ತಾಲೂಕಿನ ದದೇಗಲ್ ರಾಜೀವ್ಗಾಂಧಿ ಗ್ರಾಮೀಣ ಶಿಕ್ಷಣ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡಿದ್ದ ವಿಶ್ವ ತಂಬಾಕು ರಹಿತ ದಿನಾಚರಣೆ ಜಾಗೃತಿ ಕಾರ್ಯಕ್ರಮವನ್ನು ನ್ಯಾ.ಮಹಾಂತೇಶ ಎಸ್. ದರಗದ ಉದ್ಘಾಟಿಸಿದರು. ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ನಂದಕುಮಾರ ಎಚ್., ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ. ರವೀಂದ್ರನಾಥ ಎಂ.ಎಚ್., ರಾಚಮ್ಮ ಹಿರೇಮಠ ಇದ್ದರು.
Published on:
Copied
Follow Us
ಪ್ರಮುಖ ಮುಖ್ಯಾಂಶಗಳು
ನ್ಯಾ. ಮಹಾಂತೇಶ ದರಗದ
ವಿಶ್ವ ತಂಬಾಕು ರಹಿತ ದಿನಾಚರಣೆ
ಕೊಪ್ಪಳ : ತಂಬಾಕು ಮುಕ್ತ ಸಮಾಜ ನಿಮಾರ್ಣ ಮಾಡುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾದೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾಂತೇಶ ಎಸ್. ದರಗದ ಹೇಳಿದರು.
ತಾಲೂಕಿನ ದದೇಗಲ್ ರಾಜೀವ್ಗಾಂಧಿ ಗ್ರಾಮೀಣ ಶಿಕ್ಷಣ ಮಹಾವಿದ್ಯಾಲಯದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ವಿಶ್ವ ತಂಬಾಕು ರಹಿತ ದಿನಾಚರಣೆ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ಇತ್ತೀಚೆಗೆ ಯುವಕರು ತಂಬಾಕಿಗೆ ಹೆಚ್ಚು ಆಕರ್ಷಿತರಾಗುತ್ತಿದ್ದಾರೆ. ತಂಬಾಕು ಸೇವನೆಯಿಂದ ಆರೋಗ್ಯದ ಜತೆಗೆ ಹಣವು ಕಳೆದುಕೊಳ್ಳುತ್ತಾರೆ. ಅಲ್ಲದೇ, ಇದರಿಂದ ಸಮಾಜದ ಮೇಲೆ ದುಷ್ಪರಿಣ ಬೀರುತ್ತದೆ. ಈ ಹಿನ್ನೆಲೆಯಲ್ಲಿ ತಂಬಾಕು ಮುಕ್ತ ಸಮಾಜ ನಿಮಾರ್ಣ ಮಾಡಲು ಪ್ರತಿಯೊಬ್ಬರ ಕೈಜೋಡಿಸಬೇಕು ಎಂದರು.
ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ನಂದಕುಮಾರ ಎಚ್. ಮಾತನಾಡಿ, ಆಕರ್ಷಣೆ ಬಹಿರಂಗಪಡಿಸುವುದು- ನಿಕೋಟಿನ್ ಮತ್ತು ತಂಬಾಕು ವ್ಯಸನವನ್ನು ಎದುರಿಸುವುದು ಎಂಬ ಘೋಷವಾಕ್ಯದೊಂದಿಗೆ ವಿಶ್ವ ತಂಬಾಕು ರಹಿತ ದಿನಾಚರಣೆ ಕಾರ್ಯಕ್ರಮ ಆಚರಿಸಲಾಗುತ್ತಿದೆ. ಡಬ್ಲ್ಯೂ ಎಚ್.ಓ ಪ್ರಕಾರ ತಂಬಾಕಿನಲ್ಲಿ ಯುವಕರನ್ನು ತಂಬಾಕು ಆಕರ್ಷಿಸಲು ಸುವಾಸನೆ, ವರ್ಣರಂಜಿತ ಪ್ಯಾಕೇಜಿಂಗ್ ಮತ್ತು ಸಾಮಾಜಿಕ ಮಾಧ್ಯಮವನ್ನು ಹೇಗೆ ಬಳಸುತ್ತದೆ ಎಂಬುವದನ್ನು ಬಹಿರಂಗಪಡಿಸುವುದು ಈ ಘೋಷವಾಕ್ಯದ ಉದ್ದೇಶವಾಗಿದೆ ಎಂದರು.
ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ. ರವೀಂದ್ರನಾಥ ಎಂ.ಎಚ್. ಮಾತನಾಡಿ, ಇತ್ತಿಚಿನ ದಿನಗಳಲ್ಲಿ ಯುವಕರು ಹಾಗೂ ಕಾಲೇಜಿನ ವಿದ್ಯಾರ್ಥಿಗಳು ಹೆಚ್ಚಾಗಿ ದುಶ್ಚಟ್ಟಕ್ಕೆ ಒಳಗಾಗುತಿದ್ದಾರೆ. ತಂಬಾಕು ಸೇವನೆಯಿಂದ ದೂರವಿದ್ದು, ಯುವಕರು ಜಾಗೃತರಾಗಿ ತಮ್ಮ ವಿದ್ಯಾಭ್ಯಾಸ ಮತ್ತು ಉತ್ತಮ ಜೀವನದ ಕಡೆಗೆ ಹೆಚ್ಚು ಗಮನ ಹರಿಸಬೇಕು. ಪ್ರಶಿಕ್ಷಣಾರ್ಥಿಗಳು ಉತ್ತಮ ಜೀವನವನ್ನು ಆಯ್ದುಕೊಳ್ಳಿ ತಂಬಾಕನ್ನಲ್ಲ ಎಂದು ಹೇಳಿದರು.
ಕಾಲೇಜಿನ ಹಿರಿಯ ಉಪನ್ಯಾಸಕಿ ರಾಚಮ್ಮ ಹಿರೇಮಠ, ವಿವಿಧ ಕಾರ್ಯಕ್ರಮ ಅನುಷ್ಠಾನಾಧಿಕಾರಿ ಡಾ. ಹೆಚ್.ಪ್ರಕಾಶ, ಡಾ. ಗೋನಾಳ ಕುಮಾರಸ್ವಾಮಿ, ಸಹ ಉಪನ್ಯಾಸಕರಾದ ದೇವಮ್ಮ, ಬಸವರಾಜ, ಬಿ.ಹೆಚ್.ಇ.ಓ ಗಂಗಮ್ಮ ಇತರರಿದ್ದರು.