ಜನಗಣತಿ ಜವಬ್ದಾರಿಯಿಂದ ಮಾಡಿ

ಜನ ಗಣತಿ ಅಂಗವಾಗಿ ಮಂಗಳವಾರ ಕೊಪ್ಪಳದಲ್ಲಿ ಡಿಸಿ ಡಾ.ಸುರೇಶ ಬಿ.ಇಟ್ನಾಳ ಅಧ್ಯಕ್ಷತೆಯಲ್ಲಿ ಅಧಿಕಾರಿಗಳ ಸಭೆ ನಡೆಯಿತು. ಎಡಿಸಿ ಸಿದ್ರಾಮೇಶ್ವರ, ಎಸಿ ಕ್ಯಾ.ಮಹೇಶ ಮಾಲಗಿತ್ತಿ, ಜಿಪಂ ಮುಖ್ಯ ಯೋಜನಾಧಿಕಾರಿ ಡಿ. ಮಂಜುನಾಥ, ಡಿಯುಡಿಸಿ ಪಿಡಿ ಮಂಜುನಾಥ ಗುಂಡೂರು  ಇತರ ಅಧಿಕಾರಿಗಳಿದ್ದರು.
ಜನ ಗಣತಿ ಅಂಗವಾಗಿ ಮಂಗಳವಾರ ಕೊಪ್ಪಳದಲ್ಲಿ ಡಿಸಿ ಡಾ.ಸುರೇಶ ಬಿ.ಇಟ್ನಾಳ ಅಧ್ಯಕ್ಷತೆಯಲ್ಲಿ ಅಧಿಕಾರಿಗಳ ಸಭೆ ನಡೆಯಿತು. ಎಡಿಸಿ ಸಿದ್ರಾಮೇಶ್ವರ, ಎಸಿ ಕ್ಯಾ.ಮಹೇಶ ಮಾಲಗಿತ್ತಿ, ಜಿಪಂ ಮುಖ್ಯ ಯೋಜನಾಧಿಕಾರಿ ಡಿ. ಮಂಜುನಾಥ, ಡಿಯುಡಿಸಿ ಪಿಡಿ ಮಂಜುನಾಥ ಗುಂಡೂರು ಇತರ ಅಧಿಕಾರಿಗಳಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಡಿಸಿ ಡಾ. ಸುರೇಶ ಇಟ್ನಾಳ ಸೂಚನೆ
  • ತರಬೇತಿ ಕಾರ್ಯಾಗಾರದ ಪೂರ್ವಭಾವಿ ಸಭೆ
ಕೊಪ್ಪಳ : ಭಾರತ ಜನಗಣತಿ 2027ರ ಕಾರ್ಯಕ್ಕೆ ನೇಮಿಸಲ್ಪಡುವ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ತಮ್ಮ ಕರ್ತವ್ಯವನ್ನು ಅತ್ಯಂತ ಅಚ್ಚುಕಟ್ಟಾಗಿ ಮತ್ತು ಜವಾಬ್ದಾರಿಯುತವಾಗಿ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ ಸೂಚನೆ ನೀಡಿದರು.
ನಗರದ ಡಿಸಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ ಭಾರತ ಜನಗಣತಿ 2027ರ ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಮೂರು ದಿನಗಳ ತರಬೇತಿ ಕಾರ್ಯಾಗಾರದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.
2011ರಲ್ಲಿ ಜನಗಣತಿಯು ಹಳೆಯ ಮ್ಯಾನುವೆಲ್​ ಪದ್ಧತಿಯಲ್ಲಿ ನಡೆದಿತ್ತು. ಆದರೆ, 2027ರ ಜನಗಣತಿಯು ಸಂಪೂರ್ಣವಾಗಿ ಮೊಬೈಲ್​ ಆ್ಯಪ್​ ಮೂಲಕ ನಡೆಯಲಿದೆ. ದತ್ತಾಂಶ ನಿಖರತೆ ಮತ್ತು ಪಾರದರ್ಶಕತೆ ಹೆಚ್ಚಲಿದ್ದು, ಸರ್ಕಾರದ ಸೌಲಭ್ಯಗಳನ್ನು ಜನಸಾಮಾನ್ಯರಿಗೆ ತಲುಪಿಸಲು ಸಹಕಾರಿ ಎಂದರು.
ಅಧಿಕಾರಿಗಳು ಅಗತ್ಯವಿರುವ ನಕ್ಷೆಗಳು ಮತ್ತು ನಮೂನೆಗಳನ್ನು ಮೊದಲೇ ಸಿದ್ಧಪಡಿಸಿಕೊಳ್ಳಬೇಕು. ತಾಲೂಕು ನೋಡಲ್​ ಅಧಿಕಾರಿಗಳು ತಹಶೀಲ್ದಾರರು ಮತ್ತು ಪೌರಾಯುಕ್ತರೊಂದಿಗೆ ಸಮನ್ವಯ ಸಾಧಿಸಿ ಮೇಲ್ವಿಚಾರಣೆ ನಡೆಸಬೇಕು. ಫೀಲ್ಡ್​ ಟ್ರೇನರ್​ಗಳು, ಎನುಮರೇಟರ್​ಗಳು ಮತ್ತು ಮೇಲ್ವಿಚಾರಕರ ನೇಮಕಾತಿ ಹಾಗೂ ತರಬೇತಿಯನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಬೇಕು ಎಂದು ಸೂಚಿಸಿದರು.
ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಮಾತನಾಡಿ, ಜಿಲ್ಲೆಯ ಎಲ್ಲಾ ತಾಲ್ಲೂಕುಗಳಿಗೆ ಈಗಾಗಲೇ ನೋಡಲ್​ ಅಧಿಕಾರಿಗಳನ್ನು ನೇಮಕ ಮಾಡಲಾಗಿದ್ದು, ಪ್ರತಿಯೊಂದು ಹಂತದ ಕಾರ್ಯವನ್ನೂ ಸೂಕ್ಷ$್ಮವಾಗಿ ಗಮನಿಸಲಾಗುವುದು ಎಂದರು.
ಎಸಿ ಕ್ಯಾ.ಮಹೇಶ ಮಾಲಗಿತ್ತಿ, ಜಿಪಂ ಮುಖ್ಯ ಯೋಜನಾಧಿಕಾರಿ ಡಿ. ಮಂಜುನಾಥ, ಡಿಯುಡಿಸಿ ಪಿಡಿ ಮಂಜುನಾಥ ಗುಂಡೂರು ಇತರ ಅಧಿಕಾರಿಗಳಿದ್ದರು.

ಎರಡು ಹಂತಗಳಲ್ಲಿ ಗಣತಿ

ಜನಗಣತಿ ಕಾರ್ಯವು ಪ್ರಮುಖವಾಗಿ ಎರಡು ಹಂತಗಳಲ್ಲಿ ನಡೆಯಲಿದೆ. ಮೊದಲ ಹಂತ 2026ರ ಏಪ್ರಿಲ್​ 16 ರಿಂದ ಮೇ 15 ರವರೆಗೆ ನಡೆಯಲಿದೆ. ಇದಕ್ಕೂ 15 ದಿನಗಳ ಮೊದಲು ಸಾರ್ವಜನಿಕರಿಗೆ ಸ್ವಯಂ ಗಣತಿ ಆಯ್ಕೆ ಲಭ್ಯವಿರುತ್ತದೆ. ಎರಡನೇ ಹಂತ 2027ರ ಫೆಬ್ರುವರಿಯಿಂದ ಜನಗಣತಿ ಕಾರ್ಯ ಆರಂಭವಾಗಲಿದೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net