ಡೆಂಘೆ ನಿಯಂತ್ರಣಕ್ಕೆ ಸಮುದಾಯ ಸಹಭಾಗಿತ್ವ ಮುಖ್ಯ

ಕುಕನೂರಿನ ಶ್ರೀ ಜ್ಞಾನ ಕೋಚಿಂಗ್​ ಸೆಂಟರ್​ನಲ್ಲಿ ಸೋಮವಾರ ಡೆಂಘೆ ಖಾಯಿಲೆ ಜಾಗೃತಿ ಕಾರ್ಯಕ್ರಮದಲ್ಲಿ ಶಿವಾನಂದ ವ್ಹಿ. ಪೂಜಾರ ಮಾತನಾಡಿದರು.
ಕುಕನೂರಿನ ಶ್ರೀ ಜ್ಞಾನ ಕೋಚಿಂಗ್​ ಸೆಂಟರ್​ನಲ್ಲಿ ಸೋಮವಾರ ಡೆಂಘೆ ಖಾಯಿಲೆ ಜಾಗೃತಿ ಕಾರ್ಯಕ್ರಮದಲ್ಲಿ ಶಿವಾನಂದ ವ್ಹಿ. ಪೂಜಾರ ಮಾತನಾಡಿದರು.
Published on

ಪ್ರಮುಖ ಮುಖ್ಯಾಂಶಗಳು

  • ಶಿವಾನಂದ ವ್ಹಿ.ಪಿ ಅಭಿಪ್ರಾಯ
  • ಡೆಂಘೆ ಜಾಗೃತಿ ಕಾರ್ಯಕ್ರಮ
ಕೊಪ್ಪಳ ; ಡೆಂಘೆ ಈಡಿಸ್​ ಜಾತಿಯ ಸೋಂಕಿತ ಸೊಳ್ಳೆಯಿಂದ ಹರಡುತ್ತದ್ದು. ಇದು ಮಾರಕರೋಗವಾಗಿದೆ. ಡೆಂಘೆ ನಿಯಂತ್ರಣಕ್ಕಾಗಿ ಸಮುದಾಯದ ಸಹಭಾಗಿತ್ವ, ಸ್ವಚ್ಛಗೊಳಿಸಿ ಹಾಗೂ ಮುಚ್ಚಿಡಿ ಎಂಬ ಘೋಷವಾಕ್ಯದೊಂದಿಗೆ ಆಚರಿಸಲಾಗುತ್ತಿದೆ ಎಂದು ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಿವಾನಂದ ವ್ಹಿ. ಪೂಜಾರ ಹೇಳಿದರು.
ಜಿಲ್ಲೆಯ ಕುಕನೂರು ತಾಲೂಕಿನ ಶ್ರೀ ಜ್ಞಾನ ಕೋಚಿಂಗ್​ ಸೆಂಟರ್​ನಲ್ಲಿ ಸೋಮವಾರ ಡೆಂಘೆ ಖಾಯಿಲೆ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ಇದರಿಂದ ಡೆಂಘೆ ಖಾಯಿಲೆಯಿಂದ ಉಂಟಾಗುವ ಸಾವು ನೋವುಗಳ ನಿಯಂತ್ರಣ ಹಾಗೂ ಸಾರ್ವಜನಿಕರಿಗೆ ಅರಿವು ಮೂಡಿಸಲಾಗುತ್ತದೆ. ನೀರಿನಲ್ಲಿ ಸೋಂಕಿತ ಈಡಿಸ್​ ಜಾತಿಯ ಸೊಳ್ಳೆಗಳು ಮೊಟ್ಟೆಗಳನ್ನಿಟ್ಟು ಸಂತಾನಾಭಿವೃದ್ಧಿ ಮಾಡುತ್ತವೆ. ಮನುಷ್ಯರಿಗೆ ಕಚ್ಚುವುದರಿಂದ ಈ ಖಾಯಿಲೆ ಹರಡುತ್ತದೆ. ಈ ರೋಗದ ಲಕ್ಷಣಗಳು ವಿಪರಿತ ಜ್ವರ, ತಲೆನೋವು, ವಾಂತಿ, ಕಣ್ಣಿನ ಹಿಂಭಾಗದಲ್ಲಿ ನೋವು, ಮೈಮೇಲೆ ಬಿಲ್ಲೆ ಹಾಕಾರದ ಕೆಂಪು ಗಂಧೆಗಳು, ಕಪ್ಪು ಮಲವಿಸರ್ಜನೆ, ವಸಡುಗಳಲ್ಲಿ ರಕ್ತಸ್ರಾವ ಇಂತಹ ಲಕ್ಷಣಗಳಿದ್ದರೆ ತಮ್ಮ ಸಮೀಪದ ಸರ್ಕಾರಿ ಆಸ್ಪತ್ರೆಗೆ ಭೇಟಿನೀಡಿ, ರಕ್ತ ಪರೀಕ್ಷೆ ಮಾಡಿಸಿ, ಚಿಕಿತ್ಸೆ ಪಡೆದುಕೊಳ್ಳಿ ಎಂದರು.
ಜ್ವರದ ಲಕಷ್ಣವಿದ್ದರೆ ರ್ನಿಲಕ್ಷ ಮಾಡಬೇಡಿ. ಶಾಲೆಗಳಲ್ಲಿ, ಮನೆಗಳಲ್ಲಿ, ನೀರು ಶೇಖರಿಸುವ ಡ್ರಮ್​, ಬ್ಯಾರಲ್​, ಸಿಮೆಂಟ್​ ತೊಟ್ಟೆ, ಕಲ್ಲಿನದೋಣಿ ಇನ್ನಿತರ ನೀರು ಸಂಗ್ರಹ ಪರಿಕರಗಳನ್ನು ವಾರದಲ್ಲಿ 2 ಬಾರಿ ಸ್ವಚ್ಚವಾಗಿ ತೊಳೆದು. ಬಿಸಿಲಿನಲ್ಲಿ ಒಣಗಿಸಿ ಪುನ: ನೀರು ತುಂಬಬೇಕು. ನೀರಿನ ಸಲಕರಣೆಗಳಿಗೆ ಸೊಳ್ಳೆ ಹೋಗದಂತೆ ಭದ್ರವಾಗಿ ಮುಚ್ಚಳದಿಂದ ಮುಚ್ಚಿ. ಸಂಜೆ ಮನೆ ಮುಂದೆ ಬೇವಿನ ಸೊಪ್ಪಿನ ಹೊಗೆ ಹಾಕಿ, ಸೊಳ್ಳೆ ಕಡಿತದಿಂದ ದೂರವಿರಲು ವೈಯಕ್ತಿಕ ರಕ್ಷಣೆ ಮಾಡಿಕೊಳ್ಳಬೇಕು. ನೀರು ನಿಲ್ಲದಂತೆ ಎಚ್ಚರಿಕೆವಹಿಸಿ. ಆರೋಗ್ಯ ಇಲಾಖೆ ಸಿಬ್ಬಂದಿ ಮತ್ತು ಆಶಾ ಕಾರ್ಯಕರ್ತೆಯರು ತಮ್ಮ ಮನೆಗೆ ಭೇಟಿ ನೀಡಿದಾಗ ಸಹಕರಿಸಿ, ಕೈಜೋಡಿಸಬೇಕೆಂದು ತಿಳಿಸಿದರು.
ಆರೋಗ್ಯ ನಿರೀಕ್ಷಣಾಧಿಕಾರಿ ಕಾಳಪ್ಪ ಕುಂಬಾರ, ಆರ್​.ಕೆ.ಎಸ್​.ಕೆ ಆಪ್ತಸಮಾಲೋಚಕರಾದ ಕಳಕಪ್ಪ, ಕೋಚಿಂಗ್​ ಸೆಂಟರ್​ ಮುಖ್ಯಸ್ಥರಾದ ಅನ್ವರ್​ಪಾಷಾ, ರಾಮನಗೌಡ, ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net