ಕೊಪ್ಪಳ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಮಹಿಳಾ ವಿವಿ ರಾಜ್ಯ ಮಟ್ಟದ ಅಂತರ್ ಕಾಲೇಜು ಕ್ರೀಡಾಕೂಟದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿನಿಯರನ್ನು ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗವು ಅಭಿನಂದಿಸಿದರು.
Published on:
Copied
Follow Us
ಪ್ರಮುಖ ಮುಖ್ಯಾಂಶಗಳು
ಕಾಲೇಜು ಸಿಬ್ಬಂದಿಗಳಿಂದ ಅಭಿನಂದನೆ
ಕೊಪ್ಪಳ: ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ವಿದ್ಯಾರ್ಥಿನಿಯರು ರಾಜ್ಯಮಟ್ಟದ ಅಂತರ್ ಕಾಲೇಜು ಕ್ರೀಡಾಕೂಟದಲ್ಲಿ ಅತ್ಯುತ್ತಮ ಪ್ರದರ್ಶನ ನೀಡುವ ಮೂಲಕ ಕಾಲೇಜಿಗೆ ಕೀರ್ತಿ ತಂದಿದ್ದಾರೆ.
ಬಳ್ಳಾರಿಯ ಅಲ್ಲಂ ಸುಮಂಗಳಮ್ಮ ಮೆಮೋರಿಯಲ್ ಮಹಿಳಾ ಕಾಲೇಜಿನಲ್ಲಿ ಫೆ. 3, 4 ರಂದು ನಡೆದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ 2025-26ನೇ ಸಾಲಿನ ಅಂತರ್ ಕಾಲೇಜು ಥ್ರೂಬಾಲ್ ಹಾಗೂ ಗುಡ್ಡಗಾಡು ಓಟದ ಸ್ಪರ್ಧೆಗಳಲ್ಲಿ ಕಾಲೇಜಿನ ತಂಡಗಳು ಗಮನಾರ್ಹ ಸಾಧನೆ ಮಾಡಿವೆ.
ಕಾಲೇಜಿನ ಥ್ರೂಬಾಲ್ ತಂಡವು ಅಮೋಘ ಆಟ ಪ್ರದರ್ಶಿಸಿ ದ್ವೀತಿಯ ಸ್ಥಾನ. ಗುಡ್ಡಗಾಡು ಓಟದ ಸ್ಪರ್ಧೆಯಲ್ಲೂ ಕಾಲೇಜಿನ ತಂಡವು ದ್ವೀತಿಯ ಸ್ಥಾನ ಪಡೆಯುವ ಮೂಲಕ. ಪಾರ್ವತಿ ಹಾಗೂ ಸರಿತಾ ಚೌಹಾಣ ಅವರು ತಮ್ಮ ಅದ್ವೀತಿಯ ಸಾಧನೆ ತೋರಿ ರಾಷ್ಟ್ರಮಟ್ಟದ ವಿವಿ ಗುಡ್ಡಗಾಡು ಓಟದ ತಂಡಕ್ಕೆ ಆಯ್ಕೆಯಾಗಿದ್ದಾರೆ.
ಈ ವಿದ್ಯಾರ್ಥಿನಿಯರು ಫೆ. 27, ರಂದು ಮಂಗಳೂರು ವಿವಿಯಲ್ಲಿ ನಡೆಯುವ ಅಖಿಲ ಭಾರತ ಅಂತರ್ ವಿಶ್ವವಿದ್ಯಾಲಯಗಳ ಗುಡ್ಡಗಾಡು ಓಟದ ಸ್ಪರ್ಧೆಯಲ್ಲಿ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯವನ್ನು ಪ್ರತಿನಿಧಿಸಲಿದ್ದಾರೆ.
ವಿದ್ಯಾರ್ಥಿನಿಯರ ಈ ಸಾಧನೆಯನ್ನು ಮೆಚ್ಚಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಗಣಪತಿ ಕೆ. ಲಮಾಣಿ, ದೈಹಿಕ ಶಿಕ್ಷಣ ಬೋಧಕರಾದ ಡಾ. ಪ್ರದಿಪ್ ಕುಮಾರ್ ಯು, ಕಾಲೇಜಿನ ಎಲ್ಲಾ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗ, ಅತಿಥಿ ಉಪನ್ಯಾಸಕರು ಹಾಗೂ ಸಹಪಾಠಿ ವಿದ್ಯಾರ್ಥಿನಿಯರು ಹಾರ್ದಿಕವಾಗಿ ಅಭಿನಂದಿಸಿದ್ದಾರೆ.