಯರ್, ಪ್ಲಾಸ್ಟಿಕ್ ಕಪ್, ತೆಂಗಿನ ಚಿಪ್ಪುಗಳಲ್ಲಿ ನೀರು ಸಂಗ್ರಹವಾಗದಂತೆ ಎಚ್ಚರವಹಿಸಿ ಎಂದರು. ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ರವೀಂದ್ರ ಕಮ್ಮಾರ ಮಾತನಾಡಿ, ರಾತ್ರಿ ಮಲಗುವಾಗ ಕಡ್ಡಾಯವಾಗಿ ಸೊಳ್ಳೆ ಪರದೆ ಬಳಸಬೇಕು. ರೋಗದ ಲಕ್ಷಣ ಕಂಡು ಬಂದಲ್ಲಿ ಹತ್ತಿರದ ಆಸ್ಪತ್ರೆಗೆ ಭೇಟಿ ನೀಡಿ ಚಿಕಿತ್ಸೆ ಪಡೆಯಿರಿ ಎಂದು ತಿಳಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net