

ಪ್ರಮುಖ ಮುಖ್ಯಾಂಶಗಳು
ಕೊಪ್ಪಳ : ರಾಜ್ಯದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಭವಿಷ್ಯದ ಚುನಾವಣೆಗಳಿಗೆ ಒಂದೆಡೆ ದಿಕ್ಸೂಚಿ, ಮತ್ತೊಂದೆಡೆ ಕಗ್ಗಂಟಾಗಿದ್ದ ಸಂಪುಟ ವಿಸ್ತರಣೆ ಕಗ್ಗಂಟು ಕೊನೆಗೂ ಬಿಡಿಸಿದೆ. ಕೊಪ್ಪಳದ ಇಬ್ಬರು ಶಾಸಕರಿಗೆ ಮಂತ್ರಿಭಾಗ್ಯ ಕರುಣಿಸುವ ಮೂಲಕ ಜಿಲ್ಲಾ ರಾಜಕಾರಣದಲ್ಲಿ ಹೊಸ ಇತಿಹಾಸ ಸೃಷ್ಟಿಗೆ ನಾಂದಿ ಹಾಡಿದೆ.
ರಾಯರಡ್ಡಿ ಕೊಪ್ಪಳ ಜಿಲ್ಲೆ, ಕುಕನೂರು ತಾಲೂಕಿನ ತಳಕಲ್ ಗ್ರಾಮದವರು. 1985ರಲ್ಲಿ ಮೊದಲ ಬಾರಿ ವಿಧಾನಸಭೆ ಪ್ರವೇಶಿಸಿದರು. ಈವರೆಗೆ ಆರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. 1996-98ದಲ್ಲಿ ಲೋಕಸಭೆ ಸದಸ್ಯರಾಗಿದ್ದರು. ದೆಹಲಿ ವಿಶೇಷ ಪ್ರತಿನಿಧಿ, ವಿರೋಧ ಪಕ್ಷ ಮುಖ್ಯ ಸಚೇತಕರಾಗಿ ಸೇವೆ ಸಲ್ಲಿಸಿದ್ದಾರೆ. 2013-18ರ ಸಿದ್ದರಾಮಯ್ಯ ಸರ್ಕಾರದ ಕೊನೇ ವರ್ಷದಲ್ಲಿ ಉನ್ನತ ಶಿಕ್ಷಣ ಸಚಿವರಾಗಿದ್ದರು. ಅದಕ್ಕೂ ಮೊದಲು ವೀರಪ್ಪ ಮೊಯ್ಲಿ ಸರ್ಕಾರದಲ್ಲಿ ವಸತಿ ಖಾತೆ ರಾಜ್ಯ ಸಚಿವರಾಗಿದ್ದರು. 2023ರಿಂದ ಸಿದ್ದರಾಮಯ್ಯ ಸಿಎಂ ಆಗಿದ್ದ ಅವಧಿಯಲ್ಲಿ ಆರ್ಥಿಕ ಸಲಹೆಗಾರರಾಗಿ ಗಮನ ಸೆಳೆದಿದ್ದಾರೆ.