ಶರಣರ ಜಯಂತಿಗಳು ಅರ್ಥಪೂರ್ಣವಾಗಿ ಆಚರಿಸಿ

ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ
ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ
Published on

ಪ್ರಮುಖ ಮುಖ್ಯಾಂಶಗಳು

  • ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ
ಕೊಪ್ಪಳ: ಪ್ರತಿ ವರ್ಷದಂತೆ ಶರಣರ ಜಯಂತಿಗಳನ್ನು ಅರ್ಥಪೂರ್ಣವಾಗಿ ಆಚರಿಸಿ ಎಂದು ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಹೇಳಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಶರಣರ ಜಯಂತಿಗಳ ನಿಮಿತ್ಯ ಕರೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.
ಸವಿತಾ ಮಹರ್ಷಿ ಜಯಂತಿ ಜ. 25 ರಂದು ಮಧ್ಯಾಹ್ನ 12ಕ್ಕೆ ಮತ್ತು ಕಾಯಕ ಶರಣರ ಜಯಂತಿಯನ್ನು ಫೆ. 10 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಸರಳವಾಗಿ ಆಚರಿಸುವ ಮೂಲಕ ಶರಣರ ಭಾವಚಿತ್ರಗಳಿಗೆ ಪುಷ್ಪ ನಮನ ಸಲ್ಲಿಸಿ ಅವರಿಗೆ ಗೌರವ ನಮನ ಸಲ್ಲಿಸಲಾಗುವುದು. ಈ ಸಂದರ್ಭದಲ್ಲಿ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಸಮಾಜದ ಮುಖಂಡರು ಉಪಸ್ಥಿತರಿಬೇಕು. ಈ ಮಹನೀಯರ ಜಯಂತಿ ಕಾರ್ಯಕ್ರಮಗಳ ದಿನದಂದು ಎಲ್ಲಾ ಶಾಲಾ- ಕಾಲೇಜುಗಳಲ್ಲಿ ಅವರ ಭಾವಚಿತ್ರ ಇಟ್ಟು ಪೂಜೆ ಸಲ್ಲಿಸಬೇಕೆಂದು ಹೇಳಿದರು.
ಮಡಿವಾಳ ಮಾಚಿದೇವರ ಜಯಂತಿ ಕಾರ್ಯಕ್ರಮವು ಫೆ.16 ರಂದು ನಗರದ ಸಾಹಿತ್ಯ ಭವನದಲ್ಲಿ ಅದ್ದೂರಿಯಾಗಿ ಜರುಗಲಿದ್ದು. ಬೆಳಗ್ಗೆ 10 ಕ್ಕೆ ಗಡಿಯಾರ ವೃತ್ತದಿಂದ ಸಾಹಿತ್ಯ ಭವನದವರೆಗೆ ಮಾಡಿವಾಳ ಮಾಚಿದೇವರ ಭಾವಚಿತ್ರದ ಮೆರವಣಿಗೆ ನಡೆಯಲಿದೆ. ಇದರಲ್ಲಿ ಎಲ್ಲರೂ ಭಾಗವಹಿಸಬೇಕು. ವೇದಿಕೆ ಕಾರ್ಯಕ್ರಮ ಸಾಹಿತ್ಯ ಭವನದಲ್ಲಿ ಅಂದು ಮಧ್ಯಾಹ್ನ 12 ಗಂಟೆಗೆ ನಡೆಯಲಿದ್ದು, ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಈ ಕಾರ್ಯಕ್ರಮಕ್ಕೆ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಬೇಕೆಂದು ಸೂಚಿಸದರು.
ಕನ್ನಡ ಮತ್ತು ಸಂಸತಿ ಇಲಾಖೆ ಸಹಾಯಕ ನಿರ್ದೇಶಕ ಕರ್ಣಕುಮಾರ, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಬಸವರಾಜ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಿವಾನಂದ, ಸವಿತಾ ಸಮುದಾಯದ ಮುಖಂಡರಾದ ತುಕಾರಾಂ, ಮಾರುತಿ ಸುಗೂರ, ನಾಗರಾಜ ಕಂಪ್ಲಿ, ದೇವಪ್ಪ ಹಡಪದ, ಮಡಿವಾಳ ಸಮುದಾಯದ ಮುಖಂಡರಾದ ಕೃಷ್ಣಾ ಮಡಿವಾಳ, ರಾಮಣ್ಣ ಕುಟಗನಹಳ್ಳಿ, ಗವಿಸಿದ್ದಪ್ಪ ಮಡಿವಾಳ, ಕಿರಣ ಮಡಿವಾಳ, ಕಾಯಕ ಶರಣರ ಸಮುದಾಯದ ಮುಖಂಡರಾದ ಡಾ. ಬಿ. ಜ್ಞಾನಸುಂದರ್​, ರಾಮಣ್ಣ ಕಂದಾರಿ ಸೇರಿದಂತೆ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net