ಕಾಂಗ್ರೆಸ್ ಒಳಜಗಳದಿಂದ ಅಭಿವೃದ್ಧಿ ಕುಂಠಿತ

ಯಲಬುರ್ಗಾದಲ್ಲಿ ಆಯೋಜಿಸಲಾದ ಪಂಡಿತ್ ದೀನದಯಾಳ್ ಉಪಾಧ್ಯಾಯ ಪ್ರಶಿಕ್ಷಣ ಮಹಾಭಿಯಾನ ತರಬೇತಿ ಶಿಬಿರ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಕುಷ್ಟಗಿ ಶಾಸಕ ದೊಡ್ಡನಗೌಡ ಪಾಟೀಲ್ ಮಾತನಾಡಿದರು.
ಯಲಬುರ್ಗಾದಲ್ಲಿ ಆಯೋಜಿಸಲಾದ ಪಂಡಿತ್ ದೀನದಯಾಳ್ ಉಪಾಧ್ಯಾಯ ಪ್ರಶಿಕ್ಷಣ ಮಹಾಭಿಯಾನ ತರಬೇತಿ ಶಿಬಿರ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಕುಷ್ಟಗಿ ಶಾಸಕ ದೊಡ್ಡನಗೌಡ ಪಾಟೀಲ್ ಮಾತನಾಡಿದರು.
Published on

ಪ್ರಮುಖ ಮುಖ್ಯಾಂಶಗಳು

  • ಶಾಸಕ ದೊಡ್ಡನಗೌಡ ಪಾಟೀಲ್ ಆರೋಪ
ಯಲಬುರ್ಗಾ: ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರದ ಒಳ ಕಲಹ, ಸಿಎಂ ಕುರ್ಚಿಗಾಗಿ ನಡೆಯುತ್ತಿರುವ ಪೈಪೋಟಿ ಹಾಗೂ ಆಡಳಿತ ವೈಫಲ್ಯದಿಂದ ಅಭಿವೃದ್ಧಿ ಕಾರ್ಯಗಳು ಕುಂಠಿತಗೊಂಡಿವೆ ಎಂದು ವಿಧಾನಸಭೆ ವಿಪಕ್ಷ ಮುಖ್ಯ ಸಚೇತಕ ಹಾಗೂ ಕುಷ್ಟಗಿ ಶಾಸಕ ದೊಡ್ಡನಗೌಡ ಪಾಟೀಲ್ ಆರೋಪಿಸಿದರು.
ಪಟ್ಟಣದಲ್ಲಿ ಭಾನುವಾರ ಆಯೋಜಿಸಿದ್ದ ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಪ್ರಶಿಕ್ಷಣಮಹಾ ಅಭಿಯಾನ 2026 ಮಂಡಲ ಮಟ್ಟದ ತರಬೇತಿ ಶಿಬಿರದ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜನಸಾಮಾನ್ಯರು ಸರ್ಕಾರದ ಕಾರ್ಯವೈಖರಿಯಿಂದ ಬೇಸತ್ತಿದ್ದು, ಬದಲಾವಣೆಯತ್ತ ಮುಖ ಮಾಡಿದ್ದಾರೆ. ಮುಂಬರುವ 2028ರ ವಿಧಾನಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ ರಾಜ್ಯದಲ್ಲಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ.
ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದು, ಅಭಿವೃದ್ಧಿ ವಿಚಾರದಲ್ಲಿ ಗಮನ ಹರಿಸುತ್ತಿಲ್ಲ. ಅಭಿವೃದ್ಧಿ ಕಾರ್ಯಗಳ ಕೊರತೆ ಬಗ್ಗೆ ಪ್ರಶ್ನಿಸಿದರೆ ವಿರೋಧ ಪಕ್ಷದ ಕಾರ್ಯಕರ್ತರ ಮೇಲೆ ಪ್ರಕರಣ ದಾಖಲಿಸುವುದು, ಬೆದರಿಕೆ ಹಾಕುವುದು ಸೇರಿದಂತೆ ಪ್ರಜಾಪ್ರಭುತ್ವ ವಿರೋಧಿ ನಡೆಗಳು ನಡೆಯುತ್ತಿವೆ ಎಂದು ಆರೋಪಿಸಿದರು.
ಮಾಜಿ ಸಚಿವ ಹಾಲಪ್ಪ ಆಚಾರ ಮಾತನಾಡಿ, ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಹೊರ ಜಿಲ್ಲೆಯವರ ಹೆಸರು ಸ್ಥಳೀಯ ಪಟ್ಟಿಯಲ್ಲಿ ಸೇರ್ಪಡೆಯಾಗಿದ್ದರೆ ಅವನ್ನು ಗುರುತಿಸಿ ತೆಗೆದು ಹಾಕುವುದು ಬೂತ್ ಮಟ್ಟದ ಕಾರ್ಯಕರ್ತರ ಜವಾಬ್ದಾರಿಯಾಗಿದ್ದು, ಇದು ಪಕ್ಷದ ಬಲವರ್ಧನೆಗೆ ಅಗತ್ಯವಾಗಿದೆ ಎಂದರು.
ಜಿಲ್ಲಾ ಸಂಚಾಲಕ ಕೆ. ಮಹೇಶ, ಮಾಜಿ ಸಂಸದ ಶಿವರಾಮನಗೌಡ, ಬಿಜೆಪಿ ವಕ್ತಾರ ವೀರಣ್ಣ ಹುಬ್ಬಳ್ಳಿ, ರಾಜ್ಯ ಕಾರ್ಯಕಾರಿಣಿ ಸದಸ್ಯ ಬಸವರಾಜ ರಾಜೂರು, ಮಂಡಲ ಅಧ್ಯಕ್ಷ ಮಾರುತಿ ಹೊಸಮನಿ, ಪ್ರಧಾನ ಕಾರ್ಯದರ್ಶಿ ಅಮರೇಶ ಹುಬ್ಬಳ್ಳಿ, ಅಯ್ಯನಗೌಡ ಕೆಂಚಮ್ಮನವರ, ಬಸಲಿಂಗಪ್ಪ ಭೂತೆ, ಶಿವಕುಮಾರ ನಾಗಲಾಪುರಮಠ, ಶಂಕಪ್ಪ ಸುರಪುರ, ಶಿವು ಅರಕೇರಿ, ಶಿವನಗೌಡ, ತಿಪ್ಪಣ್ಣ ವಿಶ್ವನಾಥ್, ಮರಿಬಸಪ್ಪನವರ, ಸಂತೋಷಿಮಾ ಜೋಷಿ, ಶಿವಪ್ಪ ವಾಡಿ, ದೊಡ್ಡಯ್ಯ ಗುರುವಿನ, ಕಳಕಪ್ಪ ತಳವಾರ, ಕಲ್ಲಪ್ಪ ಕರಮುಡಿ, ಬಾಪುಗೌಡ ಪಾಟೀಲ್, ಸುರೇಶ್ ಹೊಸಳ್ಳಿ, ವಿಜಯ್ ಜಕ್ಕಲಿ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net