ಗ್ರಾಮದಿಂದ ಕುಷ್ಟಗಿ ಹಾಗೂ ಇಲಕಲ್‌ಗೆ 200ಕ್ಕೂ ಹೆಚ್ಚು ವಿದ್ಯಾರ್ಥಿಗಳು ಕಾಲೇಜುಗಳಿಗೆ ಹೋಗುತ್ತೇವೆ. ಆದರೆ, ಕಾಲೇಜು ಸಮಯಕ್ಕೆ ತೆರಳಲು ಗ್ರಾಮಕ್ಕೆ ಬಸ್ ಬರುತ್ತಿಲ್ಲ. ಬಂದ ಬಸ್ಸುಗಳಲ್ಲಿ ನಿಲ್ಲಲು ಜಾಗ ಸಹ ಇರುವುದಿಲ್ಲ. ಗ್ರಾಮದಲ್ಲೇ ಹಾದುಹೋದ ರಾಷ್ಟ್ರೀಯ ಹೆದ್ದಾರಿಯಲ್ಲಿ ಕುಷ್ಟಗಿ ಹಾಗೂ ಇಲಕಲ್ ಮಾರ್ಗವಾಗಿ ಬಸ್‌ಗಳು ಸಂಚರಿಸುತ್ತಿದ್ದರೂ ನಿಲ್ಲಿಸುತ್ತಿಲ್ಲ. ಇದರಿಂದ ಹೆದ್ದಾರಿಯಲ್ಲೇ ಬಸ್‌ಗಾಗಿ ಕಾದು ನಿಲ್ಲುವಂತಾಗಿದೆ. ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ ಎಂದ ವಿದ್ಯಾರ್ಥಿಗಳು, ಕುಷ್ಟಗಿ ಘಟಕದ ಮೂರು ಬಸ್ಸುಗಳನ್ನು ತಡೆದು ಅವುಗಳ ಮೇಲೆ ಮತ್ತು ಮುಂಭಾಗದಲ್ಲಿ ಕುಳಿತು ಆಕ್ರೋಶ ವ್ಯಕ್ತಪಡಿಸಿದರು.