ಜಿಲ್ಲೆಯಲ್ಲಿ ಕುಡಿಯುವ ನೀರು ಪೂರೈಕೆಗೆ ಮೊದಲ ಆದ್ಯತೆ ನೀಡಿ

ಕೊಪ್ಪಳದಲ್ಲಿ ಹಮ್ಮಿಕೊಂಡ ಜಿಲ್ಲಾ ನೀರು ಮತ್ತು ನೈರ್ಮಲ್ಯ ಮಿಷನ್​ ಸಮಿತಿ ಸಭೆಯಲ್ಲಿ ಜಿಪಂ ಸಿಇಒ ವರ್ಣಿತ್​ ನೇಗಿ ಮಾತನಾಡಿದರು. ಜಿಪಂ ಡಿಎಸ್​ ಟಿ.ಕೃಷ್ಣಮೂರ್ತಿ,ಕೊಪ್ಪಳ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಕಾರ್ಯಪಾಲಕ ಅಭಿಯಂತರ ಮಹೇಶ ಶಾಸ್ತ್ರಿ, ಕೊಪ್ಪಳ ತಾಪಂ ಇಒ ದುಂಡಪ್ಪ ತುರಾದಿ ಇದ್ದರು.
ಕೊಪ್ಪಳದಲ್ಲಿ ಹಮ್ಮಿಕೊಂಡ ಜಿಲ್ಲಾ ನೀರು ಮತ್ತು ನೈರ್ಮಲ್ಯ ಮಿಷನ್​ ಸಮಿತಿ ಸಭೆಯಲ್ಲಿ ಜಿಪಂ ಸಿಇಒ ವರ್ಣಿತ್​ ನೇಗಿ ಮಾತನಾಡಿದರು. ಜಿಪಂ ಡಿಎಸ್​ ಟಿ.ಕೃಷ್ಣಮೂರ್ತಿ,ಕೊಪ್ಪಳ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಕಾರ್ಯಪಾಲಕ ಅಭಿಯಂತರ ಮಹೇಶ ಶಾಸ್ತ್ರಿ, ಕೊಪ್ಪಳ ತಾಪಂ ಇಒ ದುಂಡಪ್ಪ ತುರಾದಿ ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಸಿಇಒ ವರ್ಣಿತ್​ ನೇಗಿ ಸೂಚನೆ
  • ಡಿ.ಡಬ್ಲ್ಯೂ.ಎಸ್​.ಎಂ ಸಮಿತಿ ಸಭೆ
ಕೊಪ್ಪಳ : ಜಿಲ್ಲೆಯಲ್ಲಿ ಕುಡಿಯುವ ನೀರು ಪೂರೈಕೆಗೆ ಯಾವುದೇ ಕೊರತೆಯಾಗದಂತೆ ಮೊದಲ ಆದ್ಯತೆ ನೀಡಬೇಕು ಎಂದು ಜಿಪಂ ಸಿಇಒ ವರ್ಣಿತ್​ ನೇಗಿ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಜಿಪಂ ಸ್ಥಾಯಿ ಸಮಿತಿ ಕೊಠಡಿ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಜಿಲ್ಲಾ ನೀರು ಮತ್ತು ನೈರ್ಮಲ್ಯ ಮಿಷನ್​ ಸಮಿತಿ ಸಭೆಯಲ್ಲಿ ಮಾತನಾಡಿದರು.
ಕುಡಿಯುವ ನೀರು ಪೂರೈಕೆಗಾಗಿ ಜಿಲ್ಲೆಯಲ್ಲಿ ನಡೆಯುತ್ತಿರುವ ಎಲ್ಲಾ ಕಾಮಗಾರಿಗಳನ್ನು ಮೊಲದ ಆದ್ಯತೆ ಮೇರೆಗೆ ತ್ವರಿತವಾಗಿ ಪೂರ್ಣಗೊಳಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಬೇಕು. ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಇರುವ ಗ್ರಾಮಗಳಲ್ಲಿ ಬಾಡಿಗೆ ಆಧಾರದ ಮೇಲೆ ಖಾಸಗಿ ಕೊಳವೆ ಬಾವಿಗಳನ್ನು ತೆಗೆದುಕೊಂಡು ನೀರಿನ ಸಮಸ್ಯೆ ಇರುವ ಗ್ರಾಮಗಳಿಗೆ ನೀರು ಸರಬರಾಜು ಮಾಡಲಾಗುತ್ತಿದೆ. ಈ ಎಲ್ಲಾ ಕೊಳವೆ ಬಾವಿಗಳ ನೀರನ್ನು ಕಡ್ಡಾಯವಾಗಿ ಪರೀಕ್ಷಿಸಿದ ಬಳಿಕವೇ ನೀರು ಪೂರೈಸಬೇಕು. ಈಗಾಗಲೇ ಎಲ್ಲಾ ಗ್ರಾಂಪಂಗಳಿಗೆ ನೀರಿನ ಪರೀಕ್ಷಾ ಕಿಟ್​ಗಳನ್ನು ನೀಡಲಾಗಿದ್ದು ಸಮರ್ಪಕವಾಗಿ ನೀರನ್ನು ಪರೀೆಗೆ ಒಳಪಡಿಸಿ ಎಂದರು.
ಕುಡಿಯಲು ಯೋಗ್ಯವಿಲ್ಲದ ಬೋರ್​ವೆಲ್​ಗಳನ್ನು ಸ್ಥಗಿತಗೊಳಿಸಬೇಕು. ಅಂತಹ ಗ್ರಾಮಗಳಿಗೆ ಟ್ಯಾಂಕರ್​ ಮುಖಾಂತರವೇ ನಿರಂತರ ನೀರು ಸರಬರಾಜು ಮಾಡಲು ಕ್ರಮ ಕೈಗೊಳ್ಳಿ. ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆಗಳ ಕುರಿತು ಪ್ರತಿ ವಾರಕ್ಕೊಮ್ಮೆ ಸಭೆ ನಡೆಸಿ ಆಯಾ ತಾಪಂ ಇಒ ಹಂತದಲ್ಲಿ ಕ್ರಮ ಕೈಗೊಳ್ಳಬೇಕು. ಎಲ್ಲಾ ಗ್ರಾಮಗಳಲ್ಲಿರುವ ಓಹೆಚ್​ಟಿ ಟ್ಯಾಂಕ್​ಗಳನ್ನು ಪ್ರತಿ ತಿಂಗಳು ಸ್ವಚ್ಛ ಮಾಡಬೇಕು. ಗ್ರಾಮಗಳಿಗೆ ನೀರಿನ ಸರಬರಾಜು ಪೈಪಲೈನ್​ಗಳ ಸೋರಿಕೆ ಕಂಡಲ್ಲಿ 24 ಗಂಟೆಗಳಲ್ಲಿ ದುರಸ್ಥಿಗೊಳಿಸಿ ನೀರು ಪೂರೈಸಿ ಎಂದು ಸೂಚಿಸಿದರು.
ಜಿಪಂ ಡಿಎಸ್​ ಟಿ.ಕೃಷ್ಣಮೂರ್ತಿ,ಕೊಪ್ಪಳ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಕಾರ್ಯಪಾಲಕ ಅಭಿಯಂತರ ಮಹೇಶ ಶಾಸ್ತ್ರಿ, ಕೊಪ್ಪಳ ತಾಪಂ ಇಒ ದುಂಡಪ್ಪ ತುರಾದಿ ಜಿಲ್ಲೆಯ ಎಲ್ಲಾ ತಾಪಂ ಇಒ ಗಳು ಮತ್ತು ಎಇಇಗಳಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net