ಮುನಿರಾಬಾದ್: ಸಮೀಪದ ಹೊಸಳ್ಳಿ ಬಳಿಯ ಐಆರ್‌ಬಿ ಮತ್ತು ಕೆಎಸ್‌ಆರ್‌ಪಿ ತರಬೇತಿ ಕೇಂದ್ರಗಳ ಆವರಣದಲ್ಲಿ ಹಲವು ದಿನಗಳಿಂದ ಕಾಣಿಸಿಕೊಂಡು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದ್ದ ಚಿರತೆ, ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಬಿದ್ದಿದೆ.
ತರಬೇತಿ ಕೇಂದ್ರ ಹಾಗೂ ಸುತ್ತಲಿನ ಪ್ರದೇಶದಲ್ಲಿ ಚಿರತೆ ಸಂಚಾರ ಪತ್ತೆಯಾದ ಬೆನ್ನಲ್ಲೇ ಎಚ್ಚೆತ್ತ ಅರಣ್ಯ ಇಲಾಖೆ ಅಧಿಕಾರಿಗಳು, ಕಾಸನಕಂಡಿ ಬಳಿ ಬೋನು ಅಳವಡಿಸಿದ್ದರು. ಗುರುವಾರ ಬೆಳಗ್ಗೆ 2 ವರ್ಷದ ಚಿರತೆ ಬೋನಿನಲ್ಲಿ ಸೆರೆಯಾಗಿದ್ದು, ಆರೋಗ್ಯವಾಗಿದೆ ಎಂದು ತಿಳಿಸಿದ್ದಾರೆ.
ವಿಜಯನಗರ ಜಿಲ್ಲೆಯ ಕಮಲಾಪುರದ ಅಟಲ್ ಬಿಹಾರಿ ವಾಜಪೇಯಿ ಜೈವಿಕ ಉದ್ಯಾನವನಕ್ಕೆ ರವಾನಿಸಲಾಗಿದೆ.