ಬಾಲ್ಯವಿವಾಹದಿಂದ ಸರ್ವತೋಮುಖ ಬೆಳವಣಿಗೆ ಕುಂಟಿತ

ಕೊಪ್ಪಳದಲ್ಲಿ ಬಾಲ್ಯವಿವಾಹ ಮುಕ್ತಿ ಜಾಗೃತಿ ರಥಕ್ಕೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಮಹಾಂತೇಶ ಎಸ್.ದರಗದ ಚಾಲನೆ ನೀಡಿದರು. ಎಡಿಸಿ ಸಿದ್ರಾಮೇಶ್ವರ, ಎಎಸ್‌ಪಿ ಹೇಮಂತ್ ಕುವಾರ, ಜಿಪಂ ಉಪ ಕಾರ್ಯದರ್ಶಿ ಟಿ.ಕೃಷ್ಣಮೂರ್ತಿ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮಹಾಂತಸ್ವಾಮಿ ಪೂಜಾರ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ವಿಠ್ಠಲ ಜಾಬಗೌಡರ, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ವಿ.ಬಿಅಂಗಡಿ ಇದ್ದರು.

Published on

ಪ್ರಮುಖ ಮುಖ್ಯಾಂಶಗಳು

  • ಬೆಳವಣಿಗೆ ಕುಂಟಿತ
  • ಬಾಲ್ಯ ವಿವಾಹ ಜಾಗೃತಿ

ಬಾಲ್ಯವಿವಾಹದಿಂದ ಸರ್ವತೋಮುಖ ಬೆಳವಣಿಗೆ ಕುಂಟಿತ

ಕೊಪ್ಪಳ: ಬಾಲ್ಯ ವಿವಾಹ ಮಕ್ಕಳ ಹಕ್ಕುಗಳ ಸ್ಪಷ್ಟ ಉಲ್ಲಂನೆಯಾಗಿದ್ದು, ಶಿಕ್ಷಾರ್ಹ ಅಪರಾಧವಾಗಿದೆ. ಇದನ್ನು ತಡೆಗಟ್ಟುವಲ್ಲಿ ಪ್ರತಿಯೊಬ್ಬ ನಾಗರಿಕನ ಪಾತ್ರವೂ ಮಹತ್ವದ್ದಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಮಹಾಂತೇಶ ಎಸ್.ದರಗದ ಹೇಳಿದರು.
ಜಿಲ್ಲಾಡಳಿತ ಭವನದ ಆವರಣದಲ್ಲಿ ಬಾಲ್ಯ ವಿವಾಹ ಮುಕ್ತ ಭಾರತ 100 ದಿನಗಳ ಅಭಿಯಾನದ ಅಂಗವಾಗಿ ಸೋಮವಾರ ಬಾಲ್ಯ ವಿವಾಹ ಮುಕ್ತಿ ಜಾಗೃತಿ ರಥಕ್ಕೆ ಚಾಲನೆ ನೀಡಿ ವಾತನಾಡಿದರು. 18 ವರ್ಷದೊಳಗಿನ ಮಕ್ಕಳಲ್ಲಿ ದೈಹಿಕ ಮತ್ತು ವಾನಸಿಕ ಬೆಳವಣಿಗೆ ತೀವ್ರವಾಗಿರುತ್ತದೆ. ಈ ಹಂತದಲ್ಲಿ ವಿವಾಹ ವಾಡುವುದು ಸರ್ವತೋಮುಖ ಬೆಳವಣಿಗೆಯ ಮೇಲೆ ಪರಿಣಾಮ ಬೀರುತ್ತದೆ.
ಮಕ್ಕಳು ಬಾಲ್ಯದ ಹಕ್ಕುಗಳನ್ನು ಅನುಭವಿಸುವ ವಾತಾವರಣ ನಿರ್ಮಿಸುವುದು ಎಲ್ಲರ ಜವಾಬ್ದಾರಿ. ಬಾಲ್ಯವಿವಾಹ ನಿಷೇಧ ಕಾಯ್ದೆ 2006 ಮತ್ತು ಕರ್ನಾಟಕ ತಿದ್ದುಪಡಿ 2016ರ ಅನ್ವಯ ಬಾಲ್ಯವಿವಾಹ ಅಪರಾಧ. ಬಾಲ್ಯವಿವಾಹ ಘಟನೆ ಗಮನಕ್ಕೆ ಬಂದಾಗ ತಡೆಯುವುದು ಎಲ್ಲರ ಆದ್ಯ ಕರ್ತವ್ಯ. ಜಿಲ್ಲಾದ್ಯಂತ ಜಾಗೃತಿ ಕಾರ್ಯಕ್ರಮಗಳ ಮೂಲಕ ಅರಿವು ಮೂಡಿಸಬೇಕು ಎಂದರು.
ಬೆಳಗಾವಿಯ ಸ್ಪಂದನ ಆಸೋಶಿಯೇಷನ್ ಕಾರ್ಯದರ್ಶಿ ವಿ.ಸುಶೀಲಾ ವಾತನಾಡಿ, ಈ ಅಭಿಯಾನ 2030ರ ವೇಳೆಗೆ ಬಾಲ್ಯವಿವಾಹ ಮುಕ್ತ ಸವಾಜ ನಿರ್ಮಿಸುವ ಗುರಿ ಹೊಂದಿದೆ ಎಂದು ತಿಳಿಸಿದರು.
ಸಹಾಯವಾಣಿ: ಬಾಲ್ಯವಿವಾಹದ ಬಗ್ಗೆ ವಾಹಿತಿ ನೀಡಲು ಅಥವಾ ಸಹಾಯಕ್ಕೆ 1098 ಅಥವಾ 112 ಸಹಾಯವಾಣಿಗೆ ಸಂಪರ್ಕಿಸಬಹುದು.
ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹೇಮಂತ್ ಕುವಾರ, ಜಿಪಂ ಉಪ ಕಾರ್ಯದರ್ಶಿ ಟಿ.ಕೃಷ್ಣಮೂರ್ತಿ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮಹಾಂತಸ್ವಾಮಿ ಪೂಜಾರ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ವಿಠ್ಠಲ ಜಾಬಗೌಡರ, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ವಿ.ಬಿ.ಅಂಗಡಿ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net