ಜನಾರ್ದನ ರೆಡ್ಡಿ ಹತ್ಯೆಗೆ ಕಾಂಗ್ರೆಸ್ ಸಂಚು

ಬಿಜೆಪಿ ವಿವಿಧ ಮೋರ್ಚಾ ಪದಾಧಿಕಾರಿಗಳು ಗಂಗಾವತಿ ಉಪತಹಸೀಲ್ದಾರ್ ಪ್ರಕಾಶ ನಾಯ್ಕ ಅವರಿಗೆ ಸೋಮವಾರ ಸಲ್ಲಿಸಿದರು. ಕಾಡಾ ಮಾಜಿ ಅಧ್ಯಕ್ಷ ಬಿ.ಎಚ್.ಎಂ. ತಿಪ್ಪೇರುದ್ರಸ್ವಾಮಿ, ಬಿಜೆಪಿ ವಿವಿಧ ಮೋರ್ಚಾ ಪದಾಧಿಕಾರಿಗಳಾದ ಡಿ.ಕೆ. ಆಗೋಲಿ, ಮನೋಹರಗೌಡ ಹೇರೂರು, ವೀರೇಶ ಬಲ್ಕುಂದಿ, ಪಂಪಣ್ಣನಾಯಕ, ವಿರೂಪಾಕ್ಷಗೌಡ ನಾಯಕ, ನಾಗರಾಜ ಚಳಗೇರಿ, ಟಿ.ಜಿ. ಬಾಬು, ಎಚ್. ಪ್ರಸಾದ್, ಚಂದ್ರಶೇಖರ ಹೀರೂರು, ಎಂ. ಮಂಜುನಾಥ ಶ್ರೀರಾಮನಗರ ಇತರರು ಇದ್ದರು.

Published on

ಪ್ರಮುಖ ಮುಖ್ಯಾಂಶಗಳು

  • ಗಂಗಾವತಿಯಲ್ಲಿ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ
  • ಶಾಸಕ ನಾರಾ ಭರತ್ ರೆಡ್ಡಿ ಬಂಧನವಾಗಲಿ
ಗಂಗಾವತಿ: ಬಳ್ಳಾರಿಯಲ್ಲಿ ಶಾಸಕ ಜನಾರ್ದನ ರೆಡ್ಡಿ ನಿವಾಸದ ಮೇಲೆ ನಡೆದ ದಾಳಿ ಖಂಡಿಸಿ ಬಿಜೆಪಿ ವಿವಿಧ ಮೋರ್ಚಾಗಳ ಪದಾಧಿಕಾರಿಗಳು ಸೋಮವಾರ ತಾಲೂಕಾಡಳಿತ ಸೌಧದ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.
ನಗರ ಹಾಗೂ ಗ್ರಾಮೀಣ ಭಾಗದ ಕಾರ್ಯಕರ್ತರೊಂದಿಗೆ ಪ್ರತಿಭಟನೆ ನಂತರ ಉಪತಹಸೀಲ್ದಾರ್ ಪ್ರಕಾಶ ನಾಯ್ಕ ಅವರಿಗೆ ಮನವಿ ಸಲ್ಲಿಸಲಾಯಿತು.
ಬಿಜೆಪಿ ಜಿಲ್ಲಾ ಮಾಜಿ ಅಧ್ಯಕ್ಷ ಸಿಂಗನಾಳ ವಿರೂಪಾಕ್ಷಪ್ಪ ಮಾತನಾಡಿ, ಜನಾರ್ದನ ರೆಡ್ಡಿ ಅವರ ಬಳ್ಳಾರಿ ನಿವಾಸದ ಮೇಲೆ ನಡೆದ ದಾಳಿ ಖಂಡನೀಯ. ಶಾಸಕರ ಹತ್ಯೆಗೆ ಕಾಂಗ್ರೆಸ್ ಸಂಚು ನಡೆಸಿದೆ. ಬಳ್ಳಾರಿ ಶಾಸಕ ನಾರಾ ಭರತ್ ರೆಡ್ಡಿ ಕುಮ್ಮಕ್ಕಿನಿಂದ ಈ ದಾಳಿ ನಡೆದಿದೆ. ಪೆಟ್ರೋಲ್ ಬಾಂಬ್‌ಗಳನ್ನು ಆಟೋದಲ್ಲಿ ತಂದಿರುವುದು ವಿಡಿಯೋದಲ್ಲಿ ದಾಖಲಾಗಿದೆ. ಭರತ್ ರೆಡ್ಡಿ ಆಪ್ತನ ಗನ್‌ಮನ್‌ನಿಂದಲೇ ಗುಂಡಿನ ದಾಳಿ ನಡೆದಿದ್ದು, ಜನಾರ್ದನ ರೆಡ್ಡಿಯನ್ನು ಗುರಿಯಾಗಿಸಿಕೊಂಡು ಕೃತ್ಯ ಎಸಗಲಾಗಿದೆ.
ಮಾಜಿ ಸಚಿವ ಬಿ. ಶ್ರೀರಾಮುಲು, ಮಾಜಿ ಶಾಸಕ ಸೋಮಶೇಖರ ರೆಡ್ಡಿ ಹಾಗೂ ಬಿಜೆಪಿ ಕಾರ್ಯಕರ್ತರ ಮೇಲೂ ಕಾಂಗ್ರೆಸ್ ಕಾರ್ಯಕರ್ತರು ಹಲ್ಲೆಗೆ ಯತ್ನಿಸಿದ್ದು, ಕಲ್ಲು ತೂರಾಟ ನಡೆಸಿದ್ದಾರೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ. ಘಟನೆಯ ಸಂಪೂರ್ಣ ತನಿಖೆಯಾಗಬೇಕು ಹಾಗೂ ಭರತ್ ರೆಡ್ಡಿ ಸೇರಿದಂತೆ ಎಲ್ಲ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು. ಜನಾರ್ದನ ರೆಡ್ಡಿಗೆ ಭದ್ರತೆ ಒದಗಿಸಬೇಕು ಎಂದು ಒತ್ತಾಯಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net